ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣ : ವಿದ್ವತ್‌ಗೆ ಬೆದರಿಕೆ ಕರೆ
ಬೆಂಗಳೂರು, ನವೆಂಬರ್ 22 : ವಿದ್ವತ್ ಲೋಕನಾಥ್ ಮೇಲೆ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ವಿದ್ವತ್‌ಗೆ ಬೆದರಿಕೆ ಕರೆಗಳು ಬರುತ್ತಿದ್ದು, ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.
ಹಲ್ಲೆ ಪ್ರಕರಣದಲ್ಲಿ ನೀಡಿರುವ ದೂರನ್ನು ವಾಪಸ್ ಪಡೆದುಕೊಂಡು, ರಾಜಿ ಮಾಡಿಕೊಳ್ಳುವಂತೆ ವಿದ್ವತ್ ಲೋಕನಾಥ್‌ಗೆ ಶ್ರೀ ಕೃಷ್ಣ ಎಂಬುವವರು ಬೆದರಿಕೆ ಹಾಕಿದ್ದಾರೆ. ಈ ಕುರಿತು ದೂರವಾಣಿ ಕರೆ, ಸಂದೇಶ ಕಳಿಸಲಾಗಿದೆ ಎಂದು ಆರೋಪಿಸಲಾಗಿದೆ.
ಆಸ್ಟ್ರೇಲಿಯಾದಲ್ಲಿದ್ದ ವಿದ್ವತ್ ಲೋಕನಾಥ್ ಬೆಂಗಳೂರಿಗೆ ಬಂದಿದ್ದು, ಸಿಸಿಬಿ ಪೊಲೀಸರಿಗೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ದೂರು ನೀಡಿದ್ದಾರೆ. ವಿದ್ವತ್‌ಗೆ ಭದ್ರತೆ ನೀಡುವಂತೆ ಸಿಸಿಬಿ ಪೊಲೀಸರು ಸಂಜಯ ನಗರ ಪೊಲೀಸ್ ಠಾಣೆಗೆ ಸೂಚನೆ ನೀಡಿದ್ದಾರೆ.
2018ರ ಫೆಬ್ರವರಿ 17ರಂದು ಬೆಂಗಳೂರಿನ ಯುಬಿ ಸಿಟಿಯಲ್ಲಿ ವಿದ್ವತ್ ಲೋಕನಾಥ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಶ್ರೀ ಕೃಷ್ಣ ಬೆದರಿಕೆ ಹಾಕಿದ್ದಾರೆ ಎಂದು ವಿದ್ವತ್ ದೂರು ಕೊಟ್ಟಿದ್ದಾರೆ...

ಸಿಸಿಬಿಗೆ ವಿದ್ವತ್ ದೂರು
ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ವಿರುದ್ಧ ನೀಡಿರುವ ದೂರು ವಾಪಸ್ ಪಡೆದುಕೊಂಡು, ರಾಜಿ ಮಾಡಿಕೊಳ್ಳುವಂತೆ ಬೆದರಿಕೆ ಕರೆ ಬರುತ್ತಿದೆ ಎಂದು ಉದ್ಯಮಿ ಪುತ್ರ ವಿದ್ವತ್ ಲೋಕನಾಥ್ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಹಲ್ಲೆ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಶ್ರೀಕೃಷ್ಣ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಭದ್ರತೆ ನೀಡಲು ಸೂಚನೆ
ಹಲ್ಲೆ ಪ್ರಕರಣದ ಆರೋಪಿ ಶ್ರೀಕೃಷ್ಣ ಜಾಮೀನು ರದ್ದುಗೊಳಿಸುಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ವಿದ್ವತ್ ಪರ ವಕೀಲರು ಚಿಂತನೆ ನಡೆಸಿದ್ದಾರೆ. ಸಿಸಿಬಿ ಪೊಲೀಸರು ವಿದ್ವತ್‌ಗೆ ಭದ್ರತೆ ನೀಡುವಂತೆ ಸಂಜಯನಗರ ಠಾಣೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಸಿಸಿಬಿ ಪೊಲೀಸರು ವಿದ್ವತ್‌ಗೆ ಬಂದ ಕರೆಗಳನ್ನು ಪರಿಶೀಲನೆ ನಡೆಸಿದ್ದು, ಆಂಧ್ರಪ್ರದೇಶದ ಗುಂಟೂರಿನ ವ್ಯಕ್ತಿಗೆ ಸೇರಿದ ನಂಬರ್‌ನಿಂದ ಬೆದರಿಕೆ ಕರೆ ಬಂದಿದೆ ಎಂದು ಪತ್ತೆ ಹಚ್ಚಿದ್ದು ತನಿಖೆ ಆರಂಭಿಸಿದ್ದಾರೆ.

ಫರ್ಜಿ ಕೆಫೆಯಲ್ಲಿ ಹಲ್ಲೆ
2018ರ ಫೆಬ್ರವರಿ 17ರಂದು ಬೆಂಗಳೂರಿನ ಯುಬಿ ಸಿಟಿಯಲ್ಲಿನ ಫರ್ಜಿ ಕೆಫೆಯಲ್ಲಿ ವಿದ್ವತ್ ಲೋಕನಾಥ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದರು. ಈ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು, 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಮೊಹಮ್ಮದ್ ನಲಪಾಡ್ ಸೇರಿದಂತೆ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ.

ಶ್ರೀಕೃಷ್ಣ ಆರೋಪಿ
ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಶ್ರೀ ಕೃಷ್ಣ ಪ್ರಕರಣದಲ್ಲಿ 3ನೇ ಆರೋಪಿಯಾಗಿದ್ದಾನೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್












Click it and Unblock the Notifications