Namma Metro Big Shock: 2025ರ ಹೊಸವರ್ಷದಿಂದ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಬಿಗ್ ಶಾಕ್
Bengaluru Namma Metro: ಬೆಂಗಳೂರಿನ ಜೀವನಾಡಿ ಸಾರಿಗೆಗಳಲ್ಲಿ ನಮ್ಮ ಮೆಟ್ರೋ ಕೂಡ ಒಂದಾಗಿದೆ. ಆಗಾಗ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಗುಡ್ ನ್ಯೂಸ್ ನೀಡುತ್ತಲೇ ಇರುತ್ತದೆ. ಆದರೆ ಇದೀಗ 2025ರ ಹೊಸವರ್ಷದಿಂದಲೇ ಟಿಕೆಟ್ ದರ ಏರಿಕೆ ಮಾಡುವ ಸಾಧ್ಯತೆಯಿದೆ ಎನ್ನುವ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಬಹುತೇಕ ಮಂದಿ ಟ್ರಾಫಿಕ್ ಜಂಜಾಟ ತಪ್ಪಿಸಿಕೊಳ್ಳಲು ಮೆಟ್ರೋವನ್ನೇ ಅವಲಂಬನೆ ಮಾಡಿದ್ದಾರೆ. ಈ ಮೂಲಕ ಪ್ರತಿನಿತ್ಯವೂ ಲಕ್ಷಾಂತರ ಪ್ರಯಾಣಿಕರು ಮೆಟ್ರೋದಲ್ಲೇ ಪ್ರಯಾಣ ಮಾಡುತ್ತಾರೆ. ಹೀಗೆ ಪ್ರಯಾಣಿಕರ ದಟ್ಟಣೆ ನಿಯಂತ್ರಣ ಮಾಡಲು ಹಲವು ಹೊಸ ಯೋಜನೆಗಳನ್ನು ಸಹ ಬಿಎಂಆರ್‌ಸಿಎಲ್ ತರಲು ತಂದಿದೆ. ಆದರೆ ಇದೀಗ ಟಿಕೆಟ್ ಬೆಲೆ ಏರಿಕೆಗೆ ಮುಂದಾಗಿದ್ದು, ಈ ನಿಯಮ ಜಾರಿಯಾದ್ರೆ, ಪ್ರಯಾಣಿಕರಿಗೆ ಹೊರೆಯಾದಂತಾಗಲಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಹೊಸ ವರ್ಷದಿಂದ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಕಾರ್ಯಾಚರಣೆ ವೆಚ್ಚ ಅಧಿಕ ಹಿನ್ನೆಲೆ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಸಲ್ಲಿಕೆ ಮಾಡಿದೆ ಎಂದು ತಿಳಿದುಬಂದಿದೆ.
ಮೆಟ್ರೋ ಟಿಕೆಟ್ ದರ ಶೇಕಡ 15ರಷ್ಟು ಟಿಕೆಟ್ ದರ ಹೆಚ್ಚಳ ಮಾಡಲು ನಮ್ಮ ಮೆಟ್ರೋ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ದತೆ ಮಾಡಿಕೊಂಡಿದೆ. ಒಂದು ವೇಳೆ ಸರ್ಕಾರ ಒಪ್ಪಿಗೆ ನೀಡಿದರೆ, ಜನವರಿಯಿಂದಲೇ ದರ ಹೆಚ್ಚಳ ಆಗುವ ಸಾಧ್ಯತೆಯಿದೆ. ನೇರಳೆ ಹಾಗೂ ಹಸಿರು ಮಾರ್ಗದ ಮೆಟ್ರೋ ಪ್ರಯಾಣ ದುಬಾರಿ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕಾಮಗಾರಿಗೆ ಸಂಪುಟ ಒಪ್ಪಿಗೆ: ಬೆಂಗಳೂರಿನ ಜೀನವಾಡಿ ಬಹುತೇಕ ಮಂದಿ ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಮೆಟ್ರೋವನ್ನೇ ಅಲಂಬಿಸಿದ್ದಾರೆ. ಈ ಮೂಲಕ ಮೆಟ್ರೋ ದಿನದಿಂದ ದಿನಕ್ಕೆ ಭಾರೀ ಜನಮನ್ನಣೆ ಪಡೆಯುತ್ತಿದೆ. ಮತ್ತೊಂದೆಡೆ ಪ್ರಯಾಣಿಕರ ಬೇಡಿಕೆ ಮೇರೆಗೆ ಮೆಟ್ರೋ ಜಾಲ ಇನ್ನೂ ವಿಸ್ತರಣೆಯಾಗುತ್ತಲಿದೆ. ಹಾಗೆಯೇ ಇದೀಗ ಈ ಮಾರ್ಗದ ಮೆಟ್ರೋ ಕಾಮಗಾರಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಮೆಟ್ರೋ ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಸರ್ಜಾಪುರ-ಹೆಬ್ಬಾಳದವರೆಗೆ (ಕೆಂಪು ಮಾರ್ಗ) ಉದ್ದೇಶಿಸಿರುವ 36.59 ಕಿಲೋ ಮೀಟರ್ ಉದ್ದದ ಮೆಟ್ರೋ ಕಾಮಗಾರಿ ಯೋಜನಾ ಪೂರ್ವ ಸಿದ್ಧತೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸರ್ಜಾಪುರ-ಹೆಬ್ಬಾಳದವರೆಗೆ 36.59ಕಿ.ಮೀ ಉದ್ದದ ಮೆಟ್ರೋ ಮಾರ್ಗವನ್ನು 28,405 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. 17 ಮೆಟ್ರೋ ನಿಲ್ದಾಣ ಒಳಗೊಂಡ 22.14 ಕಿ.ಮೀ. ಎಲಿವೇಟೆಡ್ ಮಾರ್ಗ ಹಾಗೂ 11 ನಿಲ್ದಾಣ ಒಳಗೊಂಡ 14.45 ಕಿ.ಮೀ ಸುರಂಗ ಮಾರ್ಗದ ಕಾಮಗಾರಿ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೆಂಪು ಮಾರ್ಗದ ಪ್ರತಿ ಕಿಲೋ ಮೀಟರ್ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 776 ಕೋಟಿ ರೂಪಾಯಿ ವೆಚ್ಚ ಆಗಲಿದೆ. ಈ ಹಂತ ಪೂರ್ಣ ಆದರೆ 258 ಕಿಲೋ ಮೀಟರ್ ಮೆಟ್ರೋ ಮಾರ್ಗ ಸಿದ್ಧವಾಗಲಿದೆ. ಸಂಪುಟದ ಅನುಮೋದನೆ ಪಡೆದ ಈ ಯೋಜನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಆಗಲಿದೆ. ಮುಂದಿನ ಒಂದು ವರ್ಷದೊಳಗೆ ಕೇಂದ್ರದ ಅನುಮೋದನೆ ಸಿಗುವ ಸಾಧ್ಯತೆಯಿದೆ. 2026ರಲ್ಲಿ ಇದರ ಕಾಮಗಾರಿ ಆರಂಭ ಆಗಲಿದ್ದು, 2031ಕ್ಕೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.












Click it and Unblock the Notifications