Namma Metro: ಮೆಟ್ರೋ ದರ ಹೆಚ್ಚಳದಲ್ಲಿ ಸರ್ಕಾರ ಪಾತ್ರ ಬಹಿರಂಗಪಡಿಸಿದ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: ಬೆಂಗಳೂರು ಜನರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ದರವನ್ನು ಈ ವರ್ಷಕ್ಕೆ ಅನ್ವಯಿಸುವಂತೆ ಶೇ. 5ರಷ್ಟು ಹೆಚ್ಚಿಸಲಾಗಿದೆ. ಫೆಬ್ರವರಿ 9ರಿಂದ ಹೊಸ ದರ ಜಾರಿಗೆ ಬರಲಿದೆ. ಇದಕ್ಕೆ ಪ್ರಯಾಣಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ 'ಮೆಟ್ರೋ ಬೈಕಾಟ್' ಅಭಿಯಾನ ಆರಂಭಿಸಿದ್ದಾರೆ. ಜನರಿಗೆ ದರ ಏರಿಕೆ ಬರೆ ಬಿದ್ದಿದೆ. ಇತ್ತ ರಾಜಕಾರಣಿಗಳು ಒಬ್ಬರ ಮೇಲೋಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರದತ್ತ ಬೊಟ್ಟು ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ತೇಜಸ್ವಿ ಸೂರ್ಯ ದಾಖಲೆ ಸಮೇತ ಟಾಂಗ್ ಕೊಟ್ಟಿದ್ದಾರೆ.
'ಮೆಟ್ರೋ ದರ ಏರಿಕೆಯಿಂದ ಜನರಿಗೆ ತೊಂದರೆಯಾಗಿದೆ. ದರ ಹೆಚ್ಚಿಸುವುದು ರಾಜ್ಯ ಸರ್ಕಾರವಲ್ಲ, ಬದಲಾಗಿ ಕೇಂದ್ರ ಸರ್ಕಾರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಮೂಲಕ ರಚಿಸಿದ ದರ ನಿಗದಿ ಕಮಿಟಿ' ಎಂದು ಮುಖ್ಯಮಂತ್ರಿಗಳು ಟ್ವೀಟ್ (ಎಕ್ಸ್) ಮೂಲಕ ಹೇಳಿದ್ದರು. ಈ ಮೂಲಕ ಕೇಂದ್ರದತ್ತ ಬೊಟ್ಟು ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮೂಲಕ ಸಂಸದ ತೇಜಸ್ವಿ ಸೂರ್ಯ ಅವರು ಉತ್ತರಿಸಿದ್ದಾರೆ.

ಸುಳ್ಳು ಸತ್ಯವಾಗಿ ಬದಲಾಗಲ್ಲ: ಸಂಸದ ಕಿಡಿ
ಶುಲ್ಕ ನಿಗದಿ ಸಮಿತಿಯು ಶಾಸನಬದ್ಧವಾಗಿರಬಹುದು. ಆದರೆ ಆ ಸಮಿತಿಗೆ ಶಿಫಾರಸು ಮಾಡುವುದು, ದರ ಭರಿಸುವ ಸಾಮರ್ಥ್ಯ, ಕೆಲವು ಆರ್ಥಿಕ ದೃಷ್ಠಿಕೋನಗಳು ರಾಜ್ಯ ಸರ್ಕಾರದಿಂದಲೇ ಶಿಫಾರಸು ಆಗಿರುತ್ತವೆ. ಯಾವುದೇ ಸುಳ್ಳುಗಳು ಈ ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರದಿಂದ ಸಲ್ಲಿಕೆ ಆದ ಪತ್ರವನ್ನು ಪೋಸ್ಟ್ ಮಾಡಿ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿಗಳೇ ನಿಮ್ಮ ನೆಪಗಳನ್ನು ಕೇಳಿ ಸಾರ್ವಜನಿಕರು ಬೇಸತ್ತಿದ್ದಾರೆ. ನೀವು ಇದನ್ನು "ಔಪಚಾರಿಕವಾಗಿ" ತೆಗೆದುಕೊಳ್ಳಲು ಕಾಯುತ್ತಿದ್ದಾಗ, ಬೆಂಗಳೂರಿಗರು ಸುಮಾರು ಒಂದು ವರ್ಷದಿಂದ ತೀವ್ರ ದರ ಏರಿಕೆ ಬಿಸಿ ಅನುಭವಿಸುತ್ತಲೇ ಇದ್ದಾರೆ. ಈ ವಿಷಯದ ಬಗ್ಗೆ ನಿಮ್ಮ ಗಮನ ಸೆಳೆಯಲು ನಾವು ಒಂದು ವರ್ಷದ ನಿರಂತರ ಪ್ರಯತ್ನ ಮಾಡಿದ್ದೇನೆ. ನಿರಂತರವಾಗಿ ಸಾರ್ವಜನಿಕ ವಿರೋಧದ ಬಳಿಕ ನೀವು ಅಂತಿಮವಾಗಿ ಎಚ್ಚರಗೊಂಡಂತಿದೆ ಎಂದು ವಾಗ್ದಾಳಿ ನಡೆಸಿದರು.
ದರ ಏರಿಕೆ ಕಡ್ಡಾಯವೆಂದು ಇಲಾಖೆಯಿಂದ ಪತ್ರ
ಕರ್ನಾಟಕದ ಸ್ವಂತ ನಗರಾಭಿವೃದ್ಧಿ ಮತ್ತು ಹಣಕಾಸು ಇಲಾಖೆಗಳು ಬಿಎಂಆರ್ಸಿಎಲ್ಗೆ ಪತ್ರಗಳನ್ನು ಬರೆದಿವೆ. ಅದರಲ್ಲಿ ರಾಜ್ಯ ಸರ್ಕಾರದ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ದರ ಪರಿಷ್ಕರಣೆಯನ್ನು "ಕಡ್ಡಾಯ" ಎಂದು ತಿಳಿಸಲಾಗಿದೆ. ಸರ್ಕಾರದ ಮೇಲಿನ ಹಣಕಾಸಿನ ಒತ್ತಡವನ್ನು ಕಡಿಮೆ ಮಾಡಲು ಮೆಟ್ರೋ ದರ ಏರಿಕೆ ಮಾಡುವ ಒತ್ತಯ ನಿಮ್ಮ ಸರ್ಕಾರದಿಂದ ಆರಂಭವಾಯಿತು. ಈ ಮೆಟ್ರೋ ಪ್ರಯಾಣ ದುಬಾರಿ ವಿಚಾರದಲ್ಲಿ ದಯವಿಟ್ಟು ರಾಜ್ಯವು ಅಸಹಾಯಕ ಪ್ರೇಕ್ಷಕ ಎಂಬಂತೆ ನಟಿಸುವುದು ಬೇಡ ಎಂದು ಸಂಸದ ಸೂರ್ಯ ಅವರು ಹೇಳಿದರು.
ಕನಿಷ್ಠ ಈಗಲಾದರೂ ಕಾಯ್ದೆಯ ಹಿಂದೆ ಅಡಗಿಕೊಳ್ಳುವುದನ್ನು ನಿಲ್ಲಿಸಿ. ಫೆಬ್ರವರಿ 09ರಿಂದ ಜಾರಿಗೆ ಬರಲಿರುವ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು. ಹೊಸ ಎಫ್ಎಫ್ಸಿಯನ್ನು ಪ್ರಾರಂಭಿಸಿ ಮತ್ತು ಸಮಯಕ್ಕೆ ಅನುಗುಣವಾಗಿ ದರ ತರ್ಕಬದ್ಧಗೊಳಿಬೇಕು. ಬೆಂಗಳೂರಿಗೆ ಹೊಣೆಗಾರಿಕೆ ಮತ್ತು ಕ್ರಮದ ಅಗತ್ಯವಿದೆ, ನಕಲಿ ಆಕ್ರೋಶವಲ್ಲ ಎಂದು ಅವರು ಸಿಎಂ ವಿರುದ್ಧ ಕಿಡಿ ಕಾರಿದರು.
Public is tired of listening to your excuses, Mr CM. While you waited to “formally” take this up, Bengalureans were made to suffer a steep hike for nearly a year. You finally seem to have woken up after persistent public opposition, after a year of our consistent efforts to draw… https://t.co/YhJPivREpM pic.twitter.com/3GwGEpTrQ9
— Tejasvi Surya (@Tejasvi_Surya) February 6, 2026
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?
ಮೆಟ್ರೋ ದರ ಪರಿಷ್ಕರಣೆಯ ನಂತರ ಪ್ರಯಾಣಿಕರಿಂದ ವ್ಯಕ್ತವಾದ ಆತಂಕ ಮತ್ತು ಬೇಸರವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ನಿಮ್ಮ ಅಹವಾಲಿಗೆ ಸ್ಪಂದಿಸುತ್ತೇನೆ ಎಂದಿದ್ದ ಮುಖ್ಯಮಂತ್ರಿಗಳು ಸತ್ಯ ಸಂಗತಿ ಇಲ್ಲಿದೆ ಎಂದು ತಿಳಿಸಿದ್ದರು. ಮೆಟ್ರೋ ರೈಲ್ವೇಸ್ (ಆಪರೇಷನ್ & ಮೇಂಟೆನೆನ್ಸ್) ಆಕ್ಟ್, 2002ರ ಅಡಿಯಲ್ಲಿ, ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ಕೇಂದ್ರ ರಚಿತ ಕಮಿಟಿ ನಿರ್ಧರಿಸುತ್ತದೆ.
ದರ ನಿಗದಿ ಕಮಿಟಿಯು ನಿಗದಿತ ಅವಧಿಯೊಳಗೆ ತನ್ನ ಶಿಫಾರಸುಗಳನ್ನು ಸಲ್ಲಿಸಬೇಕು, ಮತ್ತು ಸೆಕ್ಷನ್ 37ರ ಅಡಿಯಲ್ಲಿ ಈ ಶಿಫಾರಸುಗಳು ಮೆಟ್ರೋ ಆಡಳಿತವು ಒಪ್ಪಲೇಬೇಕಿದೆ ಮತ್ತು ಜಾರಿ ಮಾಡಬೇಕಿದೆ. ರಾಜ್ಯ ಸರ್ಕಾರಕ್ಕೆ ಅಥವಾ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಈ ಶಿಫಾರಸುಗಳನ್ನು ರದ್ದುಗೊಳಿಸುವ ಅಥವಾ ಉಲ್ಲಂಘಿಸುವ ಕಾನೂನಾತ್ಮಕ ಅಧಿಕಾರವಿಲ್ಲ ಎಂದು ಕೆಲವು ಅಂಶಗಳನ್ನು ತಿಳಿಸುವ ಮೂಲಕ ಇದರಲ್ಲಿ ಕರ್ನಾಟಕದ ಪಾತ್ರವಿಲ್ಲ, ತಾನು ಮೂಕ ಪ್ರೇಕ್ಷಕ ಎಂದು ತಿಳಿಸಿದ್ದರು.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್ಸೈಟ್ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್ಬುಕ್ ಮತ್ತು ಟ್ವಿಟರ್ನಲ್ಲೂ ಮೈಖೇಲ್ ಫಾಲೊ ಮಾಡಿ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications