ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Namma Metro: ಪ್ರಯಾಣಿಕರಿಗೆ 1 ಮತ್ತು 3 ದಿನದ ಪಾಸ್‌ಗಳನ್ನು ಪರಿಚಯಿಸಿದ ನಮ್ಮ ಮೆಟ್ರೋ

|
Google Oneindia Kannada News

ಬೆಂಗಳೂರು, ಮಾರ್ಚ್ 30: ಯುಗಾದಿ ಹಬ್ಬಕ್ಕೆ ಕೆಲವೇ ದಿನಗಳ ಮುನ್ನ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಸಿಹಿ ಸುದ್ದಿ ನೀಡಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ 1 ಹಾಗೂ 3 ದಿನದ ಪಾಸ್ ಅನ್ನು ಬಿಎಂಆರ್​ಸಿಎಲ್ (BMRCL)​ ಪರಿಚಯಿಸುತ್ತಿದ್ದು, ಒಂದು ದಿನದ ಪಾಸ್​ಗೆ 200 ರೂಪಾಯಿಯನ್ನು ನಿಗದಿಯಾಗಿದೆ. ಪಾಸ್ ಖರೀದಿಸಿದ ದಿನದಂದು ಪ್ರಯಾಣಿಕರು ಅನಿಯಮಿತವಾಗಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ.

ನಮ್ಮ ಮೆಟ್ರೋ ಮೂರನೇ ಹಂತದ ಮಾರ್ಗ ಯಾವುದು?ನಮ್ಮ ಮೆಟ್ರೋ ಮೂರನೇ ಹಂತದ ಮಾರ್ಗ ಯಾವುದು?

ಇನ್ನು ಮೂರು ದಿನದ ಪಾಸ್​ಗೆ 400 ರೂಪಾಯಿ ನಿಗದಿಗೊಳಿಸಲಾಗಿದ್ದು, ಖರೀದಿ ದಿನದಿಂದ 3 ದಿನ ಅನಿಯಮಿತವಾಗಿ​ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ. ಈ ಕುರಿತು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Namma Metro to Introduce 1-Day and 3-Day Passes for Commuters

1 ದಿನದ ಮತ್ತು 3 ದಿನದ ಪಾಸ್‌ಗಳು ಮೆಟ್ರೋ ನಿಲ್ದಾಣದ ಟಿಕೆಟ್ ಕೌಂಟರ್‌ಗಳಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರು 1 ದಿನದ ಅಥವಾ 3 ದಿನದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ ಯಾವುದೇ ಗ್ರಾಹಕ ಸಂಪರ್ಕ ಕೇಂದ್ರಗಳಲ್ಲಿ ಸ್ಮಾರ್ಟ್ ಕಾರ್ಡ್ ಅನ್ನು ಉತ್ತಮ ಸ್ಥಿತಿಯಲ್ಲಿ ಹಿಂದಿರುಗಿಸಿದರೆ, ಪ್ರಯಾಣಿಕರು 50 ರೂ. ಮರುಪಾವತಿಸಬಹುದಾದ ಭದ್ರತಾ ಠೇವಣಿಯನ್ನು ಹಿಂಪಡೆಯಬಹುದು.

ಪ್ರಯಾಣಿಕರು ಆನ್‌ಲೈನ್‌ನಲ್ಲಿ ಅಂದರೆ ವೆಬ್‌ಸೈಟ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ರೀಚಾರ್ಜ್ ಮಾಡಿದ ಮೊತ್ತವನ್ನು ಸ್ಮಾರ್ಟ್ ಕಾರ್ಡ್‌ಗೆ 1 ಗಂಟೆಯ ನಂತರ ಮತ್ತು ರೀಚಾರ್ಜ್ ಮಾಡಿದ ದಿನಾಂಕದಿಂದ 7 ದಿನಗಳ ಒಳಗೆ ಎಎಫ್ಸಿ ಗೇಟ್‌ನಲ್ಲಿ ಟ್ಯಾಪ್ ಮಾಡುವ ಮೂಲಕ ಅಥವಾ ಕಾರ್ಡ್ ಟಾಪ್-ಅಪ್ ಟರ್ಮಿನಲ್‌ಗಳಲ್ಲಿ ಸಿಟಿಟಿ ರೀಚಾರ್ಜ್ ಮಾಡಿದ ದಿನಾಂಕದಿಂದ 15 ದಿನಗಳಲ್ಲಿ ನವೀಕರಿಸಬಹುದು.

ಆದಾಗ್ಯೂ, ಪ್ರಯಾಣಿಕರು ತಮ್ಮ ಸ್ಮಾರ್ಟ್ ಕಾರ್ಡ್ಗಳಲ್ಲಿ ಬ್ಯಾಲೆನ್ಸ್ ಮೊತ್ತವನ್ನು 15 ದಿನಗಳ ಒಳಗೆ ನವೀಕರಿಸಲು ಸಾಧ್ಯವಾಗದಿದ್ದರೆ. ಅಂತಹ ಕ್ಲೈಮ್ ಮಾಡದ ಮೊತ್ತವನ್ನು ರಿಚಾರ್ಜ್ ಮಾಡಿದ ದಿನಾಂಕದಿಂದ 30 ದಿನಗಳ ಒಳಗೆ ಅದೇ ಚಾನೆಲ್ ಮೂಲಕ ರಿಚಾರ್ಜ್ ಮಾಡಿದ ಮೊತ್ತದಿಂದ ಶೇ.2.5 ರದ್ದತಿ ಶುಲ್ಕವನ್ನು ಕಡಿತಗೊಳಿಸಿ ರೀಚಾರ್ಜ್ ಮೊತ್ತವನ್ನು ಮರುಪಾವತಿ ಮಾಡಲಾಗುವುದು.

English summary
Namma Metro to introduce 1-day and 3-day passes for commuters. 1-day pass to cost Rs 200 and 3-day pass is priced at Rs 400. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X