Namma Metro ಪ್ರಯಾಣಿಕರ ಗಮನಕ್ಕೆ: ಆಗಸ್ಟ್ 29 ರವರೆಗೆ 'ನೇರಳೆ ಮಾರ್ಗ'ದಲ್ಲಿ ಮೆಟ್ರೋ ಸೇವೆ ವ್ಯತ್ಯಯ

ಬೆಂಗಳೂರು, ಆಗಸ್ಟ್ 14: ಬೆಂಗಳೂರು ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ (Namma Metro Purpl Line) ಗುರುವಾರ ಆಗಸ್ಟ್ 17ರಿಂದ ನಿರಂತರವಾಗಿ ಕೆಲವು ದಿನಗಳ ಕಾಲ ರೈಲು ಸಂಚಾರ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ.

ನಮ್ಮ ಮೆಟ್ರೋ ನೇರಳೆ ಮಾರ್ಗವನ್ನು ಎರಡು ಕಡೆಗಳಲ್ಲಿ ವಿಸ್ತರಣೆ ಭಾಗವಾಗಿ ಕೇಂಗೇರಿಯಿಂದ ಚಲಘಟ್ಟ ಹಾಗೂ ಕೆ.ಆರ್‌.ಪುರಂನಿಂದ ಬೈಯಪ್ಪನಹಳ್ಳಿವರೆಗೆ ಮಾರ್ಗ ನಿರ್ಮಾಣ ಪೂರ್ಣಗೊಂಡಿದೆ. ಆದರೆ ಇದೀಗ ಆ ಮಾರ್ಗದಲ್ಲಿ ಸಿಗ್ನಲಿಂಗ್ ವ್ಯವಸ್ಥೆ ಅಳವಡಿಕೆ ಮತ್ತು ಪರೀಕ್ಷೆ ಕಾರ್ಯ ನಡೆಸಲಾಗುತ್ತಿದೆ. ಹೀಗಾಗಿ ಈ ಮಾರ್ಗದ ರೈಲುಗಳ ಸೇವೆಯಲ್ಲಿ ಬದಲಾವಣೆ ಆಗಿದೆ.

metro-service-will-disrupted-till-august-29th

ಈ ಹಿಂದೆ ಆಗಸ್ಟ್ 14ರವರೆಗೆ ಮೆಟ್ರೋ ಸೇವೆ ವ್ಯತ್ಯಯವಾಗಿತ್ತು. ಇದೀಗ ಮತ್ತೆ ಆಗಸ್ಟ್ 17, 20, 23, 24 ಹಾಗೂ 29ರಂದು ನೇರಳೆ ಮಾರ್ಗದ ಸೇವೆಯಲ್ಲಿ ವಿವಿಧ ಅವಧಿಗಳಲ್ಲಿ ವ್ಯತ್ಯಯವಾಗಲಿದೆ. ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ನೇರಳೆ ಮಾರ್ಗದಲ್ಲಿ ಸೇವೆ ವ್ಯತ್ಯಯದ ಸಮಯ-ದಿನಾಂಕ

* ಆಗಸ್ಟ್​ 17ರಂದು ಗುರುವಾರ ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ಮಧ್ಯೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ.

* ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ, ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5ಗಂಟೆಯಿಂದ ರಾತ್ರಿ 11 ರವರೆಗೆ ರೈಲು ಸೇವೆಗಳು ಲಭ್ಯವಿರುತ್ತದೆ

* ಆಗಸ್ಟ್​ 23 ಮತ್ತು 24ರಂದು ಕೆಂಗೇರಿಯಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ಮಧ್ಯೆ ಬೆಳಗ್ಗೆ 7 ಗಂಟೆ ತನಕ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈ ಅವಧಿಯಲ್ಲಿ ಮೈಸೂರು ರಸ್ತೆಯಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ‌ಸಂಚಾರ ಸೇವೆ ಇರಲಿದೆ. ಬೆಳಗ್ಗೆ 7.00 ಗಂಟೆಯ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಸೇವೆ ದೊರೆಯಲಿದೆ.

metro-service-will-disrupted-till-august-29th

* ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣವರೆಗೆ ರೈಲುಗಳ ಸೇವೆ ಅಂತ್ಯಗೊಳ್ಳಲಿದೆ. ಸಾಮಾನ್ಯ ದಿನಗಳಲ್ಲಿ ಮೆಟ್ರೋ ರೈಲುಗಳು ಕೆಂಗೇರಿ ಸಂಚರಿಸುತ್ತಿದ್ದವು. ಬೆಳಗ್ಗೆ 7 ಗಂಟೆಯ ನಂತರ ಬೈಯಪ್ಪನಹಳ್ಳಿಯಿಂದ ಕಂಗೇರಿ ನಿಲ್ದಾಣದ ಮಾರ್ಗಗಳ ಮಧ್ಯೆ ಎಂದಿನಂತೆ ಮೆಟ್ರೋ ಸಂಚರಿಸಲಿವೆ.

* ಆಗಸ್ಟ್​ 20 ಮತ್ತು 29ರಂದು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೆ.ಆರ್‌ ಪುರಂನಿಂದ ವೈಟ್‌ ಫೀಲ್ಡ್ (ಕಾಡುಗೋಡಿ) ಮಾರ್ಗಗಳ ಮಧ್ಯೆ ಬೆಳಗ್ಗೆ 7 ಗಂಟೆ ತನಕ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ ಎಂದು ತಿಳಿಸಲಾಗಿದೆ.

* ನೇರಳೆ ಮಾರ್ಗದ ಹೊರತು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮೆಟ್ರೋ ಸೇವೆಯಲ್ಲಿನ ವ್ಯತ್ಯಯ, ಸಮಯ ಬದಲಾವಣೆ ಗಮನಿಸಿ ಈ ಮಾರ್ಗದಲ್ಲಿ ಸಂಚರಿಸಬೇಕು ಎಂದು ನಮ್ಮ ಮೆಟ್ರೋ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+