• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೂನ್ 21ರಿಂದ ಮೆಟ್ರೋ ಸಂಚಾರ ಆರಂಭ; ಪ್ರಯಾಣಿಕರಿಗೆ ಮಾರ್ಗಸೂಚಿ ಪ್ರಕಟ

|
Google Oneindia Kannada News

ಬೆಂಗಳೂರು, ಜೂನ್ 19: ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಜೂನ್ 21ರಿಂದ ಅನ್‌ಲಾಕ್ ಘೋಷಣೆ ಮಾಡಲಾಗಿದ್ದು, ಅನ್‌ಲಾಕ್‌ನಲ್ಲಿ ಸಾರ್ವಜನಿಕ ಸಾರಿಗೆಗೆ ಅವಕಾಶ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಬಿಎಂಟಿಸಿ ಒಳಗೊಂಡಂತೆ ಮೆಟ್ರೋ ರೈಲುಗಳ ಓಡಾಟಕ್ಕೆ ಅನುಮತಿ ನೀಡಲಾಗಿದ್ದು, ಶೇ 50ರಷ್ಟು ಪ್ರಯಾಣಿಕರೊಂದಿಗೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ಕೊರೊನಾ ಸೋಂಕು ಹೆಚ್ಚಳವಾದ ಕಾರಣ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದ ದಿನದಿಂದ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿತ್ತು. ಏಪ್ರಿಲ್ 28ರಿಂದ ಮೆಟ್ರೋ ರೈಲುಗಳ ಓಡಾಟ ನಿಂತಿತ್ತು. ಇದೀಗ ಜೂನ್ 21ರಿಂದ ಮೆಟ್ರೋ ಓಡಾಟ ಮತ್ತೆ ಆರಂಭವಾಗಲಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ. ವೀಕೆಂಡ್ ಕರ್ಫ್ಯೂ ಕಾರಣ ಶನಿವಾರ ಹಾಗೂ ಭಾನುವಾರ ಮೆಟ್ರೋ ಸೇವೆ ಸ್ಥಗಿತವಾಗಲಿದೆ. ಹಸಿರು, ನೇರಳೆ ಎರಡೂ ಮಾರ್ಗಗಳಲ್ಲಿ ರೈಲು ಓಡಾಡಲಿದ್ದು, ಬೆಳಿಗ್ಗೆ 7ರಿಂದ ಬೆಳಿಗ್ಗೆ 11 ಹಾಗೂ ಸಂಜೆ 3ರಿಂದ ಸಂಜೆ 6ರವರೆಗೆ ಐದು ನಿಮಿಷಗಳ ಅಂತರದಲ್ಲಿ ರೈಲುಗಳ ಓಡಾಟವಿರಲಿದೆ.

ರಾಜ್ಯ ಅನ್‌ಲಾಕ್ 2.0; ಜೂನ್ 21ರಿಂದ ಏನಿರುತ್ತೆ? ಏನಿರಲ್ಲ? ರಾಜ್ಯ ಅನ್‌ಲಾಕ್ 2.0; ಜೂನ್ 21ರಿಂದ ಏನಿರುತ್ತೆ? ಏನಿರಲ್ಲ?

ಅನ್‌ಲಾಕ್ ಘೋಷಣೆ ಬೆನ್ನಲ್ಲೇ "ನಮ್ಮ ಮೆಟ್ರೋ" ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಅವುಗಳ ವಿವರ ಮುಂದಿದೆ...

* ಮೆಟ್ರೋ ಸ್ಮಾರ್ಟ್ ಕಾರ್ಡ್ ಇರುವವರಿಗೆ ಮಾತ್ರ ಅವಕಾಶ

* ಬಿಎಂಆರ್‌ಸಿಎಲ್ ವೆಬ್‌ಸೈಟ್ ಹಾಗೂ ಆನ್‌ಲೈನ್‌ ಟಾಪ್‌ಅಪ್ ಮೂಲಕ ಸ್ಮಾರ್ಟ್ ಕಾರ್ಡ್ ಖರೀದಿ ಹಾಗೂ ರಿಚಾರ್ಜ್ ಮಾಡಿಸಿಕೊಳ್ಳಲು ಸಲಹೆ. ಮೆಟ್ರೋ ನಿಲ್ದಾಣಗಳಲ್ಲಿ ಸ್ಮಾರ್ಟ್ ಕಾರ್ಡ್ ಖರೀದಿಗೆ ಅವಕಾಶವಿದೆ. ಹಣ ನೀಡಿ ಸ್ಮಾರ್ಟ್ ಕಾರ್ಡ್ ಖರೀದಿಸಲು ಅವಕಾಶವಿದ್ದರೂ ಕೊರೊನಾ ಸೋಂಕು ತಡೆ ಕಾರಣಕ್ಕೆ ನಗದುರಹಿತ ಖರೀದಿಗೆ ಸಲಹೆ ನೀಡಲಾಗಿದೆ.

* ಎಲ್ಲಾ ಪ್ರಯಾಣಿಕರಿಗೂ ಥರ್ಮಲ್ ಸ್ಕ್ರೀನಿಂಗ್

* ಮೆಟ್ರೋ ಪ್ರವೇಶಕ್ಕೂ ಮುನ್ನ ಹ್ಯಾಂಡ್ ಸ್ಯಾನಿಟೈಸರ್ ಬಳಕೆ

* ಎಸ್ಕಲೇಟರ್ ಬಳಕೆಯಲ್ಲೂ ಅಂತರ ಕಾಯ್ದುಕೊಳ್ಳಲು ಸೂಚನೆ

* ಒಂದು ಬಾರಿ ನಾಲ್ಕು ಜನರಿಗೆ ಲಿಫ್ಟ್ ಬಳಸಲು ಅವಕಾಶ

* ಫೇಸ್‌ ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ

ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಆಗಲಿದ್ದು, ಕೊರೊನಾ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ. 5ಕ್ಕಿಂತ ಕಡಿಮೆ ಇರುವ ಹದಿನಾರು ಜಿಲ್ಲೆಗಳಿಗೆ ಸಿಎಂ ಯಡಿಯೂರಪ್ಪ ಅನ್‌ಲಾಕ್ ಘೋಷಣೆ ಮಾಡಿದ್ದಾರೆ.

English summary
BMRCL Namma metro issues guidelines to passengers as unlock begins from june 21 in bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X