ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ: ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ಪ್ರಯಾಣಿಕರ ಜೇಬಿಗೆ ಕತ್ತರಿ: ಆರ್‌.ಅಶೋಕ್ ಆಕ್ರೋಶ

Namma Metro Fare Hike: ಬೆಂಗಳೂರು ಮೆಟ್ರೋ ರೈಲು ಸಂಸ್ಥೆ (ಬಿಎಂಆರ್‌ಸಿಎಲ್‌) ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇಕರ 5ರಷ್ಟು ಹೆಚ್ಚಿಸುವ ನಿರ್ಧಾರ ಮಾಡಿದೆ. ಫೆಬ್ರವರಿ 9ರಿಂದ ಹೊಸ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಆರ್‌.ಅಶೋಕ್ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಮೆಟ್ರೋ ಬೆಂಗಳೂರು ಜೀವನಾಡಿ ಸಾರಿಗೆಗಳಲ್ಲಿ ಒಂದಾಗಿದೆ. ನಗರದ ಬಹುತೇಕ ಮಂದಿ ಟ್ರಾಫಿಕ್‌ ಜಂಜಾಟದಿಂದ ತಪ್ಪಿಸಿಕೊಳ್ಳಲು ಹಾಗೂ ಸಮಯ ಉಳಿತಾಯಕ್ಕಾಗಿ ನಮ್ಮ ಮೆಟ್ರೋವನ್ನೇ ಅವಲಂಬಿಸಿದ್ದಾರೆ. ಆದರೆ, ಇದೀಗ ಟಿಕೆಟ್ ದರ ಏರಿಕೆ ನಿರ್ಧಾರದಿಂದ ಪ್ರಯಾಣಿಕರು ಸೇರಿದಂತೆ ಹಲವು ರಾಜಕೀಯ ನಾಯಕರು ಬೇಸರಗೊಂಡು ಬಿಎಂಆರ್‌ಸಿಎಲ್‌ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Namma Metro Fare Hike Opposition Leader R Ashok outrage Against State Government in Tweeter

ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್‌ ಟ್ವೀಟ್‌ ಮಾಡಿದ್ದು, ಕನ್ನಡಿಗರ ತೆರಿಗೆ ಹಣವನ್ನು ಲೂಟಿ ಮಾಡಿ ಖಜಾನೆ ಖಾಲಿ ಮಾಡಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಇದೀಗ ಪ್ರಯಾಣಿಕರ ಜೇಬಿನಿಂದ ರಾಜಾರೋಷವಾಗಿ ಪಿಕ್‌ ಪಾಕೆಟ್‌ ಮಾಡುತ್ತಿದೆ.
ಮಾನ್ಯ ಸಿಎಂ ಸಿದ್ದರಾಮಯ್ಯ ಅವರೇ, ಬೆಂಗಳೂರಿನ ಮೆಟ್ರೋ ಪ್ರಯಾಣ ದರ ಈಗಾಗಲೇ ಭಾರತದಲ್ಲಿಯೇ ಅತಿ ಹೆಚ್ಚಿ‌ನ ದರ ಹೊಂದಿದೆ. ಇನ್ನೆಷ್ಟು ಪಿಕ್‌ ಪಾಕೆಟ್‌ ಮಾಡುತ್ತೀರಾ? ಮೆಟ್ರೋ ದರ ಏರಿಕೆ ಪ್ರಸ್ತಾವನೆ ಮತ್ತು ದರ ಏರಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳಾಗಿದೆ. ಸರ್ಕಾರ ಈ ಕೂಡಲೇ ಈ ದರೋಡೆಯನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ತಕ್ತಪಡಿಸಿದ್ದಾರೆ.

ತೇಜಸ್ವಿ ಸೂರ್ಯ ಆಕ್ರೋಶ: ಮೆಟ್ರೋ ಪ್ರಯಾಣ ದರ ಏರಿಕೆ ಘೋಷಣೆ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಫೆಬ್ರವರಿ 9ರಿಂದ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿ ಆಗುತ್ತಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಷಯವನ್ನು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಇಂದು ಭೇಟಿ ಮಾಡಿ ವಿವರವಾಗಿ ಮಾಹಿತಿ ನೀಡಿದ್ದು, ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ. ದರ ನಿಗದಿ ಸಮಿತಿಗೆ ಸಲ್ಲಿಸಲಾದ ಲೆಕ್ಕಾಚಾರಗಳಲ್ಲಿ ಹಲವು ವೈಪರೀತ್ಯಗಳು ಇರುವುದನ್ನು ಗಮನಕ್ಕೆ ತರಲಾಗಿದೆ. ಅದರಲ್ಲೂ ಪ್ರಸ್ತುತ ವರ್ಷದಲ್ಲಿನ ದೋಷಗಳು ಸೇರಿವೆ. ಇದರಿಂದ ಪ್ರಯಾಣಿಕರಿಗೆ ಅಧಿಕ ದರ ವಿಧಿಸಲಾಗಿದ್ದು, ಗರಿಷ್ಠ ಟಿಕೆಟ್ ದರವನ್ನು 95 ರೂಪಾಯಿಗೆ ಏರಿಕೆ ಮಾಡಲಾಗಿದೆ.

ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ಮುಂದುವರಿಸಲು ಅವಕಾಶ ನೀಡಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯ ಇದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್​​ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಹೀಗೆ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಆಕ್ರೋಶಗಳು ಭುಗಿಲೆದ್ದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+