ಭಾನುವಾರ ಬೆಳಗ್ಗೆ 7 ರಿಂದ ನಮ್ಮ ಮೆಟ್ರೋ ರೈಲು ಸಂಚಾರ ಆರಂಭ

ಬೆಂಗಳೂರು, ಡಿಸೆಂಬರ್ 03 : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಭಾನುವಾರ ಬೆಳಗ್ಗೆ 7 ಗಂಟೆಯಿಂದ ನಮ್ಮ ಮೆಟ್ರೋ ಸಂಚಾರವನ್ನು ಆರಂಭಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ.

ಪ್ರಸ್ತುತ ನಮ್ಮ ಮೆಟ್ರೋ ರೈಲು ಭಾನುವಾರ ಬೆಳಗ್ಗೆ 8 ಗಂಟೆಗೆ ಸಂಚಾರ ಆರಂಭಿಸುತ್ತದೆ. ಆದರೆ, ಬೆಳಗ್ಗೆ ಬೇಗ ರೈಲು ಸಂಚಾರ ಆರಂಭಿಸುವಂತೆ ಬೇಡಿಕೆ ಬಂದಿದ್ದು, ಇದಕ್ಕೆ ಬಿಎಂಆರ್‌ಸಿಎಲ್ ಸಹ ಪ್ರಾಥಮಿಕ ಒಪ್ಪಿಗೆ ನೀಡಿದೆ.

ಬೆಳಗ್ಗೆ 7 ರಿಂದ ಶೀಘ್ರದಲ್ಲಿಯೇ ನಮ್ಮ ಮೆಟ್ರೋ ಸಂಚಾರವನ್ನು ಆರಂಭಿಸಲಾಗುತ್ತದೆ. ಬಳಿಕ 6 ಗಂಟೆಗೆ ಆರಂಭಿಸುವ ಚಿಂತನೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Namma Metro services on7 am on Sunday soon

ಬೈಯ್ಯಪ್ಪನಹಳ್ಳಿ-ನಾಯಂಡಹಳ್ಳಿ (ನೇರಳೆ ಮಾರ್ಗ) ಮತ್ತು ನಾಗಸಂದ್ರ-ಯಲಚೇನಹಳ್ಳಿ (ಹಸಿರು ಮಾರ್ಗ) ದಲ್ಲಿ ಪ್ರಸ್ತುತ ನಮ್ಮ ಮೆಟ್ರೋ ರೈಲುಗಳು ಸಂಚಾರ ನಡೆಸುತ್ತಿವೆ. ಭಾನುವಾರ ಹೊರತು ಪಡಿಸಿ ಉಳಿದ ದಿನ ಬೆಳಗ್ಗೆ 5 ರಿಂದ ರಾತ್ರಿ 11ರ ತನಕ ಮೆಟ್ರೋ ಸಂಚಾರ ನಡೆಸುತ್ತದೆ.

ಭಾನುವಾರ ಕಚೇರಿಗಳಿಗೆ ರಜೆ ಇರುವ ಕಾರಣ ಹೆಚ್ಚಿನ ಜನರು ಮೆಟ್ರೋದಲ್ಲಿ ಪ್ರಯಾಣ ಮಾಡುವುದಿಲ್ಲ. ಆದ್ದರಿಂದ, ಬೆಳಗ್ಗೆ 8 ಗಂಟೆಗೆ ರೈಲು ಸಂಚಾರವನ್ನು ಆರಂಭಿಸಲಾಗುತ್ತಿತ್ತು.

ಆದರೆ, ಹಲವಾರು ಪ್ರಯಾಣಿಕರು ಭಾನುವಾರವೂ ಬೆಳಗ್ಗೆ ಬೇಗ ಮೆಟ್ರೋ ಸಂಚಾರ ಆರಂಭಿಸಬೇಕು ಎಂದು ಬಿಎಂಆರ್‌ಸಿಎಲ್‌ಗೆ ಮನವಿ ಮಾಡಿದ್ದರು. ಆದ್ದರಿಂದ, ಸಮಯವನ್ನು ಪರಿಷ್ಕರಣೆ ಮಾಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+