ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆರಂಭ

ಬೆಂಗಳೂರು, ಸೆಪ್ಟೆಂಬರ್ 09: ಬಿಎಂಆರ್‌ಸಿಎಲ್ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರವನ್ನು ಆರಂಭಿಸಿದೆ. ಬೆಳಗ್ಗೆ ಮತ್ತು ಸಂಜೆ ಮೂರು ಗಂಟೆ ಮಾತ್ರ ಮೆಟ್ರೋ ರೈಲು ಸಂಚಾರ ನಡೆಸಲಿದೆ.

Recommended Video

      ಮೆಟ್ರೋ ಕಾರ್ಡ್ ರಿಚಾರ್ಜ್ ಮಾಡಿಸಿದ್ರಾ? ಹಂಗಾದ್ರೆ.. ಗೋವಿಂದ | Oneindia Kannada

      ಬುಧವಾರ ನಾಗಸಂದ್ರ-ಯೆಲಚೇನಹಳ್ಳಿ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. ನೇರಳೆ ಮಾರ್ಗದಲ್ಲಿ ಸೋಮವಾರ ಮೆಟ್ರೋ ರೈಲಿನ ಸಂಚಾರ ಆರಂಭವಾಗಿತ್ತು.

      ಬಿಎಂಆರ್‌ಸಿಎಲ್ ಪ್ರಕಟಣೆಯಂತೆ ಹಸಿರು ಮಾರ್ಗದಲ್ಲಿ ರೈಲು ಬೆಳಗ್ಗೆ 8 ರಿಂದ 11 ಮತ್ತು ಸಂಜೆ 4.30 ರಿಂದ 7.30ರ ತನಕ ಸಂಚಾರ ನಡೆಸಲಿದೆ. ಜನರು ಬಿಎಂಆರ್‌ಸಿಎಲ್ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಮನವಿ ಮಾಡಲಾಗಿದೆ.

      Namma Metro Green Line services resumed today

      ಬೆಳಗ್ಗೆ 7 ರಿಂದ 9ಗಂಟೆ ತನಕ ಸಂಚಾರ: ಬಿಎಂಆರ್‌ಸಿಎಲ್ ಸೆಪ್ಟೆಂಬರ್ 11ರಿಂದ ಮೆಟ್ರೋ ರೈಲು ಸಂಚಾರ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಹೇಳಿದೆ. ಶುಕ್ರವಾರ ಬೆಳಗ್ಗೆ 7 ರಿಂದ ರಾತ್ರಿ 9ರ ತನಕ ರೈಲು ಓಡಲಿದೆ. ಪೀಕ್ ಅವರ್‌ನಲ್ಲಿ 5 ನಿಮಿಷ, ಉಳಿದ ಸಮಯದಲ್ಲಿ 10 ನಿಮಿಷಕ್ಕೊಂದು ರೈಲು ಸಂಚಾರ ನಡೆಸಲಿದೆ.

      5 ತಿಂಗಳ ಬಳಿಕ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಿದೆ. ಬಿಎಂಆರ್‌ಸಿಎಲ್ ಮಾರ್ಗಸೂಚಿ ಪ್ರಕಾರ 50 ಜನರು ಮಾತ್ರ ನಿಲ್ದಾಣಕ್ಕೆ ಪ್ರವೇಶಿಸಬಹುದಾಗಿದೆ. ಒಮ್ಮೆ ರೈಲಿನಲ್ಲಿ 400 ಜನರು ಸಂಚಾರ ಮಾಡಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+