Breaking News: ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ, ತಾಂತ್ರಿಕ ಸಮಸ್ಯೆ..Namma Metro

ಬೆಂಗಳೂರು, ಜೂನ್ 16: ಬೆಂಗಳೂರು ಮೆಟ್ರೋ ನೇರಳೆ ಮಾರ್ಗದಲ್ಲಿ ಇಂದು ಸೋಮವಾರ (ಜೂನ್ 16) ಸಂಚಾರದಲ್ಲಿ ಕೆಲವ ಹೊತ್ತು ವ್ಯತ್ಯಯವಾಯಿತು, ಪ್ರಯಾಣಿಕರು ಪರದಾಡಿದ್ದಾರೆ. ಇದು ತಾಂತ್ರಿಕ ಸಮಸ್ಯೆಯಿಂದ ಹೀಗಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ. ಹಸಿರು ಮಾರ್ಗದಲ್ಲಿ ಯಾವುದೇ ದುಷ್ಪರಿಣಾಮ ಬೀರಿಲ್ಲ ಎಂದಿನಂತೆ ಕಾರ್ಯ ನಿರ್ವಹಣೆ ಕಂಡು ಬಂದಿದೆ.

ಇಂದು ಸೋಮವಾರ ಬೆಳ್ಳಂಬೆಳಗ್ಗೆ ತಾಂತ್ರಿಕ ದೋಷದಿಂದಾಗಿ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸುಮಾರು 3 ನಿಮಿಷಗಳ ಕಾಲ ವಿಳಂಬವಾಯಿತು. ಇದರಿಂದ ಕಚೇರಿ, ಇನ್ನಿತರ ಕೆಲಸಗಳಿಗೆ ತೆರಳುವ ಉದ್ಯೋಗಿಗಳು, ಸಾರ್ವಜನಿಕರಿಗೆ ಅಡಚರಣೆ ಆಯಿತು. ಕೆಲವು ನಿಮಿಷಗಳ ಕಾಲ ನೂಕು ನುಗ್ಗಲಿನಲ್ಲಿ ಕಾಯಬೇಕಾಯಿತು. ನಂತರ ಬಿಎಂಆರ್‌ಸಿಎಲ್ ಅಧಿಕಾರಿಗಳು ಪ್ರಯಾಣಿಕರಿಗೆ ಅಪ್ಡೇಟ್ ನೀಡಿದರು.

Namma Metro Purple Line Service Disruption Today Due Technical Glitch

ನೇರಳೆ ಮಾರ್ಗದಲ್ಲಿ ಸಂಚಾರ ಸಮಸ್ಯೆ ಎದುರಾಗುತ್ತಿದ್ದಂತೆ ಅಲರ್ಟ್ ಆದ ಅಧಿಕಾರಿಗಳು ತಾಂತ್ರಿಕ ಲೋಪವನ್ನು ಯಶಸ್ವಿಯಾಗಿ ಪರಿಹರಿಸಿದ್ದಾರೆ. ಕೆಲವು ನಿಮಿಷಗಳ ಬಳಿಕ ರೈಲು ಸೇವೆಗಳು ಸಾಮಾನ್ಯ ಕಾರ್ಯಾಚರಣೆಯನ್ನು ಪುನರಾರಂಭಗೊಂಡಿವೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ಪ್ರಯಾಣಿಕರಿಗೆ ಸುಗಮ ಮತ್ತು ಪರಿಣಾಮಕಾರಿ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ನಮ್ಮ ತಂಡಗಳು ಶ್ರದ್ಧೆಯಿಂದ ಕೆಲಸ ಮಾಡುತ್ತಿವೆ ಎಂದು BMRCL ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀವಾಸ್ ರಾಜಗೋಪಾಲನ್ ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+