ಮಾರ್ಚ್ 25ಕ್ಕೆ 'ನಮ್ಮ ಬೆಂಗಳೂರು ಪ್ರಶಸ್ತಿ' ಪ್ರದಾನ ಸಮಾರಂಭ
ಬೆಂಗಳೂರು, ಮಾರ್ಚ್ 22: ಬೆಂಗಳೂರು ನಗರದ ಸುಸ್ಥಿರ ಅಭಿವೃದ್ಧಿಗಾಗಿ ಶ್ರಮವಹಿಸಿ ದುಡಿಯುತ್ತಿರುವ ನಾನಾ ಕ್ಷೇತ್ರಗಳ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಮ್ಮ ಬೆಂಗಳೂರು ಅವಾರ್ಡ್ 2018 ಸಂಭ್ರಮ ಮತ್ತೆ ಬಂದಿದೆ.
ನಮ್ಮ ಬೆಂಗಳೂರು ಪ್ರತಿಷ್ಠಾನವು ಪ್ರತಿವರ್ಷ ಕೊಡ ಮಾಡುವ ನಮ್ಮ ಬೆಂಗಳೂರು ಅವಾರ್ಡ್ ಪ್ರದಾನ ಸಮಾರಂಭವು ಮಾರ್ಚ್ 25ರಂದು ಸಂಜೆ 4.30ಕ್ಕೆ ಆರಂಭಗೊಳ್ಳಲಿದ್ದು, ಜಯನಗರದ ಎನ್‌ಎಂಕೆಆರ್ ವಿ ಕಾಲೇಜಿನ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠದ ಅಧ್ಯಕ್ಷ ನ್ಯಾಯಮೂರ್ತಿ ಸ್ವತಂತ್ರ ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್, ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್, ಚಿತ್ರನಟಿ, ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧಾ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications