Namma Metro: ಬೆಂಗಳೂರಿನ ಸಮೀಪ ನಗರಕ್ಕೆ ನಮ್ಮ ಮೆಟ್ರೋ ವಿಸ್ತರಣೆ: ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್
ಬೆಂಗಳೂರು: ಬೆಂಗಳೂರು ಮೆಟ್ರೋ ಜಾಲ ವಿಸ್ತರಣೆಯಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಬೆಂಗಳೂರು ಹಾಗೂ ದೊಡ್ಡಬಳ್ಳಾಪುರದ ನಡುವೆ ಮೆಟ್ರೋ ಜಾಲ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರದಲ್ಲಿ ಭರ್ಜರಿ ಗುಡ್‌ನ್ಯೂಸ್ ಬಂದಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರು ಹೊರ ವಲಯ ಹಾಗೂ ಬೆಂಗಳೂರಿನ ಸುತ್ತಮುತ್ತಲಿನಿಂದ ಬೆಂಗಳೂರಿಗೆ ನಿತ್ಯ ಬರುವ ಸಾವಿರಾರು ಜನರಿಗೆ ಅನುಕೂಲವಾಗಲಿದೆ. ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್ ಆಗಲಿದೆ. ಅದರೊಂದಿಗೆ ವಿವಿಧ ಪ್ರದೇಶಗಳಲ್ಲಿ ಸಹಜವಾಗಿಯೇ ಭೂಮಿ ಬೆಲೆ ಹೆಚ್ಚಳವಾಗುವ ನಿರೀಕ್ಷೆಯೂ ಇದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರವು ಬೆಂಗಳೂರು ನಮ್ಮ ಮೆಟ್ರೋ ಜಾಲವನ್ನು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶ ಹಾಗೂ ಬೆಂಗಳೂರಿನ ಹೊರ ಭಾಗದ ಜಿಲ್ಲೆಗಳಿಗೂ ವಿಸ್ತರಣೆ ಮಾಡುವುದಾಗಿ ಹೇಳಿತ್ತು. ಈ ನಿಟ್ಟಿನಲ್ಲಿ ಮಹತ್ವದ ಬದಲಾವಣೆ ಆಗಿದೆ. ಕರ್ನಾಟಕ ಸರ್ಕಾರವು ಬೆಂಗಳೂರು ನಗರದ ಸಾರಿಗೆ ವ್ಯವಸ್ಥೆ, ಸಂಚಾರ ದಟ್ಟಣೆ ನಿಯಂತ್ರಣ ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ರೂಪಿಸಲಾಗಿದ್ದ "ಸಮಗ್ರ ಸಂಚಾರ ಮಾದರಿ ಯೋಜನೆ"ಯನ್ನು ಇದೀಗ ಪರಿಷ್ಕರಿಸಲಾಗುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ಉಪನಗರ ದೊಡ್ಡಬಳ್ಳಾಪುರಕ್ಕೆ ಮೆಟ್ರೋ ಮಾರ್ಗವನ್ನು ವಿಸ್ತರಿಸರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಇನ್ನು ಈಗಾಗಲೇ ಕಳೆದ ಬಾರಿಯ ವಿಧಾನಸಭೆ ಅಧಿವೇಶನದ ಸಮಯದಲ್ಲೇ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು, ಹೊಸಕೋಟೆ ಸೇರಿದಂತೆ ಬೆಂಗಳೂರಿನ ಸಮೀಪದ ಪ್ರದೇಶಗಳಿಗೆ ನಮ್ಮ ಮೆಟ್ರೋ ವಿಸ್ತರಣೆ ಮಾಡುವುದಾಗಿ ಹೇಳಿದ್ದರು. ಬೆಂಗಳೂರು ನಗರಾಭಿವೃದ್ಧಿ ಉಸ್ತುವಾರಿ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರವಾಗಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜ್ ಅವರ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿದ್ದಾರೆ.
ಬೆಂಗಳೂರು - ದೊಡ್ಡಬಳ್ಳಾಪುರ ಮೆಟ್ರೋ ವಿಸ್ತರಣೆ
ಇನ್ನು ಬೆಂಗಳೂರು ನಗರದಿಂದ ದೊಡ್ಡಬಳ್ಳಾಪುರಕ್ಕೆ ನಮ್ಮ ಮೆಟ್ರೋ ವಿಸ್ತರಣೆ ವಿಸ್ತರಣೆಯಿಂದ ಹಲವು ಲಾಭಗಳು ಆಗಲಿವೆ. ದೊಡ್ಡಬಳ್ಳಾಪುರ ನಗರವು ಬೆಂಗಳೂರು ನಗರದಿಂದ 40 ಕಿ.ಮೀ ದೂರದಲ್ಲಿದೆ. ದೊಡ್ಡಬಳ್ಳಾಪುರಕ್ಕೆ ಯಲಹಂಕ ಮತ್ತು ರಾಜನಕುಂಟೆ ಮೂಲಕ ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗವನ್ನು ಪರಿಚಯಿಸಬೇಕು ಎಂದು ಶಾಸಕ ಧೀರಜ್ ಮುನಿರಾಜ್ ಅವರು ಮನವಿ ಮಾಡಿದ್ದರು.
ಬೆಂಗಳೂರು ಗ್ರಾಮಾಂತರ (ಬೆಂಗಳೂರು ಉತ್ತರ) ಜಿಲ್ಲೆ ವ್ಯಾಪ್ತಿಯಲ್ಲಿ ದೊಡ್ಡಬಳ್ಳಾಪುರ ಇದೆ. ದೊಡ್ಡಬಳ್ಳಾಪುರ ಪ್ರದೇಶವು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. 5,400 ಎಕರೆಗಳಲ್ಲಿ KWIN / ಕ್ವಿನ್ ಸಿಟಿ ಪ್ರಾಜೆಕ್ಟ್ ಈ ಭಾಗದ ಅಭಿವೃದ್ಧಿಗೆ ಹೊಸ ಬೂಸ್ಟ್ ನೀಡಿದೆ. ಫಾಕ್ಸ್‌ಕಾನ್ ಸಂಸ್ಥೆಯಿಂದ ಈ ಭಾಗದಲ್ಲಿ 45,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ನಮ್ಮ ಮೆಟ್ರೋ ಯೋಜನೆ ಪ್ರಗತಿ
ಇನ್ನು ಬೆಂಗಳೂರು ನಮ್ಮ ಮೆಟ್ರೋ ಯೋಜನೆಯನ್ನು ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ವಿಸ್ತರಿಸಲಾಗುತ್ತಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಮೆಟ್ರೋ ರೈಲು ಸಂಪರ್ಕ ವಿಸ್ತರಿಸಲಾಗುತ್ತಿದ್ದು, ಈ ಯೋಜನೆ ಪ್ರಗತಿಯಲ್ಲಿದ್ದು, 2027ರ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಯಲಹಂಕ ಮೂಲಕ ದೊಡ್ಡಬಳ್ಳಾಪುರಕ್ಕೆ ಮೆಟ್ರೋ ಸಂಪರ್ಕದ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರ ಈಗಾಗಲೇ ಹಂತ 3 ಮತ್ತು 3A (ಮೆಟ್ರೋ ಮುಂದುವರಿದ ಕಾಮಗಾರಿ) ಅನುಮೋದನೆ ನೀಡಿದೆ. ಆದರೆ, ಇದು ದೊಡ್ಡಬಳ್ಳಾಪುರ ಮಾರ್ಗವನ್ನು ಒಳಗೊಂಡಿಲ್ಲ. 2020ರಲ್ಲಿ ಸಿದ್ಧಪಡಿಸಲಾದ ಸಮಗ್ರ ಸಂಚಾರ ಮಾದರಿ ಯೋಜನೆಯನ್ನು ಸರ್ಕಾರ ಪರಿಷ್ಕರಿಸಲಾಗುತ್ತಿದೆ. ದೊಡ್ಡಬಳ್ಳಾಪುರಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಪರಿಷ್ಕರಣೆ ನಡೆದಿದೆ. ತಜ್ಞರ ಸಮಿತಿಯೊಂದಿಗೆ ಈ ವಿಚಾರವನ್ನು ಚರ್ಚೆ ಮಾಡುವುದಾಗಿ ಸಚಿವರು ಹೇಳಿದ್ದಾರೆ. ಅಲ್ಲದೇ 3A ಹಂತದ ನಂತರ ಮೆಟ್ರೋ ಮಾರ್ಗ - ಕಾಮಗಾರಿಗೆ ಬೆಂಗಳೂರು - ದೊಡ್ಡಬಳ್ಳಾಪುರ ಮೆಟ್ರೋ ವಿಸ್ತರಣೆ ಪರಿಗಣಿಸಲಾಗುವುದು ಎಂದೂ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Bengaluru property: ಬೆಂಗಳೂರಿನ 51 ಆಸ್ತಿಗಳ ಸ್ವಾಧೀನಕ್ಕೆ ಮುಂದಾದ ಉತ್ತರ ನಗರ ಪಾಲಿಕೆ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications