• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

5 ತಿಂಗಳ ಬಳಿಕ ಸಂಚಾರ ಆರಂಭಿಸಿದ ನಮ್ಮ ಮೆಟ್ರೋ

|

ಬೆಂಗಳೂರು, ಸೆಪ್ಟೆಂಬರ್ 07: ಉದ್ಯಾನ ನಗರಿ ಬೆಂಗಳೂರಿನಲ್ಲಿ 5 ತಿಂಗಳ ಬಳಿಕ ನಮ್ಮ ಮೆಟ್ರೋ ರೈಲಿನ ಸಂಚಾರ ಆರಂಭವಾಗಿದೆ. ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ.

   Namma Metro ಇಂದಿನಿಂದ ಪುನರಾರಂಭ, ಆದರೆ ಷರತ್ತುಗಳು ಅನ್ವಯ | Oneindia Kannada

   ಸೋಮವಾರ ಬೆಳಗ್ಗೆ 8 ಗಂಟೆಗೆ ಬೈಯಪ್ಪನಹಳ್ಳಿ ನಿಲ್ದಾಣದಿಂದ ಮೊದಲ ರೈಲು ಸಂಚಾರ ಆರಂಭಿಸಿತು. ಮೈಸೂರು ರಸ್ತೆ-ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಮಾತ್ರ ಇಂದು ರೈಲು ಸಂಚಾರ ನಡೆಸಲಿದೆ.

   ಮೆಟ್ರೋ ನಿಲ್ದಾಣಗಳಲ್ಲಿ ಟೋಕನ್ ವ್ಯವಸ್ಥೆ ಇಲ್ಲ. ಸ್ಮಾರ್ಟ್ ಕಾರ್ಡ್ ಹೊಂದಿರುವ ಪ್ರಯಾಣಿಕರು ಮಾತ್ರ ಸಂಚಾರವನ್ನು ನಡೆಸಬಹುದಾಗಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಮೆಟ್ರೋ ನಿಲ್ದಾಣದಲ್ಲಿ 50 ಜನರು ಮಾತ್ರ ಇರಲು ಅವಕಾಶ ನೀಡಲಾಗಿದೆ.

   ಮೊದಲ ದಿನವಾದ ಇಂದು ಬೆಳಗ್ಗೆ 8 ರಿಂದ 11ರ ತನಕ ಮತ್ತು ಸಂಜೆ 4.30ರಿಂದ 7.30ರ ತನಕ ಮಾತ್ರ ಮೆಟ್ರೋ ರೈಲು ಸಂಚಾರ ನಡೆಸಲಿದೆ. 5 ನಿಮಿಷಗಳ ಅಂತರದಲ್ಲಿ ಮೆಟ್ರೋ ರೈಲು ಸಂಚಾರ ನಡೆಸಲಿದೆ.

   ಹಸಿರು ಮಾರ್ಗದಲ್ಲಿ ಸಂಚಾರವಿಲ್ಲ

   ಹಸಿರು ಮಾರ್ಗದಲ್ಲಿ ಸಂಚಾರವಿಲ್ಲ

   ನೇರಳೆ ಮಾರ್ಗದಲ್ಲಿ ಮಾತ್ರ ಇಂದು ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ. ನಾಗಸಂದ್ರ-ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಸೆಪ್ಟೆಂಬರ್ 9ರಿಂದ ರೈಲು ಸಂಚಾರ ಆರಂಭಿಸಲಿದೆ. ಬೆಳಗ್ಗೆ 8 ರಿಂದ 11 ಮತ್ತು ಸಂಜೆ 4.30ರಿಂದ 7.30ರ ತನಕ ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

   ಸೆಪ್ಟೆಂಬರ್ 11ರಿಂದ ಸಹಜ ಸ್ಥಿತಿಗೆ

   ಸೆಪ್ಟೆಂಬರ್ 11ರಿಂದ ಸಹಜ ಸ್ಥಿತಿಗೆ

   ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 11ರಿಂದ ಮೆಟ್ರೋ ರೈಲು ಸಂಚಾರ ಸಹಜ ಸ್ಥಿತಿಗೆ ಬರಲಿದೆ. ಸೆ.11ರ ಶುಕ್ರವಾರದಿಂದ ಬೆಳಗ್ಗೆ 7 ರಿಂದ ರಾತ್ರಿ 9ರ ತನಕ ಮೆಟ್ರೋ ರೈಲು ಓಡಲಿದೆ. ಪೀಕ್ ಅವರ್‌ನಲ್ಲಿ 5 ನಿಮಿಷ, ಉಳಿದ ಸಮಯದಲ್ಲಿ 10 ನಿಮಿಷಕ್ಕೊಂದು ರೈಲು ಓಡಲಿದೆ.

   50 ಜನರಿಗೆ ಮಾತ್ರ ಪ್ರವೇಶ

   50 ಜನರಿಗೆ ಮಾತ್ರ ಪ್ರವೇಶ

   ನಮ್ಮ ಮೆಟ್ರೋ ನಿಲ್ದಾಣಕ್ಕೆ ಒಮ್ಮೆ 50 ಪ್ರಯಾಣಿಕರು ಮಾತ್ರ ಪ್ರವೇಶಿಸಬಹುದಾಗಿದೆ. ನಿಲ್ದಾಣದಲ್ಲಿ ಜನರ ದಟ್ಟಣೆ ಉಂಟಾಗದಂತೆ ಎಚ್ಚರ ವಹಿಸಲಾಗುತ್ತದೆ. ಮೆಟ್ರೋ ರೈಲಿನಲ್ಲಿ ಸಹ 400 ಜನರು ಮಾತ್ರ ಪ್ರಯಾಣಿಸಬಹುದು.

   ನಿಲ್ದಾಣಗಳಲ್ಲಿ ವ್ಯವಸ್ಥೆ

   ನಿಲ್ದಾಣಗಳಲ್ಲಿ ವ್ಯವಸ್ಥೆ

   ನಮ್ಮ ಮೆಟ್ರೋ ನಿಲ್ದಾಣದ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಥರ್ಮಲ್ ಸ್ಕ್ಯಾನಿಂಗ್ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.

   English summary
   Namma Metro rail services resume in Bengaluru city after a gap of 5 months. First passenger train leaves from Baiyappanahalli at 8 am.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X