Namma Metro Fare: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಡೆ: ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ ಕೊಟ್ಟ ತೇಜಸ್ವಿ ಸೂರ್ಯ
Namma Metro Fare: ಇತ್ತೀಚೆಗಷ್ಟೇ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಭಾರೀ ಆಕ್ರೋಶಗಳು ಭುಗಿಲೆದ್ದಿದ್ದವು. ಈ ಹಿನ್ನೆಲೆ ಸೋಮವಾರದಿಂದ ಜಾರಿಗೆ ಬರಬೇಕಿದ್ದ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. ಇದರಿಂದ ಪ್ರಯಾಣಿಕರು ನಿರಾಳಗೊಂಡಿದ್ದಾರೆ. ಇನ್ನೂ ಈ ಕುರಿತು ಸಂಸದ ತೇಜಸ್ವಿ ಸೂರ್ಯ ಅವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದು, ಮೆಟ್ರೋ ದರ ಹೆಚ್ಚಳದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ತಾತ್ಕಾಲಿಕ ಬ್ರೇಕ್ ಹಾಕಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಗೃಹ ಸಚಿವರೊಂದಿಗೆ ನಡೆಸಿದ ಚರ್ಚೆಯ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಮೆಟ್ರೋ ಪ್ರಯಾಣಿಕರಿಗೆ ನೆಮ್ಮದಿಯ ಸುದ್ದಿ: ದರ ಏರಿಕೆ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ಮೂಡಿದ್ದ ಅಸಮಾಧಾನ ಮತ್ತು ಪ್ರತಿಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಇದರಿಂದಾಗಿ ಸದ್ಯಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಟಿಕೆಟ್ ದರ ಹೆಚ್ಚಳದ ಆತಂಕ ತಪ್ಪಿದಂತಾಗಿದೆ.
ತೇಜಸ್ವಿ ಸೂರ್ಯ ಪ್ರತಿಕ್ರಿಯೆ: ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ ಅವರು, ಮೆಟ್ರೋ ಟಿಕೆಟ್ ದರ ಹೆಚ್ಚಳದ ವಿಚಾರವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಫೆಬ್ರವರಿ 9ರಿಂದ ಜಾರಿಗೆ ಬರಬೇಕಿದ್ದ ದರ ಏರಿಕೆಯನ್ನು ಮುಂದೂಡುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ ಅಂತಾ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
Had a detailed phone conversation with Union MoHUA Minister Sri @mlkhattar Ji now, seeking his immediate intervention against the State Government’s unjust Bengaluru Metro fare hike proposed to start from Monday.
— Tejasvi Surya (@Tejasvi_Surya) February 7, 2026
I pointed out that Bengaluru already has the costliest Metro fares… https://t.co/14m9WaEIHf pic.twitter.com/no5U8wrZow
ನಮ್ಮ ಮೆಟ್ರೋ ದೇಶದಲ್ಲೇ ದುಬಾರಿ ಮೆಟ್ರೋ ಸೇವೆಗಳಲ್ಲಿ ಒಂದಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಪ್ರಯಾಣ ದರಗಳಲ್ಲಿ ಇರುವ ವ್ಯತ್ಯಾಸ ಹಾಗೂ ಹೆಚ್ಚಳದಿಂದ ಸಾರ್ವಜನಿಕರಿಗೆ ಆಗುವ ಹೊರೆಯನ್ನು ಕುರಿತು ಅವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.
ಟಿಕೆಟ್ ದರ ಏರಿಕೆಯಿಂದ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆ ಆಗಲಿದೆ ಹಾಗೂ ಸಾರ್ವಜನಿಕ ಸಾರಿಗೆಯ ಬಳಕೆಗೆ ಅಡ್ಡಿ ಆಗಬಹುದು ಎಂಬ ಕಾರಣದಿಂದ ಪ್ರಸ್ತಾವಿತ ದರ ಹೆಚ್ಚಳವನ್ನು ತಾತ್ಕಾಲಿಕವಾಗಿ ಮುಂದೂಡಲು ಸೂಚಿಸಲಾಗಿದೆ. ಈ ಹಿನ್ನೆಲೆ ಸೋಮವಾರ ಅಂದರೆ ಫೆಬ್ರವರಿ 9ರಿಂದ ಮೆಟ್ರೋ ಟಿಕೆಟ್ ದರ ಏರಿಕೆಯಾಗುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಮತ್ತೊಂದೆಡೆ, ಸಂಸದ ಪಿ.ಸಿ. ಮೋಹನ್ ಅವರು ಮಾತನಾಡಿ, ನಾವು ಬೆಂಗಳೂರು ಸಂಸದರು ಕೇಂದ್ರ ಸಚಿವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸಿದ್ದು, ಅದರ ಬಳಿಕ ಕೇಂದ್ರ ನಗರಾಭಿವೃದ್ಧಿ ಸಚಿವರು ಬಿಎಂಆರ್‌ಸಿಎಲ್‌ಗೆ ದರ ಪರಿಷ್ಕರಣೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ಎಲ್ಲಿಯೂ ದರ ಹೆಚ್ಚಳಕ್ಕೆ ಸೂಚಿಸಿಲ್ಲ. ಪ್ರಯಾಣಿಕರ ಮನವಿಯನ್ನು ಪರಿಗಣಿಸಿ ಸದ್ಯಕ್ಕೆ ಪರಿಷ್ಕರಣೆಯನ್ನು ಮುಂದೂಡಲಾಗಿದೆ. ಆದ್ದರಿಂದ ಸೋಮವಾರದಿಂದ ಮೆಟ್ರೋ ದರ ಪರಿಷ್ಕರಣೆ ಜಾರಿಗೆ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications