Namma Metro: ಚಲ್ಲಘಟ್ಟ-ಕಾಡುಗೋಡಿ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

ಮೆಟ್ರೋ ಪ್ರಯಾಣಿಕರ ಹಲವು ವರ್ಷಗಳು ಕಾಯುವಿಕೆ ಇಂದು ಅಂತ್ಯವಾಗಿದೆ. ನಮ್ಮ ಮೆಟ್ರೋ ಸಂಪೂರ್ಣ ನೇರಳೆ ಮಾರ್ಗದಲ್ಲಿ ಇಂದಿನಿಂದ ರೈಲು ಸಂಚಾರ ಆರಂಭಗೊಂಡಿದೆ. ಬೆಳಗ್ಗೆ 5 ಗಂಟೆಗೆ ಚಲ್ಲಘಟ್ಟ - ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮೆಟ್ರೋ ರೈಲು ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ಖುಷಿ ವ್ಯಕ್ತಪಡಿಸಿದ್ದಾರೆ.

ನೇರಳೆ ಮಾರ್ಗದಲ್ಲಿ ಮೆಟ್ರೊ ಸಂಚಾರ ಇದ್ದರೂ ಚಲ್ಲಘಟ್ಟ - ಕೆಂಗೇರಿ, ಕೆಆರ್ ಪುರ - ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಆರಂಭವಾಗಿರಲಿಲ್ಲ, ಇದು ಪ್ರಯಾಣಿಕರ ಸಂಚಾರಕ್ಕೆ ಭಾರಿ ತೊಂದರೆಗೆ ಕಾರಣವಾಗಿತ್ತು. ಈಗ ಈ ಮಾರ್ಗಗಳು ಸಂಚಾರಕ್ಕೆ ಮುಕ್ತವಾಗಿದ್ದು, 43.49 ಕಿಮೀ ಉದ್ದದ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಡಲಿವೆ. ಈ ಮಾರ್ಗದಲ್ಲಿ ಒಟ್ಟು 37 ನಿಲ್ದಾಣಗಳು ಇವೆ.

Namma Metro: Challaghatta To Whitefield Entire Purple Line Metro Opened For Public

ಈವರೆಗೆ ಹಸಿರು ಮಾರ್ಗ ನಮ್ಮ ಮೆಟ್ರೋದ ಉದ್ದನೆಯ ಮಾರ್ಗವಾಗಿದ್ದರೆ ಇಂದಿನಿಂದ ಅದು ನೇರಳೆ ಮಾರ್ಗದ ಪಾಲಾಗಲಿದೆ. ಸದ್ಯ ನಮ್ಮ ಮೆಟ್ರೋ ಒಟ್ಟು ಹಸಿರು ಮತ್ತು ನೇರಳೆ ಮಾರ್ಗ ಸೇರಿಸಿ ಒಟ್ಟು 73.81 ಕಿಮೀ ಮೆಟ್ರೋ ಮಾರ್ಗವನ್ನು ಹೊಂದಿದೆ.

ಖುಷಿಯಾದ ಪ್ರಯಾಣಿಕರು

ಇನ್ನು ಸೋಮವಾರ ಮುಂಜಾನೆಯಿಂದ ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಿದ್ದು ಪ್ರಯಾಣಿಕರಲ್ಲಿ ಸಂತಸ ಮೂಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಪ್ರಯಾಣಿಕರು ತಮ್ಮ ಪ್ರಯಾಣದ ಅನುಭವ ಹಂಚಿಕೊಳ್ಳುತ್ತಿದ್ದು, ಸಮಯ ಉಳಿತಾಯವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ನಮ್ಮ ಮೆಟ್ರೋ ನೇರಳೆ ಮಾರ್ಗ ಸಂಪೂರ್ಣವಾಗಿರುವುದು ಈ ಭಾಗದ ಐಟಿ ಉದ್ಯೋಗಿಗಳಿಗೆ ಭಾರಿ ಅನುಕೂಲವಾಗಲಿದೆ. ಹೆಚ್ಚಿನ ಸಮಯ ಉಳಿತಾಯವಾಗುವ ಜೊತೆಗೆ ಸಂಚಾರ ದಟ್ಟಣೆ ಕೂಡ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.

ನೇರಳೆ ಮಾರ್ಗ ಸಂಪೂರ್ಣವಾಗಿ ಕಾರ್ಯಾಚರಣೆ ಆರಂಭವಾದ ನಂತರ ನಮ್ಮ ಮೆಟ್ರೋ ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ 75000 ದಿಂದ 1 ಲಕ್ಷದವರೆಗೆ ಹೆಚ್ಚಳವಾಗಬಹುದು ಎಂದು ನಿರೀಕ್ಷೆ ಮಾಡಲಾಗುತ್ತಿದೆ.

ಮೆಟ್ರೋ ಸಂಚಾರ ಸಮಯ

ಕಾಡುಗೋಡಿ (ವೈಟ್‌ಫೀಲ್ಡ್) ನಿಲ್ದಾಣದಿಂದ ಮೊದಲ ರೈಲು ಸಂಚಾರ ಮುಂಜಾನೆ 5 ಗಂಟೆಗೆ ಆರಂಭವಾಗಲಿದೆ. ರಾತ್ರಿ 10.45ಕ್ಕೆ ಈ ನಿಲ್ದಾಣದಿಂದ ಕೊನೆಯ ರೈಲು ಹೊರಡಲಿದೆ.

ವೈಟ್‌ಫೀಲ್ಡ್ ನಿಲ್ದಾಣದಿಂದ ಪಟ್ಟಂದೂರು ಅಗ್ರಹಾರ ಮಾರ್ಗದಲ್ಲಿ ಪ್ರತಿ 10 ನಿಮಿಷಗಳಿಗೆ ಒಂದು ರೈಲು ಸಂಚರಿಸಲಿದೆ.

ಪಟ್ಟಂದೂರು ಅಗ್ರಹಾರ ನಿಲ್ದಾಣದಿಂದ ಮೈಸೂರು ರಸ್ತೆ ನಿಲ್ದಾಣಕ್ಕೆ ಪ್ರತಿ 5 ನಿಮಿಷಕ್ಕೆ ಒಂದು ರೈಲು ಹೊರಡಲಿದೆ.

ಮೈಸೂರು ರಸ್ತೆಯಿಂದ - ಚಲ್ಲಘಟ್ಟ ಮಾರ್ಗದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+