Namma Metro: ಉದ್ಘಾಟನೆ ಕಾರ್ಯಕ್ರಮ ಇಲ್ಲ, ನಾಗಸಂದ್ರ-ಮಾದಾವರ ನಡುವೆ ಮೆಟ್ರೋ ರೈಲು ಆರಂಭ

ಬೆಂಗಳೂರು, ನವೆಂಬರ್ 06: ಉದ್ಯಾನ ನಗರಿ ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ವಿಸ್ತರಿತ ಮಾರ್ಗದಲ್ಲಿ ರೈಲು ಸಂಚಾರ ವಿಳಂಬಕ್ಕೆ ಉದ್ಘಾಟನೆ ದಿನಾಂಕವೇ ತಡೆ ಹಾಕಿತ್ತು. ಈಗ ಯಾವುದೇ ಕಾರ್ಯಕ್ರಮ ಇಲ್ಲದೇ ಪ್ರಯಾಣಿಕರ ರೈಲು ಸೇವೆಯನ್ನು ಆರಂಭಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಇದಕ್ಕೆ ಸರ್ಕಾರದ ಒಪ್ಪಿಗೆಯೂ ಸಿಕ್ಕಿದೆ. ರೈಲ್ವೆ ಸುರಕ್ಷತಾ ಆಯುಕ್ತರು ನಾಗಸಂದ್ರ-ಮಾದಾವರ ನಡುವೆ ರೈಲು ಓಡಿಸಲು ಅಕ್ಟೋಬರ್ 4ರಂದು ಒಪ್ಪಿಗೆ ಕೊಟ್ಟಿದ್ದಾರೆ. ಈಗ ರೈಲು ಸಂಚಾರಕ್ಕೆ ದಿನಾಂಕ ನಿಗದಿಯಾಗಿದೆ.

ತುಮಕೂರು ರಸ್ತೆಯಲ್ಲಿ ಬರುವ ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ-ಮಾದಾವರ ನಡುವೆ ನವೆಂಬರ್ 7ರ ಗುರುವಾರದಿಂದ ಮೆಟ್ರೋ ರೈಲುಗಳ ವಾಣಿಜ್ಯ ಸಂಚಾರ ಆರಂಭವಾಗಲಿದೆ. ಮೆಟ್ರೋ ರೈಲು ವಾಣಿಜ್ಯ ಸಂಚಾರಕ್ಕೆ ಕರ್ನಾಟಕ ಸರ್ಕಾರ, ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಯಾವುದೇ ಉದ್ಘಾಟನಾ ಕಾರ್ಯಕ್ರಮ ಇಲ್ಲದೇ ನೇರವಾಗಿ ರೈಲು ಸಂಚಾರ ಆರಂಭಿಸಲಾಗುತ್ತದೆ.

Nagasandra Madavara Namma Metro Train Service From November 7

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೆಲವು ದಿನಗಳ ಹಿಂದೆ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಮನೋಹರ್ ಲಾಲ್ ಕಟ್ಟರ್‌ಗೆ ಪತ್ರವನ್ನು ಬರೆದಿದ್ದರು. ಆದರೆ ರೈಲು ಸಂಚಾರ ಮಾತ್ರ ಆರಂಭವಾಗಿರಲಿಲ್ಲ.

ಕಾರ್ಯದರ್ಶಿಗಳ ಭೇಟಿ: ಈಗ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನಮ್ಮ ಮೆಟ್ರೋ ರೈಲುಗಳ ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ಪಡೆದಿದ್ದಾರೆ. ನವೆಂಬರ್ 6ರ ಬುಧವಾರ ಬೆಳಗ್ಗೆ 11.30 ರಿಂದ ಪ್ರಾಯೋಗಿಕ ಸಂಚಾರ ನಡೆಯಲಿದೆ. ನವೆಂಬರ್ 7ರಂದು ಬೆಳಗ್ಗೆ 5 ಗಂಟೆಗೆ ಬಿಎಂಆರ್‌ಸಿಎಲ್ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವನ್ನು ಆರಂಭಿಸಲಿದೆ.

ಅಕ್ಟೋಬರ್ 18ರಂದು ನಾಗಸಂದ್ರ-ಮಾದಾವರ ಮಾರ್ಗದಲ್ಲಿ ರೈಲು ಸಂಚಾರದ ದಿನಾಂಕ ನಿಗದಿ ಮಾಡುವಂತೆ ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಆದರೆ ದಿನಾಂಕ ನಿಗದಿಯಾಗದ ಕಾರಣ ಬಿಎಂಆರ್‌ಸಿಎಲ್ ಸಿದ್ಧವಾಗಿದ್ದರೂ ಸಹ ರೈಲು ಸಂಚಾರ ಆರಂಭವಾಗಿರಲಿಲ್ಲ.

ಈಗ ಹಿಂದೆ ನೇರಳೆ ಮಾರ್ಗದಲ್ಲಿ ಮಾಡಿದಂತೆ ಯಾವುದೇ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ಇಲ್ಲದೆಯೇ ನಾಗಸಂದ್ರ-ಮಾದಾವರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರವನ್ನು ಆರಂಭಿಸಲಾಗುತ್ತದೆ. ಇದರಿಂದಾಗಿ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ ಇದೆ.

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆ-ನಾಗಸಂದ್ರ ನಡುವೆ ಈಗಾಗಲೇ ನಮ್ಮ ಮೆಟ್ರೋ ರೈಲು ಸಂಚಾರವನ್ನು ನಡೆಸುತ್ತಿದೆ. ಬಿಎಂಆರ್‌ಸಿಎಲ್ ಈ ಮಾರ್ಗವನ್ನು ವಿಸ್ತರಣೆ ಮಾಡಿದ್ದು, ಮಾದಾವರ ತನಕ ಈಗ ಮೆಟ್ರೋ ರೈಲಿನಲ್ಲಿ ಸಂಚಾರವನ್ನು ನಡೆಸಬಹುದಾಗಿದೆ.

ನಾಗಸಂದ್ರ-ಮಾದಾವರ ನಡುವಿನ ವಿಸ್ತರಿತ ಮಾತ್ರ 3.14 ಕಿ. ಮೀ. ಇದೆ. ಇದರಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್ ನಗರ), ಮಾದವರ (ಬಿಐಇಸಿ) 3 ನಿಲ್ದಾಣಗಳಿವೆ. ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾದ ಬಳಿಕ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ಜಾಲ 77 ಕಿ. ಮೀ.ಗೆ ವಿಸ್ತರಣೆಯಾಗಲಿದೆ.

ಬಿಎಂಆರ್‌ಸಿಎಲ್ ಈ ವಿಸ್ತರಿತ ಮಾರ್ಗದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಆಗಸ್ಟ್ 12 ರಿಂದ 17ರ ತನಕ ಸಿಗ್ನಲಿಂಗ್ ಸೇರಿದಂತೆ ವಿವಿಧ ಪರೀಕ್ಷೆ, ರೈಲುಗಳ ಪ್ರಾಯೋಗಿಕ ಸಂಚಾರವನ್ನು ನಡೆಸಿತ್ತು. ಬಳಿಕ ರೈಲ್ವೆ ಸುರಕ್ಷತಾ ಆಯುಕ್ತರನ್ನು ಮಾರ್ಗದ ಪರಿಶೀಲನೆಗಾಗಿ ಆಹ್ವಾನಿಸಿತ್ತು. ಅಕ್ಟೋಬರ್ 3ರಂದು ರೈಲ್ವೆ ಸುರಕ್ಷತಾ ಆಯುಕ್ತರು ಪರಿಶೀಲನೆ ನಡೆಸಿದ್ದರು, ಅಕ್ಟೋಬರ್ 4ರಂದು ಮಾರ್ಗದಲ್ಲಿ ವಾಣಿಜ್ಯ ಸೇವೆಗೆ ಅನುಮತಿ ಕೊಟ್ಟಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+