Namma Metro: ಮಧ್ಯಾಹ್ನ 2 ಗಂಟೆವರೆಗೆ ಪೀಣ್ಯ-ನಾಗಸಂದ್ರ ನಡುವೆ ಮೆಟ್ರೋ ಸೇವೆ ಇರಲ್ಲ-ಕಾರಣ ಏನು?
Namma Metro: ಬೆಂಗಳೂರಿನ ಜೀವನಾಡಿ ಸಾರಿಗೆಗಳಲ್ಲಿ ನಮ್ಮ ಮೆಟ್ರೋ ಕೋಡ ಒಂದಾಗಿದೆ. ನಗರದ ಬಹುತೇಕ ಮಂದಿ ಟ್ರಾಫಿಕ್ ಜಂಜಾಟದಿಂದ ತಪ್ಪಿಸಿಕೊಳ್ಳಲು ಮೆಟ್ರೋ ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಇನ್ನು ಕೆಲವು ವೇಳೆ ಕಾಮಾಗರಿ ಪರಿಶೀಲನೆ ಸೇರಿದಂತೆ ರೈಲು ಸಂಚಾರಕ್ಕೆ ಅಡಚಣೆಯಾದಂತಹ ಮಾರ್ಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ.
ಇದೀಗ ಇಂದು (ಅಕ್ಟೋಬರ್ 03) ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಈ ಮಾರ್ಗಗಳ ನಡುವೆ ಮೆಟ್ರೋ ಸಂಚಾರವನ್ನು ಸ್ಥಗಿತ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಯಾವ್ಯಾವ ಮಾರ್ಗಗಳಲ್ಲಿ ಹಾಗೂ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ನಾಗಸಂದ್ರ-ಮಾದಾವರ ನಡುವಿನ ಹೊಸ ರೈಲು ಮಾರ್ಗದಲ್ಲಿ ಸುರಕ್ಷತಾ ತಪಾಸಣೆ ಹಿನ್ನೆಲೆ ಇಂದು ಮೆಟ್ರೋ ರೈಲು ವ್ಯತ್ಯಸವಾಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಇಂದು (ಅಕ್ಟೋಬರ್ 03) ಬೆಳಗ್ಗೆ 10 ಗಂಟೆಯಿಂದ 2 ಗಂಟೆವರೆಗೆ ವಾಣಿಜ್ಯ ಸೇವೆ ಸ್ಥಗಿತ ಆಗಲಿದೆ. ಈ ಸಮಯದಲ್ಲಿ ಪೀಣ್ಯ ಹಾಗೂ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಎಂದಿನಂತೆ ಸಂಚರಿಸಲಿದೆ. ನೇರಳೆ ಮಾರ್ಗದ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಹಸಿರು ಮಾರ್ಗದಲ್ಲಿ ವಿಸ್ತರಣೆಯಾಗಿರುವ 3.7 ಕಿಲೋ ಮೀಟರ್ ದೂರದ ಈ ಮಾರ್ಗದಲ್ಲಿ ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್), ಮಾದಾವರ ಮೆಟ್ರೊ ನಿಲ್ದಾಣಗಳಿವೆ. ಸಿವಿಲ್ ಕಾಮಗಾರಿ ನಂತರ ಆಗಸ್ಟ್‌ನಿಂದ ಸಾಮರ್ಥ್ಯ ಪರೀಕ್ಷೆ, ಸಿಗ್ನಲಿಂಗ್, ದೂರಸಂಪರ್ಕ, ವಿದ್ಯುತ್ ಸರಬರಾಜು ವ್ಯವಸ್ಥೆ ಸಿಸ್ಟಂ ಸಂಯೋಜನೆ, ಸಾಮರ್ಥ್ಯ ಪರಿಶೀಲನೆ ಸಹಿತ ಪ್ರಮುಖ ಪರೀಕ್ಷೆಗಳು ನಡೆದಿತ್ತು. ಸುರಕ್ಷತಾ ತಪಾಸಣೆ ತೃಪ್ತಿಕರವಾದರೆ, ಆಯುಕ್ತರು ಶೀಘ್ರವೇ ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಮೆಟ್ರೋ ಚಾಲಕರ ದಿನಚರಿ ಹೇಗಿರಲಿದೆ?: ನಮ್ಮ ಮೆಟ್ರೋ ರೈಲು ಪ್ರತಿನಿತ್ಯ ಏನಿಲ್ಲ ಅಂದರೂ ಲಕ್ಷಕ್ಕೂ ಅಧಿಕರ ಪ್ರಯಾಣಿಕೆ ಸಾಗಿಸುವ ಸಾರಿಗೆ ಇದಾಗಿದೆ. ಹಾಗಾದರೆ ಈ ಮೆಟ್ರೋ ರೈಲಿನ ಚಾಲಕರ ದಿನಚರಿ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು ಎಂದರೆ ಮೊದಲಿಗೆ ನೆನಪಾಗುವುದೇ ಟ್ರಾಫಿಕ್ ಜಾಮ್. ಈ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಂಡು ತಲುಪಬೇಕಾದ ಸ್ಥಳಕ್ಕೆ ಅತೀ ಬೇಗ ಹೋಗಲು ಬಹುತೇಕ ಮಂದಿ ನಮ್ಮ ಮೆಟ್ರೋ ಸಾರಿಗೆಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಕಾರು, ಬೈಕ್‌ಗಳು ಇದ್ದರೂ ಕೂಡ ಮೆಟ್ರೋವನ್ನೇ ಆಯ್ಕೆ ಮಾಡಿಕೊಳ್ಳುವುದು ಇದೇ ಕಾರಣಕ್ಕೆ ಎಂದರೆ ತಪ್ಪಾಗಲಾರದು. ಇನ್ನೂ ಪ್ರತಿನಿತ್ಯ ಲಕ್ಷಾಂತರ ಪ್ರಯಾಣಿಕರನ್ನು ಸಾಗಿಸುವ ಈ ಮೆಟ್ರೋ ದಿನಚರಿ ಹೇಗಿರಲಿದೆ ಎಂದು ನೀವು ತಿಳಿದುಕೊಳ್ಳಲೇಬೇಕು.
ಬೆಂಗಳೂರಿನಲ್ಲಿ ಮೆಟ್ರೋ ರೈಲು ಓಡಿಸುವುದೆಂದರೆ ಕೇವಲ ವಾಹನ ಚಲಾಯಿಸುವಷ್ಟು ಸುಲಭವಲ್ಲ. ಲೋಕೋ ಪೈಲಟ್‌ಗಳು ಹಲವು ಸವಾಲುಗಳನ್ನು ಎದುರಿಸುತ್ತಾರೆ. ಸಾಮಾನ್ಯವಾಗಿ ಮೆಟ್ರೋ ಚಾಲಕರು ತಮ್ಮ ಮೆಟ್ರೋ ಚಾಲನೆ ಕೆಲಸವನ್ನು ಬೆಳ್ಳಗ್ಗೆ 6 ಗಂಟೆಯಿಂದಲೇ ಆರಂಭಿಸುತ್ತಾರೆ.
ಬೆಳಗ್ಗೆ ಮೆಟ್ರೋ ಚಾಲನೆಗೂ ಮೊಲದು ಅವರು ರೈಲು ಸೇವೆಗೆ ಸಿದ್ಧವಾಗಿದೆಯೇ ಎಂದು ಖಚಿತಪಡಿಸಿಕೊಳ್ಳುತ್ತಾರೆ. ಪ್ರಯಾಣಿಕರು ರೈಲು ಹತ್ತುವ ಮೊದಲು ಈ ಎಲ್ಲಾ ವ್ಯವಸ್ಥೆಗಳನ್ನು ಪರಿಶೀಲನೆ ಮಾಡುತ್ತಾರೆ. ಯಾಕೆಂದರೆ ಯಾವುದೇ ಸಮಸ್ಯೆಗಳಾದರೆ, ಪ್ರಯಾಣಿಕರಿಗೆ ಇದರಿಂದ ತುಂಬಾ ತೊಂದರೆಯಾಗಲಿದೆ ಎನ್ನುವ ದೃಷ್ಟಿಯಿಂದ ಮೆಟ್ರೋ ಸೇವೆಯ ಬಗ್ಗೆ ಖಚಿತಪಡಿಸಿಕೊಳ್ಳುತ್ತಾರೆ.
ದೈನಂದಿನ ದಿನಚರಿ ಮತ್ತು ಜವಾಬ್ದಾರಿಗಳು: ಮೊದಲು ಮಟ್ರೋ ಚಾಲಕರು ಟ್ರ್ಯಾಕ್ ನಿರ್ವಹಣೆ ಅಥವಾ ವೇಳಾಪಟ್ಟಿ ಬದಲಾವಣೆಗಳನ್ನು ಗಮನಿಸುತ್ತಾರೆ. ನಂತರ ಅವರು ರೈಲನ್ನು ಪರಿಶೀಲಿಸುತ್ತಾರೆ, ಬ್ರೇಕ್‌ಗಳು, ಬಾಗಿಲುಗಳು ಮತ್ತು ಸಂವಹನ ವ್ಯವಸ್ಥೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಖಚಿತಪಡಿಸಿಕೊಳ್ಳುತ್ತಾರೆ. ಈ ನಿಖರವಾದ ಪ್ರಕ್ರಿಯೆಯು ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಗೊಳಿಸುತ್ತದೆ.
ಸವಾಲುಗಳೇನು?: ಜನಸಂದಣಿ ಇರುವ ನಿಲ್ದಾಣಗಳಲ್ಲಿ ಚಾಲಕರು ಕಟ್ಟುನಿಟ್ಟಾದ ವೇಳಾಪಟ್ಟಿಗಳನ್ನು ಅನುಸರಿಸಬೇಕಾಗುತ್ತದೆ. ತಾಂತ್ರಿಕ ದೋಷಗಳು ಅಥವಾ ಪ್ರಯಾಣಿಕರ ತುರ್ತುಸ್ಥಿತಿಗಳಂತಹ ಅನಿರೀಕ್ಷಿತ ವಿಳಂಬಗಳ ಹೊರತಾಗಿಯೂ, ಅವರು ಸಮಯಪಾಲನೆಯನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಇನ್ನು ಯಾವುದೇ ತೊಂದರೆಯಾಗದಂತೆ ಮೆಟ್ರೋ ಚಾಲನೆ ಮಾಡುವುದು ಅತ್ಯಗತ್ಯವಾಗಿರುತ್ತದೆ.
ಮೆಟ್ರೋ ಚಾಲಕರು ಪ್ರತಿದಿನ ವಿವಿಧ ಸಿಬ್ಬಂದಿಗಳೊಂದಿಗೆ ಸ್ಟೇಷನ್ ಕಂಟ್ರೋಲರ್‌ಗಳಿಂದ ಹಿಡಿದು ನಿರ್ವಹಣಾ ತಂಡಗಳವರೆಗೆ ಸಂವಹನ ನಡೆಸುತ್ತಾರೆ. ಯಾಕೆಂದರೆ ತಡೆರಹಿತ ಕಾರ್ಯಾಚರಣೆಗಳಿಗೆ ಈ ಸಂವಹ ಅತ್ಯಗತ್ಯವಾಗಿರುತ್ತದೆ. ಒಂದು ವೇಳೆ ಏನಾದರೂ ಹೋಗುವ ಮಾರ್ಗಗಳಲ್ಲಿ ಏನಾದರೂ ಸಮಸ್ಯೆಗಳಿದ್ದರೆ, ಆಗ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಬಳಿಕ ಆ ಮಾರ್ಗದಲ್ಲಿ ಕೆಲ ಕಾಲ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ. ಯಾಕೆಂದರೆ ಪ್ರಯಾಣದ ಅವಧಿಯಲ್ಲಿ ಪ್ರಯಾಣಿಕರ ಸುರಕ್ಷೆತೂ ಅವರ ಪ್ರಮುಖ ಜವಾಬ್ದಾರಿಯಾಗಿರುತ್ತದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications