Namma Metro: ಪ್ರಯಾಣಿಕರೇ ಗಮನಿಸಿ, ಮತ್ತೆ ಆಗಸ್ಟ್ 27ರಂದು 'ನೇರಳೆ ಮಾರ್ಗ'ದ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು, ಆಗಸ್ಟ್ 25: ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿನ ಎರಡು ಪ್ರತ್ಯೇಕ ಕಡೆಗಳಲ್ಲಿ ರೈಲು ಸುರಕ್ಷತಾ ಮತ್ತು ಪರೀಕ್ಷೆಗಳು ನಡೆಯುವ ಸಂಬಂಧ, ಈ ಮಾರ್ಗದಲ್ಲಿ ಇದೇ ಆಗಸ್ಟ್ 27ರಂದು ಭಾನುವಾರ ಬೆಳಗ್ಗೆ ಮೆಟ್ರೋ ಸಂಚಾರ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ.

ನೇರಳೆ ಮಾರ್ಗದ ಕೆ.ಆರ್‌.ಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ, ಮಟ್ರೋ ನಿಲ್ದಾಣಗಳ ನಡುವೆ ವಿಸ್ತರಣೆ ಮಾರ್ಗಗಳನ್ನು ಕಾರ್ಯಗತಗೊಳಿಸಲಿದ್ದೇವೆ. ಈ ಸಂಬಂಧ ಅನುಕೂಲವಾಗುವಂತೆ ಇದೇ ಭಾನುವಾರ ವಿವರವಾದ ಸುರಕ್ಷತಾ, ಪರೀಕ್ಷೆಗಳನ್ನು ಕೈಗೊಳ್ಳಲೂ ಹೆಚ್ಚಿನ ಸಮಯದ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ.

namma-metro-purple-line

ಈ ಕಾರಣದಿಂದಾಗಿ ಆಗಸ್ಟ್ 27ರಂದು ಈ ಕೆಲವು ಮಾರ್ಗಗಳ ಮೆಟ್ರೋ ನಿಲ್ದಾಣಗಳ ಮಧ್ಯೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ರೈಲು ಸೇವೆಗಳು ಲಭ್ಯವಿರುವುದಿಲ್ಲ.

ಮೆಟ್ರೋ ರೈಲು ಸೇವೆ ವ್ಯತ್ಯಯ ಮಾರ್ಗಗಳು

* ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ಮಧ್ಯೆ ಸೇವೆ ಅಲಭ್ಯ.

* ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಸೇವೆ ಇರುವುದಿಲ್ಲ.

* ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ಮಧ್ಯೆ ರೈಲು ಸೇವೆ ವತ್ಯಯಗೊಳ್ಳಲಿದೆ.

namma-metro-purple-line

ಉಳಿದಂತೆ ಅಂದು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ, ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು BMRCL ಮಾಹಿತಿ ನೀಡಿದೆ.

ಇನ್ನೂ ಮಧ್ಯಾಹ್ನ 1 ಗಂಟೆಯ ನಂತರ, ಬೈಯಪ್ಪನಹಳ್ಳಿಯಿಂದ ಕಂಗೇರಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೃಷ್ಣರಾಜಪುರದಿಂದ, ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದವರೆಗೆ ಎಂದಿನಂತೆ ರಾತ್ರಿ 11.00 ಗಂಟೆಯವರೆಗೆ ಮೆಟ್ರೊ ಸಂಚಾರ ಸೇವೆ (ವಾಣಿಜ್ಯ ಸೇವೆ) ಲಭ್ಯವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+