BTM ಲೇಔಟ್‌ನ 3 ಮೆಟ್ರೋ ನಿಲ್ದಾಣಗಳ ಹೆಸರು ಬದಲಾವಣೆಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ!

ಬೆಂಗಳೂರು: ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮೂರು ಮೆಟ್ರೋ ನಿಲ್ದಾಣಗಳ ಹೆಸರನ್ನು ಸ್ಥಳೀಯ ಪ್ರದೇಶಗಳ ಹೆಸರಿನ ಆಧಾರದ ಮೇಲೆ ಮರುನಾಮಕರಣ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಕೆಲವು ಮೆಟ್ರೋ ನಿಲ್ದಾಣಗಳಿಗೆ ಇಡಲಾಗಿರುವ ಹೆಸರುಗಳು ನಿಲ್ದಾಣ ಇರುವ ನಿಖರ ಸ್ಥಳವನ್ನು ಪ್ರತಿಬಿಂಬಿಸುತ್ತಿಲ್ಲ. ಇದರಿಂದ ಸಾರ್ವಜನಿಕರು ಹಾಗೂ ಪ್ರತಿನಿತ್ಯ ಮೆಟ್ರೋ ಬಳಸುವ ಪ್ರಯಾಣಿಕರಿಗೆ ನಿಲ್ದಾಣದ ಸ್ಥಳ ಗುರುತಿಸುವಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯವಾಗಿ ಜನಪ್ರಿಯವಾಗಿರುವ ಹೆಸರುಗಳು, ಪ್ರದೇಶದ ಐತಿಹಾಸಿಕ ಹಾಗೂ ಭೌಗೋಳಿಕ ಮಹತ್ವವನ್ನು ಪರಿಗಣಿಸಿ ಹೆಸರು ಬದಲಾಯಿಸುವ ಅಗತ್ಯವಿದೆ ಎಂದು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

Namma Metro 3 Metro Stations in Bengaluru s BTM Layout Set for Renaming Ramalinga Reddy Writes to BMRCL

Namma Metro: 3 ಮೆಟ್ರೋ ನಿಲ್ದಾಣಗಳಿಗೆ ಹೊಸ ಹೆಸರು

ಬಿಟಿಎಂ ಲೇಔಟ್ ಕ್ಷೇತ್ರದ ವ್ಯಾಪ್ತಿಯ ಮೂರು ಮೆಟ್ರೋ ನಿಲ್ದಾಣಗಳ ಹೆಸರುಗಳನ್ನು ಈ ಕೆಳಗಿನಂತೆ ಬದಲಾಯಿಸುವಂತೆ ರಾಮಲಿಂಗಾರೆಡ್ಡಿ ಅವರು ಪ್ರಸ್ತಾಪಿಸಿದ್ದಾರೆ. ಜೆ.ಪಿ. ನಗರ 4ನೇ ಹಂತ ಮೆಟ್ರೋ ನಿಲ್ದಾಣ‌ಕ್ಕೆ ಎನ್.ಎಸ್. ಪಾಳ್ಯ ಮೆಟ್ರೋ ನಿಲ್ದಾಣ, ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಎಸ್.ಜಿ. ಪಾಳ್ಯ ಮೆಟ್ರೋ ನಿಲ್ದಾಣ ಹಾಗೂ ಡೈರಿ ವೃತ್ತ ಮೆಟ್ರೋ ನಿಲ್ದಾಣಕ್ಕೆ ಲಕ್ಕಸಂದ್ರ ಮೆಟ್ರೋ ನಿಲ್ದಾಣ ಎಂದು ಹೆಸರು ಬದಲಾವಣೆಗೆ ಪತ್ರದ ಮೂಲಕ ತಿಳಿಸಿದ್ದಾರೆ.

Namma Metro: ಸ್ಥಳೀಯ ಹೆಸರುಗಳಿಗೆ ಆದ್ಯತೆ

ಮೆಟ್ರೋ ನಿಲ್ದಾಣಗಳ ಹೆಸರನ್ನು ಅಂತಿಮಗೊಳಿಸುವ ಸಂದರ್ಭದಲ್ಲಿ ನಿಲ್ದಾಣ ಇರುವ ಪ್ರದೇಶದ ಪ್ರಚಲಿತ ಹೆಸರು, ಸ್ಥಳೀಯರಿಗೆ ಹೆಚ್ಚು ಪರಿಚಿತವಾಗಿರುವ ಹೆಸರು ಹಾಗೂ ಆ ಪ್ರದೇಶದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಪರಿಗಣಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ. ಅಲ್ಲದೆ, ಪ್ರಯಾಣಿಕರು ನಿಲ್ದಾಣವನ್ನು ಸುಲಭವಾಗಿ ಗುರುತಿಸಲು ಅನುಕೂಲವಾಗುವ ರೀತಿಯಲ್ಲಿ ಹೆಸರು ಇರಬೇಕು ಎಂಬುದನ್ನೂ ಅವರು ಒತ್ತಿ ಹೇಳಿದ್ದಾರೆ.

ಸಾರ್ವಜನಿಕರ ಅಭಿಪ್ರಾಯ ಪರಿಗಣಿಸಲು ಮನವಿ

ಹೆಸರು ಬದಲಾವಣೆ ಮಾಡುವ ಮುನ್ನ ಸಂಬಂಧಪಟ್ಟ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡರ ಅಭಿಪ್ರಾಯಗಳನ್ನು ಪಡೆಯಬೇಕು ಎಂದು ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ಅಭಿಪ್ರಾಯಗಳನ್ನು ಪರಿಗಣಿಸಿ, ಮೇಲಿನ ಮೂರು ಮೆಟ್ರೋ ನಿಲ್ದಾಣಗಳಿಗೆ ಸೂಚಿಸಿರುವ ಹೊಸ ಹೆಸರುಗಳನ್ನು ಅಳವಡಿಸುವ ಕುರಿತು ಮುಂದಿನ ಅಗತ್ಯ ಕ್ರಮ ಕೈಗೊಳ್ಳುವಂತೆ BMRCLಗೆ ಮನವಿ ಮಾಡಿದ್ದಾರೆ.

ಈ ಪ್ರಸ್ತಾವನೆ ಜಾರಿಯಾದರೆ, ಜೆ.ಪಿ. ನಗರ 4ನೇ ಹಂತ, ತಾವರೆಕೆರೆ ಹಾಗೂ ಡೈರಿ ವೃತ್ತ ಎಂಬ ಹೆಸರಿನ ಬದಲಿಗೆ ಕ್ರಮವಾಗಿ ಎನ್.ಎಸ್. ಪಾಳ್ಯ, ಎಸ್.ಜಿ. ಪಾಳ್ಯ ಹಾಗೂ ಲಕ್ಕಸಂದ್ರ ಎಂಬ ಹೆಸರುಗಳು ಬಳಕೆಗೆ ಬರಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+