ನಮ್ಮ ಮೆಟ್ರೋ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

ಬೆಂಗಳೂರು, ಡಿಸೆಂಬರ್ 10 : ಬೆಂಗಳೂರು ಮೆಟ್ರೋ ರೈಲು ನಿಗಮ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಜನರ ಹಲವು ದಿನಗಳ ಬೇಡಿಕೆಗೆ ಮನ್ನಣೆ ನೀಡಲಾಗಿದ್ದು, ಮೆಟ್ರೋ ರೈಲು ಸೇವೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ.

ಹೌದು, ಜನವರಿ 1ರಿಂದ ಅನ್ವಯವಾಗುವಂತೆ ನಮ್ಮ ಮೆಟ್ರೋ ಸೇವೆಯನ್ನು ರಾತ್ರಿ 12 ಗಂಟೆಯ ತನಕ ವಿಸ್ತರಣೆ ಮಾಡಲಾಗುತ್ತದೆ. ಬಿಎಂಆರ್‌ಸಿಎಲ್ ಈ ಕುರಿತು ತೀರ್ಮಾನವನ್ನು ಕೈಗೊಂಡಿದೆ. ಸೇವೆ ವಿಸ್ತರಣೆ ಮಾಡುವಂತೆ ಹಲವು ದಿನದಿಂದ ಬೇಡಿಕೆ ಇತ್ತು.

ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಈ ಕುರಿತು ಮಾಹಿತಿ ನೀಡಿದ್ದಾರೆ. "ನಮ್ಮ ಮೆಟ್ರೋ ರೈಲನ್ನು 12 ಗಂಟೆ ತನಕ ವಿಸ್ತರಣೆ ಮಾಡಲಾಗುತ್ತದೆ. 6 ಬೋಗಿಗಳ ರೈಲು ಸಂಖ್ಯೆಯನ್ನು 6 ರಿಂದ 12ಕ್ಕೆ ಹೆಚ್ಚಿಸಲಾಗುತ್ತದೆ" ಎಂದು ಹೇಳಿದ್ದಾರೆ.

Namma Metro Service To Extend Till 12

ಪ್ರಸ್ತುತ ನಮ್ಮ ಮೆಟ್ರೋ ರೈಲು ರಾತ್ರಿ 11 ಗಂಟೆ ತನಕ ಸಂಚಾರ ನಡೆಸುತ್ತದೆ. ಜನವರಿ 1ರಿಂದ ರಾತ್ರಿ 12 ಗಂಟೆಗೆ ಕೊನೆಯ ರೈಲು ಸಂಚಾರವನ್ನು ಆರಂಭಿಸಲಿದೆ. ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡುವುದರಿಂದ ನೂರಾರು ಪ್ರಯಾಣಿಕರಿಗೆ ಸಹಾಯಕವಾಗಲಿದೆ.

ನಮ್ಮ ಮೆಟ್ರೋ ಸಂಚಾರವನ್ನು ವಿಸ್ತರಣೆ ಮಾಡಿದರೆ ಬಿಎಂಟಿಸಿ ಸಹ ತನ್ನ ಸೇವೆಯನ್ನು ವಿಸ್ತರಣೆ ಮಾಡಲಿದೆ. ಮೆಟ್ರೋ ಪ್ರಯಾಣಿಕರಿಗೆ ಸಹಾಯಕವಾಗುವಂತೆ ಬಸ್‌ಗಳನ್ನು ಓಡಿಸಲಾಗುತ್ತದೆ.

ಮೈಸೂರು ರಸ್ತೆ-ಬೈಯಪ್ಪನಹಳ್ಳಿ (ನೇರಳೆ), ನಾಗಸಂದ್ರ-ಯಲಚೇನಹಳ್ಳಿ (ಹಸಿರು) ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳು ಸಂಚಾರ ನಡೆಸುತ್ತಿವೆ. ಎರಡೂ ಮಾರ್ಗದಲ್ಲಿಯೂ ಈಗ 6 ಬೋಗಿಗಳ ರೈಲು ಸೇವೆಯನ್ನು ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+