Namma Metro: ನಮ್ಮ ಮೆಟ್ರೋದಲ್ಲಿ ಮಾಸಿಕ ₹30,000 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ, ವಿವರ ಇಲ್ಲಿದೆ

Namma Metro: ಬೆಂಗಳೂರಿನ ಜನರ ಜೀವನಾಡಿ ಸಾರಿಗೆಯಲ್ಲೊಂದಾದ ನಮ್ಮ ಮಟ್ರೋ ಆಗಾಗ ಉದ್ಯೋಗವಕಾಶಗಳನ್ನು ಕಲ್ಪಿಸುತ್ತಲೇ ಇರುತ್ತದೆ. ಹಾಗೆಯೇ ಇದೀಗ ಮಾಸಿಕ 30,000 ರೂಪಾಯಿ ವೇತನದ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ವಿದ್ಯಾರ್ಹತೆ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ (ಬಿಎಂಆರ್‌ಸಿಎಲ್‌) ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನಾಂಕ ಸೆಪ್ಟೆಂಬರ್‌ 9, 2024 ಆಗಿದೆ.

Namma Metro Application Invitation for post of 30 000 monthly salary know details

ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದೆ. ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ/ಸುಬೇದಾರ್ ಮೇಜರ್/ಸುಬೇದಾರ್/ಮಾಸ್ಟರ್ ಚೀಫ್ ಪೆಟ್ಟಿ, ಆಫೀಸರ್/ಮಾಸ್ಟರ್ ವಾರಂಟ್ ಆಫೀಸರ್/ವಾರಂಟ್ ಆಫೀಸರ್ ಅಥವಾ ತತ್ಸಮಾನ, ರಕ್ಷಣಾ ಸೇವೆಯಲ್ಲಿ ಇದ್ದವರು, ಇನ್ಸ್‌ಪೆಕ್ಟರ್‌/ಸಬ್ ಇನ್ಸ್‌ಪೆಕ್ಟರ್‌/ಎಎಸ್‌ಐ ಅಥವಾ ತತ್ಸಮಾನ ಶ್ರೇಣಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.

ಗರಿಷ್ಠ ವಯೋಮಿತಿ 62 ವರ್ಷ ಆಗಿದ್ದು, ಇದು ಗುತ್ತಿಗೆ ಆಧಾರಿತ ಉದ್ಯೋಗ ಆಗಿದೆ. 60 ವರ್ಷಕ್ಕಿಂತ ಕೆಳಗಿರುವವರನ್ನು 3 ವರ್ಷಕ್ಕೆ ಮತ್ತು 60 ವರ್ಷಕ್ಕಿಂತ ಮೇಲಿರುವವರನ್ನು 1 ವರ್ಷಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ನಿರ್ವಹಿಸುವ ರೀತಿಯನ್ನು ನೋಡಿಕೊಂಡು ಗುತ್ತಿಗೆ ಮುಂದುವರೆಸುವ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದೆ.

ದೈಹಿಕ ಪರೀಕ್ಷೆ, ಅರ್ಹತೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ 60 ವರ್ಷದೊಳಗಿನವರಿಗೆ 32,950 ರೂಪಾಯಿ ಮತ್ತು 60 ವರ್ಷಕ್ಕಿನ ಹೆಚ್ಚಿನ ವಯೋಮಿತಿಯವರಿಗೆ 30,000 ರೂಪಾಯಿ ಮಾಸಿಕ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

* BMRCL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.
* ಅರ್ಜಿ ಸಲ್ಲಿಸಲು ಇಲ್ಲಿ projectrecruit.bmrc.co.inಗೆ ಭೇಟಿ ನೀಡಿ, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಇಲ್ಲಿ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
* General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bengaluru - 560027.
* ನಿಮ್ಮ ಅಪ್ಲಿಕೇಷನ್ ಸ್ಪೀಡ್‌ ಪೋಸ್ಟ್‌ /ಕೊರಿಯರ್‌ ಮೂಲಕ ಕಳುಹಿಸಬೇಕು. ಅರ್ಜಿ ಲಕೋಟೆಯ ಮೇಲ್ಭಾಗದಲ್ಲಿ "APPLICATION FOR THE POST OF ASSISTANT SECURITY OFFICER" ಎಂದು ನಮೂದಿಸುವುದನ್ನು ಮರೆಯದಿರಿ.
* ಹೆಚ್ಚಿನ ವಿವರಗಳಿಗಾಗಿ ಅಧಿಕೃತ ವೆಬ್‌ಸೈಟ್‌ english.bmrc.co.inಗೆ ಭೇಟಿ ನೀಡಿ ಅಥವಾ ಇಮೇಲ್‌ [email protected]ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+