Namma Metro: ನಾಳೆಯಿಂದ 'ನೇರಳೆ ಮಾರ್ಗದ' ರೈಲುಗಳ ಸಮಯ ಬದಲು: ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲುಗಳು
ಬೆಂಗಳೂರು, ಜುಲೈ 05: ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಜಾಲ ಹೊಂದಿರುವ ನಮ್ಮ ಮೆಟ್ರೋ (Namma Metro) ಸೇವೆಗೆ ವ್ಯಾಪಕ ಸಂದನೆ ಸಿಕ್ಕಿದೆ. ಇದಕ್ಕೆ ಧನ್ಯವಾದ ತಿಳಿಸಿರುವ BMRCL ಇದೀಗ ನೇರಳೆ ಮಾರ್ಗ ರೈಲುಗಳ ಸಂಚಾರ ಸಮಯವನ್ನು ಬದಲಾವಣೆ ಮಾಡಿದೆ. ಅಲ್ಲದೇ ಮೆಜೆಸ್ಟಿಕ್ ನಿಂದ ಹೆಚ್ಚುವರಿ ರೈಲು ಸೇವೆ ನೀಡಿರುವುದಾಗಿ ತಿಳಿಸಿದೆ.
ಈ ಹೆಚ್ಚುವರಿ ರೈಲು ಸೇವೆ ಹಾಗೂ ಪರಿಷ್ಕೃತ ರೈಲು ಸಂಚಾರ ಸೇವೆಯ ವೇಳಾಪಟ್ಟಿಯು ನಾಳೆ ಜುಲೈ 06ರಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ. ರೈಲುಗಳ ಸಂಚಾರ ಸಮಯ, ಪ್ರಯಾಣಿಕರಿಗೆ ನೀಡಿರುವ ವಿಶೇಷ ಸೂಚನೆ, ಹೆಚ್ಚುವರಿ ರೈಲುಗಳ ಮಾಹಿತಿ ಇಲ್ಲಿದೆ.

ನಾಳೆ ಜುಲೈ 6ರಿಂದ ಜಾರಿಗೆ ಬರುವಂತೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚುವರಿ ರೈಲು ಸಂಚಾರ ಮಾರ್ಗದ ಮಾಹಿತಿ
ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತಿದೆ. ಈ 15 ರೈಲುಗಳಲ್ಲಿ 10 ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, 04 ರೈಲು ವೈಟ್ ಫೀಲ್ಡ್ ಮತ್ತು 01 ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ.
ಅದರಂತೆ, ನಾಳೆಯಿಂದ ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಬೆಳಗ್ಗೆ 8.48 ಗಂಟೆಗೆ, 8.58, 9.08, 9.18ಕ್ಕೆ, 9.29, 9.39, 9.50,10.00ಗಂಟೆ, 10.11, 10.21, 10.39, 10.50, 11.00, 11.22 ಸಮಯಕ್ಕೆ ಹೊರಡುತ್ತವೆ.

ರೈಲು ಆವರ್ತನಗಳ ಸಮಯದಲ್ಲಿ ಇಳಿಕೆ
ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಿಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರುತ್ತದೆ.
ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20 ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ.
ಹಸಿರು ಮಾರ್ಗದಲ್ಲಿ ಬದಲಾವಣೆ ಇಲ್ಲ
ಇನ್ನೂ ಮುಖ್ಯವಾಗಿ ಗಮನಿಸಬೇಕಾದ ವಿಷಯವೆಂದರೆ, ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಬೇಕೆಂದು BMRCL ತಿಳಿಸಿದೆ.
ಮೆಜೆಸ್ಟಿಕ್ ನಿಂದ ಹೆಚ್ಚುವರಿ ರೈಲುಗಳನ್ನು ಬಿಡುವ ಮೂಲಕ ನಮ್ಮ ಮೆಟ್ರೋ ಅಧಿಕಾರಿಗಳು ಉಂಟಾಗುತ್ತಿದ್ದ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಮೆಟ್ರೋ ಪರ್ಪಲ್ ಲೈನ್ ಸಂಪೂರ್ಣವಾಗಿ ತೆರದ ಬಳಿಕ ಹಂತ ಹಂತವಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಆಯಿತು. ಇದೀಗ ಜನ ದಟ್ಟಣೆ ಕಡಿಮೆ ಮಾಡಲು ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಹೆಚ್ಚುವರಿ 15ರೈಲು ಸೇವೆ ನಿರ್ಧಾರ ಸ್ವಾಗತಾರ್ಹವಾಗಿದೆ.
-
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications