Namma Metro: ಬೆಂಗಳೂರಿನ ಈ ಮಾರ್ಗದಲ್ಲಿ ನವೆಂಬರ್ 11ರಿಂದ 30 ದಿನ ವಾಹನಗಳ ಸಂಚಾರಕ್ಕೆ ನಿರ್ಬಂಧ
Namma Metro: ಬೆಂಗಳೂರಿನ ಈ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನೆಲೆ ನಾಳೆ ಅಂದರೆ ನವೆಂಬರ್ 11ರಿಂದ 30 ದಿನಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹಾಗಾದರೆ ಯಾವ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಹಾಗೂ ಪರ್ಯಾಯ ಮಾರ್ಗಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಶಿವಾಜಿ ನಗರದ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಬಿಎಂಆರ್‌ಸಿಲ್ ಮೆಟ್ರೋ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ 30 ದಿನಗಳ ಕಾಲ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಕಾಮಗಾರಿ ಹಿನ್ನೆಲೆ ಸಂಚಾರ ನಿಷೇಧ ಮಾಡಿರುವ ಹಿನ್ನೆಲೆ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿ ಪ್ರಕಟಣೆ ಹೊರಡಿಸಿದ್ದಾರೆ. ಬಾಳೆಕುಂದ್ರಿ ಜಂಕ್ಷನ್‌ನಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿ ನಗರದ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಬಿಎಂಟಿಸಿ ಬಸ್‌ಗಳು ಹಾಗೂ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.
ಪರ್ಯಾಯ ಮಾರ್ಗಗಳ ವಿವರ: ಬಾಳೆಕುಂದ್ರಿ ಜಂಕ್ಷನ್‌ನಿಂದ ಶಿವಾಜಿ ನಗರದ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಬಸ್ ಮತ್ತು ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆ ಮೂಲಕ ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿ ನಗರ ಬಸ್ ನಿಲ್ದಾಣಕ್ಕೆ ಆಗಮಿಸಬೇಕು.
ಶಿವಾಜಿ ರಸ್ತೆಯಿಂದ ಶಿವಾಜಿ ನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ವಾಹನಗಳು ಶಿವಾಜಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು, ವೆಂಕಟಸ್ವಾಮಿ ನಾಯ್ಡು ರಸ್ತೆ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ಗೆ ಬಂದು ಎಡ ತಿರುವು ಪಡೆದು ಶಿವಾಜಿ ನಗರ ಬಸ್ ನಿಲ್ದಾಣಕ್ಕೆ ಆಗಮಿಸಬಹುದು ಎಂದು ಸೂಚನಡ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನವೆಂಬರ್ 11ರಿಂದ ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ನಡುವಿನ ರಸ್ತೆಯ ಒಂದು ಬದಿಯಲ್ಲಿ ಮುಂದಿನ 30 ದಿನಗಳವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತದೆ. ಈ ಮಾರ್ಗದಲ್ಲಿ ಸಂಚಾರ ಬಂದ್ ಆಗಿರುವ ಹಿನ್ನೆಲೆ ನಿತ್ಯ ಪ್ರಯಾಣಿಸುವ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಸಮಸ್ಯೆ ಎದುರಿಸಬೇಕಿದ್ದು, ಬೆಂಗಳೂರು ನಗರದ ಮಧ್ಯ ಭಾಗದಲ್ಲಿರುವ ಪ್ರಮುಖ ಮಾರ್ಗದ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications