Namma Metro: ಇಂದು ಬೆಳಗ್ಗೆ ಮೆಟ್ರೋ ಸಂಚಾರ ವ್ಯತ್ಯಯ, ಪ್ರಯಾಣಿಕರು ಗಮನಕ್ಕೆ..

ಬೆಂಗಳೂರು, ಜೂನ್ 22: ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇಂದು ಭಾನುವಾರ (ಜೂನ್ 22) ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇದು ತಾತ್ಕಾಲಿಕ ವ್ಯತ್ಯಯವಾಗಿದೆ. ತುರ್ತು ನಿರ್ವಹಣಾ ಕಾಮಗಾರಿ ಪ್ರಯುಕ್ತ ಈ ಸಂಚಾರ ಅಡಚರಣೆ ಎದುರಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗನ ನಿಯಮಿತ (BMRCL) ಮಹತ್ವ ಮಾಹಿತಿ ನೀಡಿದೆ. ಪ್ರಯಾಣಿಕರು ಗಮನಿಸಿ ಸಂಚರಿಸುವಂತೆ ತಿಳಿಸಲಾಗಿದೆ.

ಚಲ್ಲಘ ಟ್ಟದಿಂದ- ವೈಟ್‌ಫಿಲ್ಡ್‌ವರೆಗೆ ಇರುವ ಅತೀ ಉದ್ದದ್ದ ಈ ನೇರಳೆ ಮಾರ್ಗದಲ್ಲಿ ನಿಗದಿತ ನಿರ್ವಹಣಾ ಕಾಮಗಾರಿಯಿಂದಾಗಿ ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ. ಈ ಮಾರ್ಗದ ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಜೂನ್ 22 ರಂದು ಭಾನುವಾರ ನಿರ್ವಹಣಾ ಕೆಲಸ ಕೈಗೊಳ್ಳಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಮೆಟ್ರೋ ಸೇವೆಗಳನ್ನು, ಎಂ.ಜಿ. ರಸ್ತೆ, - ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಗಮನಿಸಿ ಸಂಚರಿಸಬೇಕು.

Namma Metro Service Temperary Disruption Today on June 22nd For This Reason

ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂ.ಜಿ. ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ (ಕಾಡುಗೋಡಿ) ಹಾಗೂ ಹಸಿರು ಮಾರ್ಗದ ರೆಸ್ಟ್ ಸಂಸ್ಥೆ ಮತ್ತು ಮಾದಾವರ ನಡುವೆ ಮೆಟ್ರೋ ಸೇವೆಗಳು ಬೆಳಗ್ಗೆ 7:00 ಗಂಟೆಯಿಂದ ಭಾನುವಾರದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ.

ಬಿಎಂಆರ್‌ಸಿಎಲ್ ಈ ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಪೂರ್ವತಯಾರಿಗೆ ಯೋಜಿಸಿಕೊಳ್ಳಬೇಕು. ಸಾರ್ವಜನಿಕರ ತಿಳುವಳಿಕೆ ಮತ್ತು ಸಹಕಾರವನ್ನು ಬಿಎಂಆರ್‌ಸಿಎಲ್ ಪ್ರಾಮಾಣಿಕವಾಗಿ ಗೌರವಿಸುತ್ತದೆ ಎಂದು ನಮ್ಮ ಮೆಟ್ರೋ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+