ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮ ಮೆಟ್ರೋದಲ್ಲಿ ಮತ್ತೆ ಟೋಕನ್ ವ್ಯವಸ್ಥೆ ಜಾರಿ

|
Google Oneindia Kannada News

ಬೆಂಗಳೂರು, ಜೂನ್ 30: ನಮ್ಮ ಮೆಟ್ರೋದಲ್ಲಿ ಮತ್ತೆ ಟೋಕನ್ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

Recommended Video

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ!! | Oneindia Kannada

ಕಳೆದ ಒಂದೂವರೆ ವರ್ಷದಿಂದ ನಮ್ಮ ಮೆಟ್ರೋದಲ್ಲಿ ಟೋಕನ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿದ್ದು, ಕೇವಲ ಸ್ಮಾರ್ಟ್‌ಕಾರ್ಡ್ ಹೊಂದಿರುವವರು ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು.

ಲಾಕ್‌ಡೌನ್ ಸಂದರ್ಭದಲ್ಲಿ ನಮ್ಮ ಮೆಟ್ರೋ ಅನುಭವಿಸಿದ ನಷ್ಟವೆಷ್ಟು?ಲಾಕ್‌ಡೌನ್ ಸಂದರ್ಭದಲ್ಲಿ ನಮ್ಮ ಮೆಟ್ರೋ ಅನುಭವಿಸಿದ ನಷ್ಟವೆಷ್ಟು?

ಆದರೆ ಈ ಕ್ರಮದಿಂದಾಗಿ ನಮ್ಮ ಮೆಟ್ರೋ ಆದಾಯಕ್ಕೆ ಹೊಡೆತ ಬಿದ್ದಿರುವ ಕಾರಣ ಟೋಕನ್ ವ್ಯವಸ್ಥೆ ಮತ್ತೆ ಜಾರಿಗೊಳಿಸಲು ನಿರ್ಧರಿಸಲಾಗಿದೆ.

Namma Metro : BMRCL Plans to Issue Metro Rail Token Service Soon

ಕೊರೊನಾ ಮೊದಲ ಲಾಕ್‌ಡೌನ್ ಬಳಿಕ ಮೆಟ್ರೋ ಸಂಚಾರ ಆರಂಭವಾದಾಗ ಟೋಕನ್ ವ್ಯವಸ್ಥೆ ಜಾರಿ ಮಾಡಿದರೆ ಹೆಚ್ಚು ಮಂದಿ ಸರತಿಯಲ್ಲಿ ನಿಲ್ಲಬೇಕಾಗುತ್ತದೆ ಇದರಿಂದ ಕೊರೊನಾ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ಈ ವ್ಯವಸ್ಥೆಯನ್ನು ನಿಲ್ಲಿಸಲಾಗಿತ್ತು.

ಆದರೆ ಈಗ ಮತ್ತದೇ ವ್ಯವಸ್ಥೆಯ ಮೊರೆ ಹೋಗಲಾಗಿದೆ. ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು ಬಿಎಂಆರ್‌ಸಿಎಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.

ಕೊವಿಡ್ ಪೂರ್ವದಲ್ಲಿ ನಿತ್ಯ 5 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಆದ್ರೆ 2021ರ ಮಾರ್ಚ್, ಏಪ್ರಿಲ್ನಲ್ಲಿ ಸರಾಸರಿ 1.5 ಲಕ್ಷ ಜನ ಮಾತ್ರ ಪ್ರಯಾಣಿಸಿದ್ದಾರೆ. ನಿನ್ನೆ ಕೇವಲ 59 ಸಾವಿರ ಜನರಷ್ಟೇ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣಿಕರ ಸಂಖ್ಯೆ ಕುಸಿತಕ್ಕೆ 'ಸ್ಮಾರ್ಟ್ ಕಾರ್ಡ್' ಕಾರಣವಾಗುತ್ತಿದೆ ಹೀಗಾಗಿ ಸದ್ಯದಲ್ಲೇ ಟೋಕನ್ ವ್ಯವಸ್ಥೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಕೊವಿಡ್ ಪೂರ್ವದಲ್ಲಿ ಶೇ40% ಪ್ರಯಾಣಿಕರು ಟೋಕನ್ ಬಳಸಿಯೇ ಪ್ರಯಾಣಿಸುತ್ತಿದ್ರು. ಸದ್ಯ ಟೋಕನ್ ಇಲ್ಲದೆ ಇರುವ ಕಾರಣ ಸ್ಮಾರ್ಟ್ ಕಾರ್ಡ್ಗೆ 150 ರೂಪಾಯಿ ನೀಡಿ ಪ್ರಯಾಣಿಸಬೇಕಿದೆ. ಹೀಗಾಗಿ ಬೆಂಗಳೂರಿಗೆ ಬಂದು ಹೋಗುವ ಪ್ರಯಾಣಿಕರು ಮೆಟ್ರೋದತ್ತ ಸುಳಿಯುತ್ತಿಲ್ಲ. ಸದ್ಯ ಮೆಟ್ರೋದಲ್ಲಿ 50% ರಷ್ಟು ಜನರು ಸಂಚರಿಸಲು ಮಾತ್ರ ಅವಕಾಶ ನೀಡಲಾಗಿದೆ. ಮೂರನೇ ಹಂತದ ಅನ್ಲಾಕ್ನಲ್ಲಿ ದಿನವಿಡೀ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

English summary
Commuters are likely to get the option of travelling in Namma Metro bying tokens, The Bangalore Metro Rail Corporation LTD, which had suspended the popular token system for almost a year, Top sources confirmed that the token system would be resumed in a week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X