Namma Metro: ಯುಪಿಎಸ್‌ಸಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಮೇ 24ರಂದು ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ಸಂಚಾರ

ಬೆಂಗಳೂರು: ದೇಶದ ಅತ್ಯಂತ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆ ಬರೆಯಲು ಸಜ್ಜಾಗಿರುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಭರ್ಜರಿ ಸಿಹಿಸುದ್ದಿ ನೀಡಿದೆ. ಪರೀಕ್ಷಾರ್ಥಿಗಳ ಸುಗಮ ಹಾಗೂ ತ್ವರಿತ ಪ್ರಯಾಣದ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ಸೇವೆಗಳನ್ನು ಭಾನುವಾರ (ಮೇ 24) ಮುಂಚಿತವಾಗಿ ಆರಂಭಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ಸಾಮಾನ್ಯವಾಗಿ ಭಾನುವಾರಗಳಂದು ನಮ್ಮ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತವೆ. ಆದರೆ, ಸಿವಿಲ್ ಸರ್ವೀಸಸ್ ಪರೀಕ್ಷೆಯು ಬೆಳಗ್ಗೆಯೇ ಆರಂಭವಾಗುವುದರಿಂದ, ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ಅನುಕೂಲವಾಗುವಂತೆ ಈ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಬಿಎಂಆರ್‌ಸಿಎಲ್ ಅಧಿಕೃತ ಮಾಹಿತಿ ನೀಡಿದೆ.

Namma Metro

ಎಲ್ಲೆಲ್ಲಿಂದ ರೈಲು ಆರಂಭ?

ದಿನಾಂಕ 24ನೇ ಮೇ 2026 ರಂದು (ಭಾನುವಾರ) ನಡೆಯಲಿರುವ ಪರೀಕ್ಷೆಯ ಹಿನ್ನೆಲೆಯಲ್ಲಿ, ನಮ್ಮ ಮೆಟ್ರೋದ ಪ್ರಮುಖ ಮೂರು ಮಾರ್ಗಗಳ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 7.00 ಗಂಟೆಗೆ ಬದಲಾಗಿ 6.00 ಗಂಟೆಯಿಂದಲೇ ರೈಲು ಸೇವೆಗಳು ಪ್ರಾರಂಭವಾಗಲಿವೆ. ಆ ಮಾರ್ಗಗಳ ವಿವರ ಹೀಗಿದೆ:

ನೇರಳೆ ಮಾರ್ಗ: ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಚಲ್ಲಘಟ್ಟ ಟರ್ಮಿನಲ್ ನಿಲ್ದಾಣಗಳಿಂದ.

ಹಸಿರು ಮಾರ್ಗ: ಮಾದಾವರ ಮತ್ತು ರೇಷ್ಮೆ ಸಂಸ್ಥೆ (Silk Institute) ಟರ್ಮಿನಲ್ ನಿಲ್ದಾಣಗಳಿಂದ.

ಹಳದಿ ಮಾರ್ಗ: ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ.

ಬೆಳಗ್ಗೆ 6 ಗಂಟೆಯಿಂದಲೇ ಈ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಮೆಟ್ರೋ ರೈಲುಗಳು ಪ್ರಯಾಣಿಕರಿಗೆ ಲಭ್ಯವಿರಲಿವೆ. ಭಾನುವಾರ ಬೆಳಗ್ಗೆ ಬಸ್ಸುಗಳ ಓಡಾಟ ವಿರಳವಾಗಿರುವ ಸಾಧ್ಯತೆ ಇರುತ್ತದೆ. ಅಲ್ಲದೆ, ಪರೀಕ್ಷಾ ಆತಂಕದ ನಡುವೆ ಟ್ರಾಫಿಕ್ ದಟ್ಟಣೆಯನ್ನು ತಪ್ಪಿಸಿ, ಯಾವುದೇ ಒತ್ತಡವಿಲ್ಲದೆ ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪಲು ಮೆಟ್ರೋ ಸೇವೆ ಅತ್ಯಂತ ವಿಶ್ವಾಸಾರ್ಹ ಮತ್ತು ವೇಗದ ಸಾರಿಗೆಯಾಗಿದೆ. ಹೀಗಾಗಿ ಪರೀಕ್ಷಾರ್ಥಿಗಳು ಹಾಗೂ ಸಾರ್ವಜನಿಕರು ಈ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ವಿನಂತಿಸಿದೆ.

ಟಿಕೆಟ್ ಕೌಂಟರ್‌ಗಳಲ್ಲಿ ಸರದಿಯಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ನಿಲ್ದಾಣಗಳಲ್ಲಿ ಯಾವುದೇ ಗೊಂದಲವಿಲ್ಲದೆ ತ್ವರಿತವಾಗಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ್, ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಅಥವಾ ವಾಟ್ಸಾಪ್ ಕ್ಯೂಆರ್ ಟಿಕೆಟ್ (QR Ticket) ಬಳಸುವಂತೆ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ಪರೀಕ್ಷಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಕ್ಕೆ ಹತ್ತಿರವಿರುವ ಮೆಟ್ರೋ ನಿಲ್ದಾಣಗಳ ಮಾಹಿತಿಯನ್ನು ಮೊದಲೇ ತಿಳಿದುಕೊಂಡು, ಸಮಯಕ್ಕೆ ಸರಿಯಾಗಿ ಪ್ರಯಾಣ ಬೆಳೆಸುವುದು ಸೂಕ್ತ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+