ವೀಕೆಂಡ್ ಕರ್ಫ್ಯೂ: ನಮ್ಮ ಮೆಟ್ರೋ ಸಂಚಾರದ ಬಗ್ಗೆ ಮಾಹಿತಿ
ಬೆಂಗಳೂರು, ಜನವರಿ 05: ನಗರದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಈ ವೇಳೆ ನಮ್ಮ ಮೆಟ್ರೋ ಸಂಚಾರ ಹೇಗಿರಲಿದೆ ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ.
ವಾರಾಂತ್ಯ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ.
ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇರಲಿದೆ. ಮೆಟ್ರೋ ರೈಲಿನಲ್ಲಿ ಸದ್ಯ 1800-1900 ಜನ ಪ್ರಯಾಣಿಸುತ್ತಿದ್ದಾರೆ. ಕೊವಿಡ್ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಿದ್ದೇವೆ ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.

ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಪ್ರಸ್ತುತ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡಲಿದೆ. ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮೆಟ್ರೋ ರೈಲು ಕಾರ್ಯಾಚರಣೆ ಮಾಡಲಿದೆ. ಉಳಿದಂತೆ ವಾರದ 5 ದಿನಗಳಲ್ಲಿ ಮೆಟ್ರೋ ಎಂದಿನಂತೆ ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ವೀಕೆಂಡ್ ಲಾಕ್ಡೌನ್ ವೇಳೆ ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಸಮಯ ನಿಗದಿ ಮಾಡಲಾಗಿದೆ. ನಾಗಸಂದ್ರ ಮೆಟ್ರೋ ನಿಲ್ದಾಣ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣ, ಕೆಂಗೇರಿ ಮೆಟ್ರೋ ನಿಲ್ದಾಣ, ಬೈಯ್ಯಪ್ಪನಹಳ್ಳಿಯಿಂದ ಸಂಚಾರ ಮಾಡುವ ಮೆಟ್ರೋ ರೈಲುಗಳಿಗೆ ಸಮಯ ನಿಗದಿಪಡಿಸಲಾಗಿದೆ.
ಬೆಳಗ್ಗೆ 8 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಪ್ರತಿ 20 ನಿಮಿಷಕ್ಕೊಮ್ಮೆ ನಮ್ಮ ಮೆಟ್ರೋ ರೈಲು ಸಂಚಾರ ಇರಲಿದೆ ಎಂದು ಹೇಳಲಾಗಿದೆ.
ಕೋವಿಡ್ ನಿಯಮ ಅನ್ವಯ ಮೆಟ್ರೋ ಓಡಿಸಲು ನಿರ್ಧಾರ ಮಾಡಲಾಗಿದೆ. ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಲಾಗಿದೆ. ಸದ್ಯ ಹತ್ತು ಹದಿನೈದು ನಿಮಿಷಕ್ಕೊಂದು ಮೆಟ್ರೋ ರೈಲುಗಳು ಓಡುತ್ತಿವೆ. ವೀಕೆಂಡ್ ಕರ್ಫ್ಯೂ ವೇಳೆ ಅರ್ಧಗಂಟೆಗೊಂದು ಮೆಟ್ರೋ ಓಡಾಟ ನಡೆಸಲಿವೆ.
ಒಮಿಕ್ರಾನ್ ಹಾಗೋ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಶಕ್ತಿ ಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ.
ಬಿಎಂಟಿಸಿಯಲ್ಲಿ ಜನದಟ್ಟನೆ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ಇಂದು ಸಾರಿಗೆ ನಾಲ್ಕು ವಿಭಾಗಗಳ ಮುಖ್ಯಸ್ಥರಿಂದ ಸಣೆ ನಡೆಯಲಿದ್ದು, ವೀಕೆಂಡ್ ಕರ್ಫ್ಯೂ ವೇಳೆ ಬಸ್ ಸಂಚಾರ ಹೇಗಿರಲಿದೆ ಎಂಬುದರ ಬಗ್ಗೆ ನಿರ್ಣಯವಾಗಲಿದೆ.
ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂಜಾರಿ ಮಾಡಿದೆ.
ಇದರ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ಬಸ್‌ಗಳ ಓಡಾಟದ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಬಸ್ ಮತ್ತು ನಮ್ಮ ಮೆಟ್ರೊ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿರುವ ಮಾರ್ಗಸೂಚಿಯನ್ನು ರಿಲೀಸ್ ಮಾಡಿದ್ದು, ಅದು ಈ ಕೆಳಗಿನಂತಿದೆ.
* ಕರ್ಫ್ಯೂ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗಾಗಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಗೆವರೆಗೆ ಬಿಎಂಟಿಸಿ ಬಸ್ ಇರಲಿದೆ. ಅಂದರೆ ಶನಿವಾರ, ಭಾನುವಾರ ಜನಸಾಮಾನ್ಯರಿಗೆ ಬಿಎಂಟಿಸಿ ಬಸ್‌ಗಳ ಸಂಚಾರ ಇರುವುದಿಲ್ಲ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ.
* ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಪ್ರಯಾಣದ ವೇಳೆ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಮ್ಮೊಡನೆ ಇರಿಸಿಕೊಂಡಿರಬೇಕು.
* ಯಾವುದಾದರೂ ಪರೀಕ್ಷೆಗಳು ಇದ್ದಲ್ಲಿ, ವಿದ್ಯಾರ್ಥಿಗಳಿಗೂ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯ.
* ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿ, ಸರ್ಕಾರಿ, ಖಾಸಗಿ ಬ್ಯಾಂಕ್, ವಿಮಾ ಇಲಾಖೆ ಸಿಬ್ಬಂದಿಗೂ ಅವಕಾಶವಿದೆ.
* ವಾರಾಂತ್ಯದಲ್ಲಿ ಶೇ.10 ರಷ್ಟು ಬಸ್‌ಗಳು ಮಾತ್ರ ಕಾರ್ಯನಿರ್ವಹಿಸಲಿವೆ












Click it and Unblock the Notifications