ಬೆಂಗಳೂರು: ಇಂದಿನಿಂದ ನಮ್ಮ ಮೆಟ್ರೋ ಸಂಚಾರ ರಾತ್ರಿ 9ರವರೆಗೂ ವಿಸ್ತರಣೆ

ಬೆಂಗಳೂರು, ಜುಲೈ 19: ಇಂದಿನಿಂದ ನಮ್ಮ ಮೆಟ್ರೋ ಸಂಚಾರ ರಾತ್ರಿ 9 ಗಂಟೆಯವರೆಗೂ ಸಂಚರಿಸಲಿದೆ.ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹಲವು ಬಾರಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಇಲ್ಲಿಯವರೆಗೆ ರಾತ್ರಿ 8 ಗಂಟೆ ವರೆಗೆ ಮಾತ್ರ ಸೇವೆ ಇತ್ತು, ಬೆಳಗ್ಗೆ 7 ರಿಂದ ರಾತ್ರಿ 9ರವರೆಗೆ ದಿನದಲ್ಲಿ 14 ತಾಸುಗಳ ಮೆಟ್ರೋ ರೈಲು ಸೇವೆ ಇರಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ದಟ್ಟಣೆ ಅವಧಿಯಲ್ಲಿ ಪ್ರತಿ ಐದು ನಿಮಿಷಕ್ಕೊಂದು, ಸಾಮಾನ್ಯ ಅವಧಿಯಲ್ಲಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚಿಗಷ್ಟೇ ಅಂಜುಂ ಪರ್ವೇಜ್ ನೇಮಕವಾಗಿದ್ದಾರೆ.

Namma Metro Train Services Extended Till 9 pm Effective From 19 July

ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್​ ಅವರನ್ನು ಬೆಂಗಳೂರು ಮೆಟ್ರೋ ಎಂಡಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಪರ್ವೇಜ್, ಕರ್ನಾಟಕ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರದಿಂದ ಬಿಎಮ್​ಆರ್​ಸಿಎಲ್ ಎಂಡಿ ಆಗಿ ನೇಮಕಗೊಂಡಿದ್ದಾರೆ.

ನಮ್ಮ ಮೆಟ್ರೋ ಕಾಮಗಾರಿಗಾಗಿ 350 ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಹೈಕೋರ್ಟ್ ಆದೇಶದಿಂದಾಗಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಮಾರ್ಗ ಕಾಮಗಾರಿ ಪುನಾರಂಭವಾಗಲಿದೆ.

ಆದರೆ ಷರತ್ತೊಂದನ್ನು ವಿಧಿಸಿತ್ತು, ಅದರ ಬದಲಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಸೂಚಿಸಲಾಗಿದೆ ನಾಗವಾರ-ಗೊಟ್ಟಿಗೆರೆ ಮಾರ್ಗದ ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿರುವ ಹೈಕೋರ್ಟ್, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್‌ಸಿಎಲ್‌ಗೆ ಆದೇಶಿಸಿದೆ.

ಈ ವೇಳೆ ಬಿಎಂಆರ್ ಸಿಎಲ್ ಪರ ವಾದ ಮಂಡಿಸಿದ ಹಿರಿಯ ವಕೀಲರ ಉದಯ್ ಹೊಳ್ಳ, ಮೆಟ್ರೋ ರೈಲು ಕಾಮಗಾರಿ ಸ್ಥಗಿತಗೊಂಡಿರುವುದರಿಂದ ನಿಗಮಕ್ಕೆ ಸಾಕಷ್ಟು ನಷ್ಟವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+