Namma Metro: ಮಾರ್ಚ್ 1ರಂದು ಬೆಳಿಗ್ಗೆ 5 ಗಂಟೆಯಿಂದಲೇ ಮೆಟ್ರೋ ಸೇವೆ, ಹಳದಿ ಮಾರ್ಗಕ್ಕೆ ಇಂದಿನಿಂದ 8ನೇ ರೈಲು ಸೇರ್ಪಡೆ

ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಮಾರ್ಚ್ 1ರಂದು ನಡೆಯಲಿರುವ ವಿಶೇಷ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದ ಅವಧಿಯಲ್ಲಿ ಬದಲಾವಣೆ ಮಾಡಿದೆ. ಭಾನುವಾರದಂದು ನಡೆಯಲಿರುವ 'ರಾಜ್ಯ ಮಟ್ಟದ ಪೊಲೀಸ್ ರನ್' ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ರೈಲು ಸೇವೆಗಳು ಅಂದು ಮುಂಜಾನೆ 5 ಗಂಟೆಯಿಂದಲೇ ಆರಂಭವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯವಾಗಿ ಭಾನುವಾರದಂದು ಮೆಟ್ರೋ ರೈಲುಗಳು ಬೆಳಗ್ಗೆ 7 ಗಂಟೆಗೆ ಸಂಚಾರ ಆರಂಭಿಸುತ್ತಿದ್ದವು. ಆದರೆ, ಈ ವಿಶೇಷ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಮೆಟ್ರೋ ಸೇವೆಗಳು ಈ ಕೆಳಗಿನ ಎಲ್ಲ ಟರ್ಮಿನಲ್‌ಗಳಿಂದ ಮುಂಜಾನೆ 5 ಗಂಟೆಗೆ ಪ್ರಾರಂಭವಾಗಲಿವೆ. ನೇರಳೆ ಮಾರ್ಗದ (Purple Line) ವೈಟ್‌ಫೀಲ್ಡ್ ಮತ್ತು ಚಲ್ಲಘಟ್ಟ, ಹಸಿರು ಮಾರ್ಗ (Green Line) ಮಾದಾವರ ಮತ್ತು ರೇಷ್ಮೆ ಸಂಸ್ಥೆ, ಹಳದಿ ಮಾರ್ಗದ (Yellow Line) ಬೊಮ್ಮಸಂದ್ರ ಮತ್ತು ಆರ್.ವಿ.ರಸ್ತೆ ಮಾರ್ಗಗಳಲ್ಲಿ ಐದು ಗಂಟೆಯಿಂದಲೇ ಮೆಟ್ರೋ ಸೇವೆ ಇರಲಿದೆ.

Namma Metro

ಪೊಲೀಸ್ ರನ್ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮತ್ತು ಮೆಟ್ರೋ ಪ್ರಯಾಣಿಕರು ಈ ವಿಶೇಷ ಸಮಯದ ಬದಲಾವಣೆಯನ್ನು ಗಮನಿಸಿ, ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ನಗರದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಪೊಲೀಸ್ ರನ್ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ತೆರಳುವವರು ಯಾವುದೇ ಟ್ರಾಫಿಕ್ ಕಿರಿಕಿರಿ ಇಲ್ಲದೆ, ಸುಗಮವಾಗಿ ಮತ್ತು ನಿಗದಿತ ಸಮಯಕ್ಕೆ ತಲುಪಲು ಮೆಟ್ರೋ ಈ ವಿಶೇಷ ವ್ಯವಸ್ಥೆ ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿ ಅಥವಾ ಸಹಾಯಕ್ಕಾಗಿ ಪ್ರಯಾಣಿಕರು ಮೆಟ್ರೋ ನಿಲ್ದಾಣದ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಅಂದು ದಿನವಿಡೀ ಹೆಚ್ಚಿನ ಜನದಟ್ಟಣೆ ಇರುವ ಸಾಧ್ಯತೆ ಇರುವುದರಿಂದ ಡಿಜಿಟಲ್ ಟಿಕೆಟ್ ಅಥವಾ ಸ್ಮಾರ್ಟ್ ಕಾರ್ಡ್‌ಗಳನ್ನು ಬಳಸಲು ಸೂಚಿಸಲಾಗಿದೆ.

ಹಳದಿ ಮಾರ್ಗದಲ್ಲಿ 8ನೇ ರೈಲಿನ ಸೇರ್ಪಡೆ

ಬೆಂಗಳೂರು ಮೆಟ್ರೋ ರೈಲು ನಿಗಮವು ಹಳದಿ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದು, ರೈಲುಗಳ ಸಂಚಾರದ ಅಂತರವನ್ನು ಕಡಿಮೆಗೊಳಿಸಲು ಹೊಸ ಕ್ರಮ ಕೈಗೊಂಡಿದೆ. ಫೆಬ್ರವರಿ 27ರಿಂದ (ಶುಕ್ರವಾರ) ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಅಧಿಕೃತವಾಗಿ ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸಲಾಗುತ್ತಿದೆ. ಅಲ್ಲದೆ ಸೋಮವಾರದಿಂದ ಶನಿವಾರದವರೆಗೆ ಸಂಚಾರದ ಅಂತರದಲ್ಲಿ ಬದಲಾವಣೆ ಮಾಡಲಾಗಿದ್ದು, ಪೀಕ್ ಅವಧಿಯಲ್ಲಿ ಮೆಟ್ರೋ ರೈಲುಗಳು ಇನ್ನು ಮುಂದೆ ಪ್ರತಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ. ನಾನ್-ಪೀಕ್ ಅವಧಿಯಲ್ಲಿ ರೈಲುಗಳ ಸಂಚಾರದ ಅಂತರವನ್ನು 18 ನಿಮಿಷಗಳಿಂದ 14 ನಿಮಿಷಗಳಿಗೆ ಇಳಿಸಲಾಗಿದೆ. ಇನ್ನು ಭಾನುವಾರದ ಮೆಟ್ರೋ ಸಂಚಾರದ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ ಎಂದು ತಿಳಿಸಿದೆ.

ರೈಲುಗಳ ಸಮಯ

ಎಲ್ಲ ದಿನಗಳಲ್ಲಿ ಆರ್.ವಿ.ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯ ಸದುಪಯೋಗ ಪಡಿಸಿಕೊಳ್ಳುವಂತೆ ನಿಗಮವು ಕೋರಿದೆ. ಈ ಹೆಚ್ಚುವರಿ ರೈಲಿನ ಸೇರ್ಪಡೆಯಿಂದಾಗಿ ಹಳದಿ ಮಾರ್ಗದ ಪ್ರಯಾಣಿಕರ ಕಾಯುವಿಕೆ ಸಮಯ ಕಡಿಮೆಯಾಗಲಿದ್ದು, ಪ್ರಯಾಣ ಇನ್ನಷ್ಟು ಸುಗಮವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+