Breaking: ನಮ್ಮ ಮೆಟ್ರೋ: ರೈಲಿನ ಅಡಿಗೆ ಹಾರಿ ಯುವಕ ಆತ್ಮಹತ್ಯೆ!, ಕೆಲಕಾಲ ಸಂಚಾರ ಸ್ಥಗಿತ

ನಮ್ಮ ಮೆಟ್ರೋದಲ್ಲಿ ಶುಕ್ರವಾರ ಡಿಸೆಂಬರ್ 05 ರಂದು ಮತ್ತೊಂದು ಅವಘಡ ಸಂಭವಿಸಿದೆ. ಬೆಂಗಳೂರಿನ ನಮ್ಮ ಮೆಟ್ರೋದ ಹಳಿಗಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರಿನ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ಯವಕನೊಬ್ಬ ಮೈಟ್ರೋ ರೈಲು ಬರುವಾಗ ಏಕಾಏಕಿ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನು ಶುಕ್ರವಾರ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂದು ಗುರುತಿಸಲಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಎನ್ನುವ ವಿಷಯ ಇನ್ನಷ್ಟೇ ತಿಳಿಯಬೇಕಾಗಿದೆ. ಈ ವಿಚಾರದಲ್ಲಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದಿದ್ದಾರೆ.

Namma Metro Tragedy Young Man Jumps Before Train Causing Brief Service Disruption

ಯುವಕ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಭಾಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಾಸ ಆಗಿದೆ. ನೇರಳೆ ಮಾರ್ಗದ ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಮೈಸೂರು ರಸ್ತೆ ಮತ್ತು ಚಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಸ್ಥಿತಿ ಸುಧಾರಿಸಿದ ನಂತರ ಸೇವೆಗಳು ಪುನರಾರಂಭವಾಗುತ್ತವೆ. ಉಂಟಾದ ತೊಂದರೆಗೆ ವಿಷಾದಿಸುತ್ತೇವೆ ಎಂದು ಮೆಟ್ರೋ ಸಂದೇಶ ಹಂಚಿಕೊಂಡಿತ್ತು.

ಮೆಟ್ರೋ ಮಾಹಿತಿ

ಜ್ಞಾನಭಾರತಿ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳು ಇಂದು ಬೆಳಿಗ್ಗೆ 9.40 ಗಂಟೆಯಿಂದ ಸಂಪೂರ್ಣವಾಗಿ ಪುನರ್‌ ಆರಂಭಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಈಗ ಎಂದಿನಂತೆ ಸಂಚರಿಸುತ್ತಿವೆ ಎಂದು ಸಾರ್ವಜನಿಕ ಸಂಪರ್ಕಧಿಕಾರಿ ಅಪ್ಡೇಟ್ಸ್‌ ನೀಡಿದ್ದಾರೆ.

ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಆಗ್ರಹ: ಇನ್ನು ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜನ ಆಗ್ರಹಿಸುತ್ತಲ್ಲೇ ಇದ್ದಾರೆ. ಈ ನಿಟ್ಟಿನಲ್ಲಿ ಮೆಟ್ರೋ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದ್ದಾರಾದರೂ, ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+