Namma metro: ಟಿ-20 ಪಂದ್ಯ ಹಿನ್ನೆಲೆ ಡಿಸೆಂಬರ್‌ 3ರಂದು ಮೆಟ್ರೋ ಸೇವೆ ವಿಸ್ತರಣೆ, ಸಮಯ, ಮಾರ್ಗಗಳು, ಟಿಕೆಟ್‌ ದರಗಳ ಮಾಹಿತಿ

ಬೆಂಗಳೂರು, ಡಿಸೆಂಬರ್‌, 02: ಬೆಂಗಳೂರು ನಗರ ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಹಬ್ಬಗಳು ಸೇರಿದಂತೆ ವಿಶೇಷ ಕಾರ್ಯಕ್ರಮಗಳ ಸಮದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ತಡೆಯುವ ಉದ್ದೇಶದಿಂದ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಣೆ ಮಾಡುತ್ತಲೇ ಬಂದಿದೆ. ಇದೀಗ ಮತ್ತೆ ನಾಳೆ (ಡಿಸೆಂಬರ್‌ 03)ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ- 20 ಪಂದ್ಯ ಇರುವ ಹಿನ್ನೆಲೆ ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಣೆ ಮಾಡಿದೆ. ಸಮಯಗಳು ಹಾಗೂ ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.

ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಣೆ

ಭಾನುವಾರ (ಡಿಸೆಂಬರ್ 3) ನಗರದ ಚಿನ್ನಸ್ಚಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯ ನಡುವೆ ಅಂತಿಮ ಟಿ-20 ಕದನ ನಡೆಯಲಿದ್ದು, ಈ ಹಿನ್ನೆಲೆ ಪಂದ್ಯ ವೀಕ್ಷಣೆ ಮಾಡಲು ಕ್ರಿಕೆಟ್ ಅಭಿಮಾನಿ ದಂಡೇ ಆಗಮಿಸುವ ನಿರೀಕ್ಷೆಯಿದೆ. ಆದ್ದರಿಂದ ಬೆಂಗಳೂರು ಮೆಟ್ರೋ ರೈಲು ನಿಗಮವು ಮೆಟ್ರೋ ರೈಲುಗಳ ಸೇವೆಯನ್ನು ವಿಸ್ತರಿಸಿದೆ.

Namma metro: Metro service expansion on December 3, Know timings, routes, ticket prices

ಯಾವ್ಯಾವ ಮಾರ್ಗಗಳಲ್ಲಿ ಮೆಟ್ರೋ ಸೇವೆ?

ನಗರದ ವಿವಿದೆಢೆಯಿಂದ ಪಂದ್ಯವನ್ನು ವೀಕ್ಷಿಸಲು ಸಾರ್ವಜನಿಕರು, ಕ್ರಿಕೆಟ್ ಪ್ರೇಮಿಗಳು ಆಗಮಿಸಲಿದ್ದು, ಅವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್‌ ತನ್ನ ಆದೇಶ ಪತ್ರದಲ್ಲು ಮಾಹಿತಿ ನೀಡಿದೆ. ಬೈಯ್ಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ಸಂಚಾರ ಸೇವೆಯಲ್ಲಿ ವಿಸ್ತರಣೆ ಮಾಡಲಾಗಿದೆ. ರಾತ್ರಿ ಪಂದ್ಯವನ್ನು ಮುಗಿಸಿಕೊಂಡು ಯಾವುದೇ ಭೀತಿಯಿಲ್ಲದೆ ಆರಾಮಾಗಿ ಕ್ರೀಡಾ ಅಭಿಮಾನಿಗಳು ಮೆಟ್ರೋದಲ್ಲಿ ಪ್ರಯಾಣ ಮಾಡಬಹುದಾಗಿದೆ.

ಮೆಟ್ರೋ ಸೇವೆ ಸಮಯಗಳ ವಿವರ

ನೇರಳೆ ಮತ್ತು 8 ಹಸಿರು ಮಾರ್ಗದಲ್ಲಿರುವ ರೈಲುಗಳ ಸೇವೆಯನ್ನು ರಾತ್ರಿ 11:45ರ ವರೆಗೆ ವಿಸ್ತರನೆ ಮಾಡಲಾದೆ. ಡಿಸೆಂಬರ್​ 3ರಂದು ಪೇಪರ್​ ಟಿಕೆಟ್​ಗಳನ್ನು ಹಂಚಲಾಗುತ್ತದೆ ಎಂದು ತಿಳಿಸಿದೆ. ಬರುವ ಮತ್ತು ಹೋಗುವ ಪ್ರಯಾಣಕ್ಕೆ 50 ರೂಪಾಯಿ ಟಿಕೆಟ್ ನಿಗದಿಪಡಿಸಿ ಬೆಂಗಳೂರು ಮೆಟ್ರೋ ರೈಲು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಪೇಪರ್ ಟಿಕೆಟ್​ ಸಿಗಲಿದೆ. ಕಾರ್ಡ್​ಗಳ ಜೊತೆಗೆ ಸ್ಮಾರ್ಟ್ ಕಾರ್ಡ್ ಹಾಗೂ ಎನ್​ಸಿಎಂಸಿ ವ್ಯವಸ್ಥೆಯನ್ನು ಕೂಡ ಪ್ರಯಾಣಿಕರು ಉಪಯೋಗಿಸಬಹುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+