ಮೆಕ್ಕಾ ಯಾತ್ರೆಗೆ ಹೊರಟ ನಲಪಾಡ್, ಅನುಮತಿಗಾಗಿ ಅರ್ಜಿ
Recommended Video
ಬೆಂಗಳೂರು, ಮೇ 4: ಉದ್ಯಮಿಯೊಬ್ಬರ ಪುತ್ರನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲುವಾಸ ಅನುಭವಿಸಿ ಆಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮೆಕ್ಕಾ ಯಾತ್ರೆಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ನಲಪಾಡ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆ ಬಂದಿತ್ತು.
ದಿನದ ಕಲಾಪ ಅವಧಿಯು ಮುಗಿದ ಕಾರಣ ವಿಚಾರಣಯನ್ನು ಮೇ 8ಕ್ಕೆ ಮುಂದೂಡಿತು.ಇದಕ್ಕೂ ಮುನ್ನ ನಲಪಾಡ್ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಜರಾಗಿ, ಪ್ರಕರಣ ಸಂಬಂಧ ಅರ್ಜಿಸಾರರಿಗೆ ಹೈಕೋರ್ಟ್ ಈ ಹಿಂದೆ ಜಾಮೀನು ಮಂಜೂರು ಮಾಡಿದೆ.

ಆ ವೇಳೆ ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.
ಸದ್ಯ ಅರ್ಜಿದಾರರು ಮೆಕ್ಕಾ ಯಾತ್ರೆಗೆ ತೆರಳಲು ಬಯಸಿದ್ದಾರೆ ಅದಕ್ಕೆ ಅನುಮತಿ ನೀಡಿ ಜಾಮೀನು ಷರತ್ತು ಸಡಿಲಗೊಳಿಸಬೇಕು ಎಂದು ಮನವಿ ಮಾಡಿದರು.












Click it and Unblock the Notifications