Namma Metro: ತಾವರೆಕೆರೆ ನಿಲ್ದಾಣಕ್ಕೆ ‘ಬಿಸ್ಮಿಲ್ಲಾ ನಗರ’ ಹೆಸರು ? ಸ್ಥಳೀಯರಿಂದ BMRCLಗೆ ವಿಶೇಷ ಮನವಿ

Namma Metro: ಬೆಂಗಳೂರಿನ ನಮ್ಮ ಮೆಟ್ರೋದ ನಿಲ್ದಾಣಗಳ ಹೆಸರಿನ ವಿಚಾರವು ಇದೀಗ ಮತ್ತೆ ವಿವಾದ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರಿನ ನಮ್ಮ ಮೆಟ್ರೋದ ಗುಲಾಬಿ ಮಾರ್ಗ (Pink Line) ಶೀಘ್ರದಲ್ಲೇ ಲೋಕಾರ್ಪಣೆ ಸಿದ್ಧವಾಗಿದೆ. ನಮ್ಮ ಮೆಟ್ರೋದ ಪಿಂಕ್ ಲೈನ್ ಪ್ರಾರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಪಿಂಕ್ ಮೆಟ್ರೋ ಲೈನ್ ಕಾಳೇನ ಅಗ್ರಹಾರದ ಮಾರ್ಗದಲ್ಲಿ ಸಂಪರ್ಕ ಕಲ್ಪಿಸಲಿದೆ. ಇದೀಗ ಈ ಮಾರ್ಗದ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಬಿಸ್ಮಿಲ್ಲಾ ನಗರ ಮೆಟ್ರೋ ನಿಲ್ದಾಣ ಅಥವಾ ಬಿಸ್ಮಿಲ್ಲಾ ನಗರ - ತಾವರೆಕೆರೆ ಎಂದು ನಾಮಕರಣ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ಸ್ಥಳೀಯರು ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇನ್ನು ಈಚೆಗೆ

ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ 3 ಪ್ರಮುಖ ಮೆಟ್ರೋ ನಿಲ್ದಾಣಗಳ ಹೆಸರನ್ನು ಸ್ಥಳೀಯ ಪ್ರದೇಶಗಳ ಹೆಸರಿನ ಆಧಾರದ ಮೇಲೆ ಮರುನಾಮಕರಣ ಮಾಡುವಂತೆ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ವ್ಯವಸ್ಥಾಪಕ ನಿರ್ದೇಶಕರಿಗೆ ಈಚೆಗೆ ಪತ್ರ ಬರೆದಿದ್ದರು ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Namma Metro Rename Tavarekere Station as Bismillah Nagar Locals Urge BMRCL Bengaluru Metro Pink line

ಪ್ರಸ್ತುತ ಕೆಲವು ಮೆಟ್ರೋ ನಿಲ್ದಾಣಗಳಿಗೆ ಇಡಲಾಗಿರುವ ಹೆಸರುಗಳು ಮೆಟ್ರೋ ನಿಲ್ದಾಣ ಇರುವ ನಿಖರ ಸ್ಥಳವನ್ನು ಪ್ರತಿಬಿಂಬಿಸಲ್ಲ. ಇದರಿಂದ ಸಾರ್ವಜನಿಕರು ಹಾಗೂ ಪ್ರತಿನಿತ್ಯ ಮೆಟ್ರೋ ಬಳಸುವ ಪ್ರಯಾಣಿಕರಿಗೆ ನಿಲ್ದಾಣದ ಸ್ಥಳ ಗುರುತಿಸುವಲ್ಲಿ ಗೊಂದಲ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯವಾಗಿ ಜನಪ್ರಿಯವಾಗಿರುವ ಹೆಸರುಗಳು, ಪ್ರದೇಶದ ಐತಿಹಾಸಿಕ ಹಾಗೂ ಭೌಗೋಳಿಕ ಮಹತ್ವವನ್ನು ಪರಿಗಣಿಸಿ ಹೆಸರು ಬದಲಾಯಿಸುವ ಅಗತ್ಯವಿದೆ ಎಂದೂ ರಾಮಲಿಂಗಾರೆಡ್ಡಿ ಅವರು ಹೇಳಿದ್ದರು. ಇದರ ಬೆನ್ನಲ್ಲೇ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಬಿಸ್ಮಿಲ್ಲಾ ನಗರ ಮೆಟ್ರೋ ನಿಲ್ದಾಣ ಎಂದು ಹೆಸೆರು ಇಡಬೇಕು ಎನ್ನುವ ಆಗ್ರಹ ಸ್ಥಳೀಯರಿಂದ ಕೇಳಿ ಬಂದಿದೆ.

ನಮ್ಮ ಮೆಟ್ರೋ ಪಿಂಕ್ ಲೈನ್ - ಬಿಸ್ಮಿಲ್ಲಾ ನಗರ ಮೆಟ್ರೋ ನಿಲ್ದಾಣ ಸ್ಥಳೀಯರಿಂದ ವಿಶೇಷ ಮನವಿ

ಇನ್ನು ಬೆಂಗಳೂರಿನ ನಮ್ಮ ಮೆಟ್ರೋದ ಪಿಂಕ್ ಲೈನ್‌ನ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ ಬಿಸ್ಮಿಲ್ಲಾ ನಗರ ಮೆಟ್ರೋ ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಬೆಂಗಳೂರಿನ ಬಿಸ್ಮಿಲ್ಲಾ ನಗರದ ಸ್ಥಳೀಯ ಮುಸ್ಲಿಂ ಸಮುದಾಯದವರು ಬಿಎಂಆರ್‌ಸಿಎಲ್‌ನ ನಿರ್ದೇಶಕ ಪಿ.ಸಿ. ಜಾಫರ್ ಅವರಿಗೆ ಈ ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಮುಂದುವರಿದು ಬೆಂಗಳೂರಿನ ತಾವರೆಕೆರೆ ಮೆಟ್ರೋ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಸ್ಮಿಲ್ಲಾ ನಗರವೇ ಪ್ರಮುಖ ಪ್ರದೇಶವಾಗಿದೆ. ಇಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿದ್ದಾರೆ. ನಿತ್ಯವೂ ಸಾವಿರಾರು ಸ್ಥಳೀಯ ನಿವಾಸಿಗಳು ಈ ನಿಲ್ದಾಣವನ್ನು ಬಳಸಲಿದ್ದಾರೆ ಹಾಗೂ ಅವಲಂಬಿಸಿದ್ದಾರೆ.

ಹೀಗಾಗಿ, ಸ್ಥಳೀಯರ ಗುರುತಿಗಾಗಿ ಮತ್ತು ಸುಲಭ ಗುರುತಿಸುವಿಕೆಗಾಗಿ ಈ ನಿಲ್ದಾಣಕ್ಕಾಗಿ ಈ ಮೆಟ್ರೋ ನಿಲ್ದಾಣದ ಹೆಸರನ್ನು ಬಿಸ್ಮಿಲ್ಲಾ ನಗರ ಎಂದು ಮರುನಾಮಕರಣ ಮಾಡಬೇಕು ಇಲ್ಲವೇ ಬಿಸ್ಮಿಲ್ಲಾ ನಗರ-ತಾವರೆಕೆರೆ ಎನ್ನುವ ಹೆಸರು ನಾಮಕರಣ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾತೆ. ಕಾಳೇನ ಅಗ್ರಹಾರದಿಂದ ತಾವರೆಕೆರೆ ಮೂಲಕ ಹಾದುಹೋಗುವ ನಮ್ಮ ಮೆಟ್ರೋದ ಕಾಮಗಾರಿಗಳು ಬಹುತೇಕ ಮುಗಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ರೈಲು ಸಂಚಾರ ಆರಂಭವಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+