BREAKING: ಬೆಂಗಳೂರು 'ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ

ಬೆಂಗಳೂರು, ಸೆಪ್ಟಂಬರ್ 02: ಬರೋಬ್ಬರಿ 73ಕಿಲೋ ಮೀಟರ್ ಜಾಲ ಹೊಂದಿರುವ ಬೆಂಗಳೂರು ನಮ್ಮ ಮೆಟ್ರೋ ದೇಶದ ಎರಡನೇ ಅತೀ ದೊಡ್ಡ ಮೆಟ್ರೋ ನಗರದ ಸಾಲಿಗೆ ಸೇರಿದೆ. ದಿನೇ ದಿನೆ ಹೆಚ್ಚಾಗುತ್ತಿರುವ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ 'ನಮ್ಮ ಮೆಟ್ರೋ' ಹೊಸ ಉಪಕ್ರಮ ತರುತ್ತಿದೆ. ಇದೀಗ ಮೆಜೆಸ್ಟಿಕ್ ಇಂಟರ್‌ಚೇಂಜ್ ನಿಲ್ದಾಣದಲ್ಲಿ ಹೊಸ ಸೌಲಭ್ಯವೊಂದನ್ನು ಕಲ್ಪಿಸಿದೆ.

ಹೌದು, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರ ಸೆಪ್ಟಂಬರ್ 02ರಂದು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಯಿಸುವ ಮತ್ತೊಂದು ಪ್ರವೇಶ ದ್ವಾರವನ್ನು ತೆರೆಯಲಾಗಿದೆ. ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ.

Namma Metro has Open Additional Exit Gate in Majestic Interchange Station for Commuters

ಈ ಕುರಿತು ನಮ್ಮ ಮೆಟ್ರೋ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವರ್ಷ ಮೇ 21ರಂದು ಸಹ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರವೇಶ ದ್ವಾರ ತೆರೆಯಲಾಗಿತ್ತು. ಇದೀಗ ಮತ್ತೊಂದು ಪ್ರವೇಶ ದ್ವಾರ ತೆರೆಯುವ ಮೂಲಕ ನಿಲ್ದಾಣದಲ್ಲಿ ದಟ್ಟಣೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚುತ್ತಿರುವ ಪ್ರಯಾಣಿಕರ ನಿರ್ವಹಣೆಯೇ ಸವಾಲು

ಬೆಂಗಳೂರು ಮೆಟ್ರೋ ಸದ್ಯ ಹಸಿರು ಮಾರ್ಗ ಹಾಗೂ ನೇರಳೆ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತದೆ. ಈ ಮಾರ್ಗದಲ್ಲಿ 56 ರೈಲುಗಳು ನಿತ್ಯ ಓಡಾಡುತ್ತವೆ. ನಿತ್ಯ 07 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಮೆಟ್ರೋ ಅವಲಂಬಿಸಿದ್ದಾರೆ. ಕಳೆದ ತಿಂಗಳು ಒಂದೇ ದಿನ 9 ಲಕ್ಷಕ್ಕೂ ಅಧಿಕ ಜನರು ಪ್ರಯಾಣಿಸಿದ್ದಾರೆ. ಆದರೆ ಸಮಸ್ಯೆ ಎಂದರೆ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿದೆ. ಆದರೆ ಮೆಟ್ರೋ ಕೋಚ್‌ಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ದಟ್ಟಣೆ ನಿರ್ವಹಣೆ ಮಾಡುವುದು ಸವಾಲಾಗಿದೆ.

ಅದಲ್ಲದೇ ಮೆಜೆಸ್ಟಿಕ್ ಮೆಟ್ರೋ ಇಂಟರ್‌ಚೇಂಜ್ ನಿಲ್ದಾಣ ಆಗಿದೆ. ಇಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ. ರೈಲುಗಳ ಆವರ್ತನ ಸಮಯ ಇಳಿಕೆ ಮಾಡಿದರೂ ಸಹ ಪ್ರಯಾಣಿಕರಿಗೆ ಸಮಸ್ಯೆ ತಪ್ಪುತ್ತಿಲ್ಲ. ಹೀಗಾಗಿ ರೈಲು ಬದಲಾವಣೆಗೆ ಅನುಕೂಲವಾಗುವಂತೆ ನಿಲ್ದಾಣದಲ್ಲಿ ತಕ್ಕ ಮಟ್ಟಿನ ದಟ್ಟಣೆ ಇಳಿಕೆ ಮೆಟ್ರೋ ಅಧಿಕಾರಿಗಳು ಹೊಸ ಪ್ರವೇಶ ದ್ವಾರದ ವ್ಯವಸ್ಥೆ ಮಾಡಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+