ಐಪಿಎಲ್ ಪಂದ್ಯ : ಮೆಟ್ರೋ, ಬಿಎಂಟಿಸಿ ಸಂಚಾರ ವಿಸ್ತರಣೆ
ಬೆಂಗಳೂರು, ಏಪ್ರಿಲ್ 12 : ಮಂಗಳವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 9ನೇ ಆವೃತ್ತಿಯ ಮೊದಲ ಪಂದ್ಯ ನಡೆಯಲಿದೆ. ಕ್ರಿಕೆಟ್ ಪಂದ್ಯದ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಸಮಯ ವಿಸ್ತರಣೆಯಾಗಿದೆ. ಬಿಎಂಟಿಸಿ ವಿಶೇಷ ಬಸ್ ಸೇವೆ ಒದಗಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮಂಗಳವಾರ ಮುಖಾಮುಖಿಯಾಗಲಿವೆ. ತವರಿನಲ್ಲಿ ಆರ್‌ಸಿಬಿ ಮೊದಲ ಪಂದ್ಯವಾಡುತ್ತಿದ್ದು, ಸಾವಿರಾರು ಅಭಿಮಾನಿಗಳು ಪಂದ್ಯ ವೀಕ್ಷಿಸಲು ಆಗಮಿಸಲಿದ್ದಾರೆ. [ಐಪಿಎಲ್ ನಿಂದ ಹರ್ಷ ಭೋಗ್ಲೆ ಹೊರಹಾಕಲು ಯಾರು ಕಾರಣ?]

ಸಂಚಾರ ಸಮಯ ವಿಸ್ತರಣೆ : ಐಪಿಎಲ್ ಪಂದ್ಯದ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಸಮಯವನ್ನು ವಿಸ್ತರಣೆ ಮಾಡಿದೆ. ಬೈಯಪ್ಪನಹಳ್ಳಿ ಮತ್ತು ಎಂ.ಜಿ.ರಸ್ತೆ ನಡುವೆ ನಮ್ಮ ಮೆಟ್ರೋ ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ 1ರ ತನಕ ಸಂಚಾರ ನಡೆಸಲಿದೆ. ಪ್ರತಿ 30 ನಿಮಿಷಗಳಿಗೆ ಒಂದರಂತೆ ರೈಲುಗಳು ಸಂಚಾರ ನಡೆಸಲಿವೆ.[ಐಪಿಎಲ್ ವೇಳಾಪಟ್ಟಿ]
ಬಿಎಂಟಿಸಿ ಬಸ್ ವ್ಯವಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕ್ರಿಕೆಟ್ ಪಂದ್ಯದ ಹಿನ್ನಲೆಯಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ನಗರದ ಹಲವು ಪ್ರದೇಶಗಳಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ಸುಗಳು ಚಿನ್ನಸ್ವಾಮಿ ಕ್ರೀಡಾಂಗಣ ತಲುಪಲಿವೆ. ಪಂದ್ಯ ಮುಗಿದ ಬಳಿಕ ರಾತ್ರಿ 12 ಗಂಟೆಯ ತನಕ ಸ್ಟೇಡಿಯಂನಿಂದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸಲಿವೆ.
ಎಲ್ಲಿಂದ, ಎಲ್ಲಿಗೆ ಬಸ್ : ಮಾಣೆಕ್ ಷಾ ಪರೇಡ್ ನಿಲ್ದಾಣ-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್-ಸರ್ಜಾಪುರ, ಬ್ರಿಗೇಡ್ ರಸ್ತೆ-ಎಲೆಕ್ಟ್ರಾನಿಕ್ ಸಿಟಿ, ಬ್ರಿಗೇಡ್ ರಸ್ತೆ-ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಚಿನ್ನಸ್ವಾಮಿ ಕ್ರೀಡಾಂಗಣದ ನಿಲ್ದಾಣ-ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್, ಬಿಆರ್‌ವಿ ಪರೇಡ್ ಮೈದಾನ-ಜನಪ್ರಿಯ ಟೌನ್ ಶಿಪ್
ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ನೆಲಮಂಗಲ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ಯಲಹಂಕ 5ನೇ ಹಂತ, ಬಿಆರ್‌ವಿ ಪರೇಡ್ ಮೈದಾನ-ಆರ್.ಕೆ.ಹೆಗಡೆ ನಗರ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ಬಾಗಲೂರು, ಮೆಯೋಹಾಲ್-ಹೊಸಕೋಟೆ ನಡುವೆ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ.
ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ನೇರಪ್ರಸಾರ : ಸೋನಿ ಸಿಕ್ಸ್, ಸೆಟ್ ಮ್ಯಾಕ್ಸ್, ಸೋನಿ ಇಎಸ್ಪಿಎನ್
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್












Click it and Unblock the Notifications