Namma metro: ಭಾನುವಾರ ಈ ಮಾರ್ಗದಲ್ಲಿ ಭಾಗಶಃ ಮೆಟ್ರೋ ಸಂಚಾರ ಸ್ಥಗಿತ: ಎಲ್ಲಿ? ಗಮನಿಸಿ

ಬೆಂಗಳೂರು, ಫೆಬ್ರವರಿ 09: ಬೆಂಗಳೂರು ನಗರವಾಸಿಗಳಿಗೆ ಈ ಭಾನುವಾರ ನಮ್ಮ ಮಟ್ರೋ ರೈಲು ಸೇವೆ ಭಾಗಶಃ ರದ್ದಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ (BMRCL) ಮಾಹಿತಿ ನೀಡಿದೆ. ಯಾವ ಸಮಯ, ಯಾವ ಮೆಟ್ರೋ ರೈಲು ಮಾರ್ಗ? ಎಂಬೆಲ್ಲ ಮಾಹಿತಿ ಇಲ್ಲಿ ತಿಳಿಯಿರಿ.

ಬೆಂಗಳೂರು ಮೆಟ್ರೋ ರೈಲು ನಿಗಮವು ಇದೇ ಭಾನುವಾರ ಫೆಬ್ರವರಿ 11ರಂದು ನೇರಳೆ ಮಾರ್ಗದಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ಈ ಮಾರ್ಗದ ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಧ್ಯೆ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡ ಕಾರಣ ಎರಡು ನಿಲ್ದಾಣಗಳ ಮಧ್ಯೆ ರೈಲು ಸೇವೆ ಇರುವುದಿಲ್ಲ ಎಂದು ಹೇಳಲಾಗಿದೆ.

 Namma metro service disruption on sunday between Indiranagar-M.G Road metro stations, timings

ಬೆಳಗ್ಗೆ ಎರಡು ಗಂಟೆ ಸ್ಥಗಿತ

ತುರ್ತು ನಿರ್ವಹಣಾ ಕಾಮಗಾರಿ ಪ್ರಯುಕ್ತ ನೇರಳೆ ಮಾರ್ಗದ ಎಂ.ಜಿ.ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ಸೇವೆಯು ಅಂದು ಭಾನುವಾರ ಬೆಳಗ್ಗೆ 07 ಗಂಟೆಯಿಂದ 9 ಗಂಟೆವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಬೆಳಗ್ಗೆ 07 ಗಂಟೆಯಿಂದ ಚಲಿಸುತ್ತವೆ ಎಂದು ನಮ್ಮ ಮೆಟ್ರೋ ಮಾಹಿತಿ ನೀಡಿದೆ.

 Namma metro service disruption on sunday between Indiranagar-M.G Road metro stations, timings

ಎಂದಿನಂತೆ ಮೆಟ್ರೋ ಸಂಚಾರ

ಬೆಳಗ್ಗೆ 9.00 ಗಂಟೆಯ ನಂತರ ಎಂದಿನಂತೆ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ.

ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ. ನಮ್ಮ ಮೆಟ್ರೋ ಪ್ರಯಾಣಿಕರು ಈ ಮೇಲಿನ ಮೆಟ್ರೋ ರೈಲು ಸಂಚಾರ ವ್ಯತ್ಯಯದ ಬದಲಾವಣೆ ಗಮನಿಸಿ ಸಂಚಿಸುವಂತೆ ಪ್ರಕಟಣೆ ಮೂಲಕ ಸಾರ್ವಜನಿಕರಲ್ಲಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ (BMRCL) ಕೋರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+