ಎಚ್ಡಿಕೆ ಹುಟ್ಟುಹಬ್ಬದಂದು ಅಪ್ಪಾಜಿ ಕ್ಯಾಂಟೀನ್ ಆರಂಭ
ಬೆಂಗಳೂರು, ಡಿಸೆಂಬರ್ 15 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಶನಿವಾರ ಜೆಡಿಎಸ್ ಕಚೇರಿಯಲ್ಲಿ ಅಪ್ಪಾಜಿ ಕ್ಯಾಂಟೀನ್ ಆರಂಭವಾಗಲಿದೆ. ರಾಗಿ ಮುದ್ದೆಗೆ ತುಪ್ಪ ಹಾಕಿ ಕೊಡುವುದು ಕ್ಯಾಂಟೀನ್ ಉದ್ಘಾಟನೆಯ ವಿಶೇಷ ವಾಗಿದೆ.
ಡಿ.16ರ ಶನಿವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 59ನೇ ಹುಟ್ಟುಹಬ್ಬ. ಹುಟ್ಟು ಹಬ್ಬದ ಪ್ರಯುಕ್ತ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಮ್ಮ ಅಪ್ಪಾಜಿ ಕ್ಯಾಂಟೀನ್ ಆರಂಭವಾಗಲಿದೆ.

ಒನ್ ಇಂಡಿಯಾ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಡಿ.16ರಂದು ನಮ್ಮ ಅಪ್ಪಾಜಿ ಕ್ಯಾಂಟೀನ್ ಅನ್ನು ಜೆಡಿಎಸ್ ಕಚೇರಿಯಲ್ಲಿ ಆರಂಭಿಸುವುದಾಗಿ ಹೇಳಿದ್ದರು.
ಬೆಂಗಳೂರು ನಗರದಲ್ಲಿ ಉದ್ಘಾಟನೆಯಾಗುತ್ತಿರುವ 2ನೇ ನಮ್ಮ ಅಪ್ಪಾಜಿ ಕ್ಯಾಂಟೀನ್ ಇದಾಗಿದೆ. ಹನುಮಂತನಗರದಲ್ಲಿ ಮೊದಲ ಕ್ಯಾಂಟೀನ್ ದೇವೇಗೌಡರ ಹುಟ್ಟು ಹಬ್ಬದ ದಿನ ಉದ್ಘಾಟನೆಯಾಗಿತ್ತು.
ಬೆಂಗಳೂರು ನಗರ ಹೊರತು ಪಡಿಸಿ ಮಂಡ್ಯದಲ್ಲಿ ಎರಡು ಕ್ಯಾಂಟೀನ್ಗಳು ಆರಂಭವಾಗಿವೆ. '2018ರ ಜನವರಿಯಲ್ಲಿ ರಾಯಚೂರಿನಲ್ಲಿ ಕ್ಯಾಂಟೀನ್ಗಳನ್ನು ಆರಂಭಿಸಲಾಗುತ್ತದೆ' ಎಂದು ಟಿ.ಎ.ಶರವಣ ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಜೆ.ಪಿ.ಭವನದಲ್ಲಿ ಶನಿವಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಹೊರವಲಯದಲ್ಲಿ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮಗಳು
ಡಿಸೆಂಬರ್ 16ರಂದು ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ರಮಗಳು ಇಂತಿವೆ.
* ಬೆಳಗ್ಗೆ 6 ಗಂಟೆ ರಾಜರಾಜೇಶ್ವರಿ ದೇವಾಲಯಕ್ಕೆ ಭೇಟಿ
* 6.45ಕ್ಕೆ ದೇವೇಗೌಡರ ನಿವಾಸಕ್ಕೆ ಭೇಟಿ
* 7.45ಕ್ಕೆ ಆದಿ ಚುಂಚನಗಿರಿ ಮಠಕ್ಕೆ ಭೇಟಿ
* 8.45ಕ್ಕೆ ಪಕ್ಷದ ಕಚೇರಿ ಜೆ.ಪಿ.ಭವನಕ್ಕೆ ಆಗಮನ
* 9.45ಕ್ಕೆ ಜೆ.ಪಿ.ನಗರ ನಿವಾಸ ಭೇಟಿ
* 12 ಗಂಟೆ ಕುರುಕ್ಷೇತ್ರ ಸಿನಿಮಾ ಟೀಸರ್ ಬಿಡುಗಡೆ
* 3 ಗಂಟೆ ರಾಮನಗರ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು












Click it and Unblock the Notifications