ಹೊಸಕೋಟೆವರೆಗೆ ಮೆಟ್ರೋ ವಿಸ್ತರಣೆ: ಯಡಿಯೂರಪ್ಪ ಆಶ್ವಾಸನೆ
ಹೊಸಕೋಟೆ, ನವೆಂಬರ್ 4: ಹೊಸಕೋಟೆ ನಗರಕ್ಕೆ ಮೆಟ್ರೋ ಯೋಜನೆ ವಿಸ್ತರಣೆಗೆ ಕೇಂದ್ರದಿಂದ ಅನುಮತಿ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.
ಪುನಃ ಹೊಸಕೋಟೆಗೆ ಬಂದು ಮೆಟ್ರೋ ಯೋಜನೆ ವಿಸ್ತರಣೆಗೆ ಶಂಕುಸ್ಥಾಪನೆ ಮಾಡುತ್ತೇನೆ. ಹೊಸಕೋಟಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಮಂಜೂರಾತಿಗೆ ಅಧಿಕಾರಿಗಳ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳುವುದುದಾಗಿ ತಿಳಿಸಿದ್ದಾರೆ.
ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆಯೇನೂ ಇಲ್ಲ, ಎಂಟಿಬಿ ನಾಗರಾಜ್‌ಗೆ ಏನು ಬೇಕು ಕೇಳಿ ಕೊಡ್ತೀವಿ ಎಂದು ಆಶ್ವಾಸನೆ ನೀಡಿದ್ದಾರೆ.ಕೇವಲ ಎಂಟಿಬಿ ಕ್ಷೇತ್ರ ಮಾತ್ರವಲ್ಲ ಆದ್ಯತೆ ಮೇರೆಗೆ ಎಲ್ಲಾ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಲಾಗುತ್ತದೆ.

ಎಂಟಿಬಿಗೆ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿಕೊಟ್ಟಿದ್ದರೆ ರಾಜೀನಾಮೆ ನೀಡುವ ಪ್ರಸಂಗವೇ ಬರುತ್ತಿರಲಿಲ್ಲ. ಎಂಬಿಟಿ ಯಾವುದೇ ಪಕ್ಷದಿಂದ ನಿಲ್ಲಲಿ ಅಥವಾ ಪಕ್ಷೇತರ ಅಭ್ಯರ್ಥಿಯಾದರೂ ಪರವಾಗಿಲ್ಲ.
ಅವರಂತವರು ಶಾಸಕರಾಗಬೇಕು ಎಂದು ಜನತೆಯಲ್ಲಿ ಮನವಿ ಮಾಡಿದರು. ಶಿಕಾರಿಪುರದಂತೆ ಹೊಸಕೋಟೆ ಕ್ಷೇತ್ರ ಮಾದರಿಯಾಗಬೇಕು, ಇದಕ್ಕೆ ನಾನು ಯಾವುದೇ ಕೆಲಸವನ್ನು ಮಾಡಿಕೊಡಲು ಸಿದ್ಧನಿದ್ದೇನೆ ಎಂದು ಅವರು ಹೇಳಿದರು.











Click it and Unblock the Notifications