Namma Metro: ನೇರಳೆ ಮಾರ್ಗದಲ್ಲಿ ಓಡಲಿವೆ ಹೆಚ್ಚುವರಿ ರೈಲುಗಳು- ಯಾವಾಗಿಂದ, ಯಾವ ನಿಲ್ದಾಣಗಳ ನಡುವೆ ತಿಳಿಯಿರಿ

ಬೆಂಗಳೂರು, ಆಗಸ್ಟ್‌ 31: ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳನ್ನು ಓಡಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ( ಬಿಎಂಆರ್‌ಸಿಎಲ್‌ ) ತೀರ್ಮಾನಿಸಿದೆ. ವಾರದ ದಿನಗಳಲ್ಲಿ ನೇರಳೆ ಮಾರ್ಗವು ಜನದಟ್ಟಣೆಯಿಂದ ಕೂಡಿರುತ್ತದೆ. ಇದನ್ನು ತಪ್ಪಿಸಲು ಹೆಚ್ಚುವರಿ ರೈಲುಗಳನ್ನು ಓಡಿಸುವುದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.

ಈ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳ ಸಂಚಾರದ ಪ್ರಾಯೋಗಿಕ ಚಾಲನೆಯಾಗಿದೆ. ನೇರಳೆ ಮಾರ್ಗ ಅಷ್ಟೇ ಅಲ್ಲದೇ ಇತರ ಮಾರ್ಗಗಳಲ್ಲಿಯೂ ಹೆಚ್ಚುವರಿ ರೈಲುಗಳನ್ನು ಪರಿಚಯಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

Namma Metro: Bengaluru metro to run additional trains on Purple line from September 1. More details

ಮಹಾತ್ಮಗಾಂಧಿ ರಸ್ತೆ ನಿಲ್ದಾಣ ಮತ್ತು ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 1 ರಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ( ಮೆಜೆಸ್ಟಿಕ್ ) ಮತ್ತು ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗಿನ ಜಾವದ ಸಮಯದಲ್ಲಿ ಭಾರೀ ಜನದಟ್ಟಣೆ ಉಂಟಾಗುತ್ತದೆ. ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಿಎಂಆರ್‌ಸಿಎಲ್ ವಾರದ ದಿನಗಳಲ್ಲಿ (ಸೋಮವಾರದಿಂದ ಶುಕ್ರವಾರದವರೆಗೆ) ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹೆಚ್ಚುವರಿ ಟ್ರಿಪ್‌ಗಳನ್ನು ನೇರಳೆ ಮಾರ್ಗದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಮಾಡಲಾಗುತ್ತಿದೆ ಎಂದು ಅದು ಹೇಳಿದೆ.

ಈ ಹೆಚ್ಚುವರಿ ರೈಲು ಸೇವೆಗಳು ಎಂಜಿ ರಸ್ತೆ ನಿಲ್ದಾಣದ ವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೈಯಪ್ಪನಹಳ್ಳಿ ವರೆಗೆ ಪ್ರಯಾಣಿಸಲು ಬಯಸುವ ಪ್ರಯಾಣಿಕರು ಎಂಜಿ ರಸ್ತೆ ನಿಲ್ದಾಣದಿಂದ ಮತ್ತೊಂದು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬೇಕಾಗುತ್ತದೆ ಎಂದು ತಿಳಿದುಬಂದಿದೆ.

ಮಹಾತ್ಮ ಗಾಂಧಿ ರಸ್ತೆಯಿಂದ ಬೈಯಪ್ಪನಹಳ್ಳಿ ಕಡೆಗೆ ಪ್ರಯಾಣಿಸಲು ಬಯಸುವವರು ಮಹಾತ್ಮಾ ಗಾಂಧಿ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಇಳಿದು ನಂತರದ ರೈಲನ್ನು ಹತ್ತಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೋ ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ನೇರಳೆ ಮಾರ್ಗವು ಪೀಕ್ ಅವರ್‌ಗಳಲ್ಲಿ ಭಾರಿ ಜನಸಂದಣಿಯಿಂದ ಕೂಡಿರುತ್ತದೆ. ಇದಕ್ಕೆ ಪರಿಹಾರವನ್ನು ಸೂಚಿಸುವಂತೆ ಅನೇಕ ಪ್ರಯಾಣಿಕರು ಬಿಎಂಆರ್‌ಸಿಎಲ್‌ಗೆ ವಿನಂತಿಸಿದ್ದಾರೆ.

ನೇರಳೆ ಮಾರ್ಗದ 2 ಕಿಲೋಮೀಟರ್‌ನ ಬೈಯಪ್ಪನಹಳ್ಳಿ-ಕೆಆರ್ ಪುರಂ ಸ್ಟ್ರೆಚ್ ಸೆಪ್ಟೆಂಬರ್ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧವಾಗುತ್ತಿದೆ. ಇದರೊಂದಿಗೆ ಸಂಪೂರ್ಣ ನೇರಳೆ ಮಾರ್ಗವು 43 ಕಿಲೋಮೀಟರ್ ದೂರವನ್ನು ಒಳಗೊಳ್ಳುತ್ತದೆ. ಪೂರ್ವ ಬೆಂಗಳೂರನ್ನು ಮಧ್ಯ ಮತ್ತು ದಕ್ಷಿಣ ಬೆಂಗಳೂರಿನ ಭಾಗಗಳಿಗೆ ಈ ಮಾರ್ಗವು ಸಂಪರ್ಕಿಸುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+