ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೇವೆ

|
Google Oneindia Kannada News

ಬೆಂಗಳೂರು, ಆಗಸ್ಟ್‌ 1: ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಆ.3ರ ರಾತ್ರಿ 9.30ರಿಂದ ಆ.4ರ ಬೆಳಗ್ಗೆ 11ರವರೆಗೆ ಸ್ಥಗಿತಗೊಳ್ಳಲಿರುವ ಕಾರಣ ಹೆಚ್ಚುವರಿ ಬಸ್‌ ಸೇವೆ ಕಲ್ಪಿಸಲಾಗುತ್ತಿದೆ.

ಬೈಯಪ್ಪನಹಳ್ಳಿಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಆ.3ರ ರಾತ್ರಿ 9.30ರಿಂದ ಆ.4ರ ಬೆಳಗ್ಗೆ 11ರವರೆಗೆ ರೈಲು ಸೇವೆ ಸ್ಥಗಿತಗೊಳಿಸುತ್ತಿರುವುದರಿಂದ ಬಿಎಂಟಿಸಿಯು ಪ್ರಯಾಣಿಕರ ದಟ್ಟಣೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ.

3 ದಿನ ನಮ್ಮ ಮೆಟ್ರೋ ಸಂಚಾರ ಭಾಗಶಃ ರದ್ದು 3 ದಿನ ನಮ್ಮ ಮೆಟ್ರೋ ಸಂಚಾರ ಭಾಗಶಃ ರದ್ದು

ಬೈಯಪ್ಪನಹಲ್ಳಿಯಿಂದ ಎಂಜಿ ರಸ್ತೆ ಮಾರ್ಗದಲ್ಲಿ ಪ್ರಯಾಣಿರ ದಟ್ಟಣೆ ಇರುವುದು ಕಂಡುಬಂದರೆ, ಹೆಚ್ಚುವರಿ ಬಸ್‌ಗಳನ್ನು ಆಚರಣೆ ಮಾಡಲಾಗುವುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Namma Metro Service To Be Disrupted BMTC providing Extra Bus Services

ನೇರಳೆ ಮಾರ್ಗದಲ್ಲಿ ಎಂ.ಜಿ.ರಸ್ತೆಯಿಂದ ಮೈಸೂರು ರಸ್ತೆ ನಿಲ್ದಾಣದ ತನಕ ರೈಲುಗಳು ಎಂದಿನಂತೆ ಸಂಚಾರ ನಡೆಸಲಿವೆ. ಅದೇ ರೀತಿ ಹಸಿರು ಮಾರ್ಗದ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.

ಎಂ. ಜಿ. ರಸ್ತೆ-ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿ ಆಗಸ್ಟ್ 3 ಮತ್ತು 4ರಂದು ನಮ್ಮ ಮೆಟ್ರೋ ರೈಲು ಸಂಚಾರ ಭಾಗಶಃ ರದ್ದಾಗಲಿದೆ. ನಿರ್ವಹಣಾ ಕಾರ್ಯವನ್ನು ಕೈಗೊಳ್ಳುವ ಕಾರಣ ಮೆಟ್ರೋ ರೈಲಿನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಎಂ. ಜಿ. ರಸ್ತೆ-ಮೈಸೂರು ರಸ್ತೆ ನಡುವೆ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

English summary
Namma Metro Service To Be Disrupted in August 3 and 4, BMTC will provide Extra Bus Services, on the basis of commuters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X