Namma Metro: ಮೆಟ್ರೋ ಪ್ರಯಾಣಿಕರಿಗೆ ಬಂಪರ್ ನ್ಯೂಸ್, ಏನದು ?
Namma Metro: ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆಯ ಶಾಕ್ ಕೊಟ್ಟಿದ್ದ ಬಿಎಂಆರ್‌ಸಿಎಲ್ ಇದೀಗ ಎಲ್ಲಾ ಪ್ರಯಾಣಿಕರಿಗೂ ಬಂಪರ್ ಗಿಫ್ಟ್‌ವೊಂದನ್ನು ಕೊಡುವುದಕ್ಕೆ ಮುಂದಾಗಿದೆ. ಬಿಎಂಆರ್‌ಸಿಎಲ್‌ನ ಹೊಸ ಆಫರ್ ಮೆಟ್ರೋ ಪ್ರಯಾಣಿಕರಲ್ಲಿ ಸಂತೋಷವನ್ನುಂಟು ಮಾಡಲಿದೆ.
ಈಗಾಗಲೇ ಮೆಟ್ರೋ ತನ್ನ ಹೊಸ ಪ್ರಸ್ತಾವನೆಯನ್ನು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿದೆ. ಹಾಗಾದರೆ ಬಿಎಂಆರ್‌ಸಿಎಲ್‌ನ ಹೊಸ ಪ್ರಸ್ತಾವನೆ ಏನು, ಇದರಿಂದ ಮೆಟ್ರೋ ಪ್ರಯಾಣಿಕರಿಗೆ ಯಾವ ರೀತಿ ಲಾಭವಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ವರ್ಷದಿಂದ ವರ್ಷಕ್ಕೆ ಮೆಟ್ರೋದ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮೆಟ್ರೋ ತನ್ನ ಸೇವೆಯನ್ನು ಸಹ ವಿಸ್ತರಿಸುತ್ತಿದ್ದು. ಹೊಸ ಸೇವೆಗೆ ಸಾರ್ವಜನಿಕರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಅಲ್ಲದೆ ಇದೇ ಸಂದರ್ಭದಲ್ಲಿ ಮೆಟ್ರೋ ರೈಲು ಬೋಗಿಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಬೇಡಿಕೆ ಸಹ ಇದೆ. ಮೆಟ್ರೋ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ತನ್ನ ಸೇವೆಗಳನ್ನು ವಿಸ್ತರಿಸಿಕೊಳ್ಳುವ ಕೆಲಸವನ್ನು ಮಾಡುತ್ತಿದೆ.
ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಪಾರ್ಕಿಂಗ್ ನೀತಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಳ್ಳಲು ಮುಂದಾಗಿದೆ. ಇದರಿಂದ ಮೆಟ್ರೋ ಪ್ರಯಾಣಿಕರಿಗೆ ಬಂಪರ್ ಸಿಗಲಿದೆ. ಅಲ್ಲದೆ ಪಾರ್ಕಿಂಗ್ ನೀತಿ ಬದಲಾವಣೆ ಹಲವು ಪ್ರಯಾಣಿಕರಿಗೆ ವರದಾನವಾಗಲಿದೆ ಎಂದು ಹೇಳಲಾಗಿದೆ. ಮೆಟ್ರೋ ಪಾರ್ಕಿಂಗ್ ನೀತಿ ಪ್ರಸ್ತಾವನೆಯನ್ನು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿರುವ ಬಗ್ಗೆ TNIE ವರದಿ ಮಾಡಿದೆ. ಹೊಸ ಬದಲಾವಣೆಯ ವಿವರ ಏನು ಎನ್ನುವುದು ಮುಂದಿದೆ.
2024ನೇ ಸಾಲಿನಲ್ಲಿ ಮೆಟ್ರೋ 2.0 ನಿಯಮದ ಬಗ್ಗೆ ಚರ್ಚೆ ನಡೆದು. ಈ ಸಂಬಂಧ ಪ್ಲ್ಯಾನ್ ಸಹ ರೆಡಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಪಬ್ಲಿಕ್ ಅಭಿಪ್ರಾಯ ಸಹ ಪಡೆದುಕೊಳ್ಳಲಾಗಿತ್ತು. ಇದರಲ್ಲಿ ಪಾರ್ಕಿಂಗ್ ಸುಧಾರಣೆ ಹಾಗೂ ಸೈಕ್ಲಿಸ್ಟ್‌ಗಳಿಗೂ ಅವಕಾಶ ನೀಡುವ ಮಹತ್ವ ಯೋಜನೆಯನ್ನು ಮೆಟ್ರೋ ಮಾಡಿಕೊಂಡಿದೆ. ಈಗ ಸೈಕಲ್‌ಗಳನ್ನು ಪಾರ್ಕಿಂಗ್ ಸ್ಲಾಟ್‌ನಲ್ಲಿ ನಿಲ್ಲಿಸುವುದಕ್ಕೆ ಒಂದು ಗಂಟೆಗೆ 1 ರೂಪಾಯಿ ನಿಗದಿ ಮಾಡಲಾಗಿದೆ. ಮುಂದುವರಿದು ಪೂರ್ತಿ ದಿನ ನಿಲ್ಲಿಸಿದರೆ 10 ರೂ ಶುಲ್ಕ ಹಾಕಲಾಗುತ್ತದೆ.
ಇದೀಗ ಮುಂದಿನ ದಿನಗಳಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಸೈಕ್ಲಿಸ್ಟ್‌ಗಳಿಗೆ ಜಾಗ ಮೀಸಲಿರಿಸಲು ನಿರ್ಧರಿಸಲಾಗಿದೆ. ಅಲ್ಲದೆ ಅಂಗವಿಕಲರು ಮೆಟ್ರೋದಲ್ಲಿ ಪ್ರಯಾಣ ಮಾಡುವುದನ್ನು ಉತ್ತೇಜನ ಮಾಡುವುದಕ್ಕೆ ನಿಲ್ದಾಣಗಳಲ್ಲೇ ವಿಶೇಷ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ.
ಪಾರ್ಕಿಂಗ್ ನೀತಿ ಬದಲಾವಣೆ: ಇನ್ನು ಮುಖ್ಯವಾಗಿ ಮೆಟ್ರೋ ತನ್ನ ಪಾರ್ಕಿಂಗ್ ನೀತಿ ಬದಲಾಯಿಸುವುದಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಪಾರ್ಕಿಂಗ್ ಬಹುದೊಡ್ಡ ಸಮಸ್ಯೆ ಆಗಿದೆ. ಅದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತಿರುವ ಕ್ರಮಗಳು ಸಾಲುತ್ತಿಲ್ಲ. ಅಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೆಟ್ರೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿ. ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಾರೆ ಇದೇ ಕಾರಣಕ್ಕೆ ಮೆಟ್ರೋ ಪಾರ್ಕಿಂಗ್ ವ್ಯವಸ್ಥೆ ಇದೆ. ಆದರೆ, ಮೆಟ್ರೋದಲ್ಲಿ ಪ್ರಯಾಣ ಮಾಡದೆ ಇರುವವರು ಸಹ ಇಲ್ಲಿ ಪಾರ್ಕಿಂಗ್ ಮಾಡಿ ಹೋಗುತ್ತಿದ್ದಾರೆ ಎನ್ನುವ ಆರೋಪ ಇದೆ.
ಇನ್ಮುಂದೆ ಮೆಟ್ರೋ ಪ್ರಯಾಣ ಮಾಡದೆ ಇರುವವರು ಪಾರ್ಕಿಂಗ್ ಬಳಸುವುದನ್ನು ತಪ್ಪಿಸಲು ಬಿಎಂಆರ್‌ಸಿಎಲ್ ಮೊಬಿಲಿಟಿ ಕಾರ್ಡ್ ಪರಿಚಯಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications