ನಾಯಂಡಹಳ್ಳಿ-ಬೈಯಪ್ಪನಹಳ್ಳಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರು, ಡಿಸೆಂಬರ್ 24: ನಾಯಂಡಹಳ್ಳಿ-ಬೈಯಪ್ಪನಹಳ್ಳಿ ನೇರಳೆ ಮೆಟ್ರೋ ಮಾರ್ಗದಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಮೈಸೂರು ರಸ್ತೆ-ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ರೈಲುಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ, ಇದೇ ಮಾರ್ಗದ ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಕಳೆದ ವಾರವಷ್ಟೇ ಮೆಟ್ರೋ ಪಿಲ್ಲರ್ ನಲ್ಲಿ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ದೆಹಲಿಯ ಐಐಎಸ್‌ಸಿಯಿಂದ ತಜ್ಞರು ಬಂದು ಪರಿಶೀಲನೆ ನಡೆಸಿದ್ದರು. ಇದಾದ ಬಳಿಕ ಕೆಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು.

ಹೊಸ ವರ್ಷಾಚರಣೆಗೆ ಇನ್ನೇನು ಕೇವಲ ಒಂದೇ ವಾರ ಬಾಕಿ ಉಳಿದಿದೆ. ಅಷ್ಟರೊಳಗೆ ದುರಸ್ತಿ ಕಾಮಗಾರಿ ಮುಗಿಸಬೇಕು ಎನ್ನುವ ಕಾರಣಕ್ಕೆ ಡಿಸೆಂಬರ್ 28-30ರವರೆಗೆ ಮೂರು ದಿನಗಳ ಕಾಲ ಎಂಜಿ ರಸ್ತೆಯಿಂದ ಮೆಟ್ರೋ ದುರಸ್ತಿ ಕಾರ್ಯ ಆರಂಭಿಸುವವರಿದ್ದರು. ಆದರೆ ಅದಕ್ಕೂ ಮೊದಲೇ ಕೆಲವು ತಾಂತ್ರಿಕ ದೋಷಗಳು ಕಂಡು ಬಂದಿದ್ದು, ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.












Click it and Unblock the Notifications