Namma Metro: ಪಿಲ್ಲರ್ ಕುಸಿತ, ಮೃತ ತೇಜಸ್ವಿನಿ ತಂದೆ ಮದನ್ ಕೇಳಿದ ಪ್ರಶ್ನೆಗೆ ಸರ್ಕಾರದ ಬಳಿ ಉತ್ತರವಿದೆಯೇ?
ಬೆಂಗಳೂರು, ಜನವರಿ 12: ಸರ್ಕಾರಕ್ಕೆ ನಾನೇ ಒಂದು ಕೋಟಿ ರೂಪಾಯಿ ಹಣ ನೀಡುತ್ತೇನೆ. ನನಗೆ ಮೃತಪಟ್ಟ ಮಗಳು ಮತ್ತು ಮೊಗ್ಗನನ್ನು ಮರಳಿ ಕೊಡುವಿರಾ? ಎಂದು ತೇಜಸ್ವಿನಿ ತಂದೆ ಮದನ್ ಹೇಳಿದ್ದಾರೆ.
ಮಂಗಳವಾರಷ್ಟೇ ಬೆಂಗಳೂರಿನಲ್ಲಿ ನಡೆದ ಮೆಟ್ರೋ ಪಿಲ್ಲರ್ ಕುಸಿತ ದುರಂತದಲ್ಲಿ ಮಗಳು ಸಾಫ್ಟವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ಮೊಮ್ಮಗನನ್ನು ಕಳೆದುಕೊಂಡಿರುವ ತಂದೆ ಮದನ್ ಅವರು ದುಃಖದ ನುಡಿಗಳಿವು.
ಘಟನೆ ನಡೆದ ದಿನ ರಾತ್ರಿಯೇ ತೇಜಸ್ವಿನಿ ಮತ್ತು ಪುಟ್ಟ ಕಂದ ವಿಹಾನ್ ಅವರ ಮೃತದೇಹವನ್ನು ದಾವಣಗೆರೆಯಲ್ಲಿನ ತೇಜಸ್ವಿನಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ತೇಜಸ್ವಿನಿ ತಂದೆ ಮದನ್ ಅವರು, ಘಟನೆ ಬಳಿಕ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ (BMRCL) 20 ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ ಎಂದರು.

ಕಪ್ಪು ಪಟ್ಟಿಗೆ ಸೇರಿಸಲು ಒತ್ತಾಯ
ಆದರೆ ನನಗೆ ಪರಿಹಾರ ಬೇಕಿಲ್ಲ. ನಾನೇ ಸರ್ಕಾರಕ್ಕೆ ಒಂದು ಕೋಟಿ ರೂಪಾಯಿ ನೀಡುತ್ತೇನೆ. ಅಗಲಿದ ಮಗಳು ಹಾಗೂ ಮೊಮ್ಮಗನ ಜೀವ ಹಿಂತಿರುಗಿಸುವಿರಾ ಎಂದು ಮುಖ್ಯಮಂತ್ರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಪರಿಹಾರ ಘೋಷಣೆ ಮುಖ್ಯವಲ್ಲ ದಯವಿಟ್ಟು ಘಟನೆಗೆ ಕಾರಣರಾದವರನ್ನು ಬಂಧಿಸಬೇಕು.
ಗುತ್ತಿಗೆದಾರರು ಹಾಗೂ ನಾಗಾರ್ಜುನ್ ಕನ್ಟ್ರಕ್ಷನ್ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ. ನಗರದ ಸಾಕಷ್ಟು ಕಡೆಗಳಲ್ಲಿ ಕಾಮಗಾರಿಗಳು ನಡೆಯುತ್ತಿವೆ. ನೂರಾರು ಜನರ ಜೀವಗಳ ರಕ್ಷಿಸಬೇಕಿದೆ ಎಂದು ಅವರು ಆಗ್ರಹಿಸಿದರು.
ಪರಿಹಾರ ಘೋಷಣೆ ಮಾಡಿರುವ ಮುಖ್ಯಮಂತ್ರಿಗಳು ಯಾವುದೇ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಅವರು ಮೊದಲು ಈ ಕೆಲಸ ಮಾಡಿದೆ. ಹೆಚ್ಚಿನ ಸಮಯವನ್ನು ಇಂತಹ ಘಟನೆಗಳನ್ನು ತಡೆಯಲು, ಆಗಿರುವ ದುರಂತಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ. ಜನರ ಜೀವದ ಅಪಾಯದಲ್ಲಿರುವುದನ್ನು ಗಂಭೀರವಾಗಿ ಪರಿಗಣಿಸಿ ಎಂದು ಅವರು ಒತ್ತಾಯಿಸಿದರು. ರಾತ್ರಿಯೇ ಮೃತ ಮಗಳು ಹಾಗೂ ಮೊಮ್ಮನ ಅಂತಿಮ ವಿಧಿವಿಧಾನ ನೆರವೇರಿಸಿದರು.

ಎಫ್‌ಐಆರ್ ದಾಖಲು: 3 ಮಂದಿ ಅಮಾನತು
ಘಟನೆ ಸಂಬಂಧ ಬಿಎಂಆರ್‌ಸಿಎಲ್ ಹಾಗೂ ಗುತ್ತಿಗೆದಾರ ಕಂಪನಿ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕ್ರಮಕ್ಕೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೆ ಕಿರಿಯ ಎಂಜಿನಿಯರ್ ಪ್ರಭಾಕರ್, ನಿರ್ದೇಶಕ ಚೈತನ್ಯ, ವಿಶೇಷ ಯೋಜನಾ ವ್ಯವಸ್ಥಾಪಕ ಮೆಥಾಯಿ, ಯೋಜನಾ ವ್ಯವಸ್ಥಾಪಕ ವಿಕಾಸ್ ಸಿಂಗ್, ಮೇಲ್ವಿಚಾರಕ ಲಕ್ಷ್ಮಿಪಥಿ, ಬಿಎಂಆರ್‌ಸಿಲ್ ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬಂಡೇಕರಿ ಹಾಗೂ ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಪ್ರರಕಣ ಗೋವಿಂದಪುರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಪಿಲ್ಲರ್ ಕುಸಿತ ಸಂಬಂಧ ಬೆಂಗಳೂರು ಮೆಟ್ರೋ ರೈಲ್ ಕಾರ್ಫೋರೇಷನ್ ಲಿಮಿಟೆಡ್ (BMRCL) ಬುಧವಾರವಷ್ಟೇಮೂರು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications