ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಟ್ರೋ ನಿಲ್ದಾಣದಲ್ಲಿ ರೈಲಿಗಾಗಿ ಇನ್ನು ಹೆಚ್ಚು ಹೊತ್ತು ಕಾಯೋದ್ಬೇಡ

|
Google Oneindia Kannada News

Recommended Video

ರೈಲಿಗಾಗಿ ಇನ್ಮುಂದೆ ಜಾಸ್ತಿ ಟೈಮ್ ಕಾಯೋ ಹಾಗಿಲ್ಲ | Metro | 4 minutes | Farmers | Oneindia kannada

ಬೆಂಗಳೂರು, ಜನವರಿ 30: ಇನ್ನುಮುಂದೆ ಪ್ರತಿ ನಾಲ್ಕು ನಿಮಿಷಗಳಿಗೊಂದು ಮೆಟ್ರೋ ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸಂದಣಿ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಏಕಾಏಕಿ ತಪಾಸಣೆಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಏಕಾಏಕಿ ತಪಾಸಣೆ

ಅದರಿಂದಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಸಮಯದಲ್ಲಿ ಪ್ರತಿ 4 ನಿಮಿಷಕ್ಕೆ ಒಂದು ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

Namma Metro Train Frequency Reduced To 4 Minutes

ಉಳಿದ ಸಮಯದಲ್ಲಿ ಪ್ರತಿ ಹತ್ತು ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿದೆ. ಜನವರಿ 20 ರಿಂದ ಮೆಟ್ರೋ ಕಾರ್ಡ್ ಮೂಲಕ ರೀಚಾರ್ಜ್ ಮಾಡಿಕೊಳ್ಳುವವರಿಗೆ ನೀಡುತ್ತಿದ್ದ ಶೇ. 15ರಷ್ಟು ರಿಯಾಯಿತಿಯನ್ನು ಇದೀಗ ಶೇ.5ಕ್ಕೆ ಇಳಿಕೆ ಮಾಡಲಾಗಿದೆ.

19 ರೈಲುಗಳಲ್ಲಿ 6 ಬೋಗಿ: ನಾಗಸಂದ್ರ-ಯಲಚೇನಹಳ್ಳಿ ಮಾರ್ಗದಲ್ಲಿ ಆರು ಬೋಗಿಗಳ ರೈಲುಗಳ ಸಂಖ್ಯೆ ಹೆಚ್ಚಿಸಲಾಗುತ್ತಿದ್ದು, ಈವರೆಗೆ ಒಟ್ಟು 19 ರೈಲುಗಳಲ್ಲಿ ಮೂರು ಬೋಗಿಗಳ ಬದಲಾಗಿ ಆರು ಬೋಗಿಗಳನ್ನು ಅಳವಡಿಸಲಾಗಿದೆ. ಮೊದಲ ಹಂತದಲ್ಲಿನ ಎಲ್ಲಾ 50 ರೈಲುಗಳಿಗೆ ಆರು ಬೋಗಿಗಳನ್ನು ಅಳವಡಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿತ್ತು.

ಅದರಂತೆ ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಎಲ್ಲಾ ರೈಲುಗಳಿಗೆ ಆರು ಬೋಗಿಗಳನ್ನು ಅಳವಡಿಸಲು ಚಿಂತಿಸಲಾಗಿತ್ತು. ಉಳಿದಂತೆ ನಾಗಸಂದ್ರ-ಯಲಚೇನಹಳ್ಳಿ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಹಂತ ಹಂತವಾಗಿ ಆರು ಬೋಗಿ ಅಳವಡಿಸಲಾಗುತ್ತಿದೆ. ಜ.27ರವರೆಗೆ ಒಟ್ಟು 19 ರೈಲುಗಳು ಆರು ಬೋಗಿಗಳನ್ನು ಹೊಂದಿವೆ.

English summary
Namma Metro Train frequency has been reduced to 4 minutes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X