Namma metro: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸೇವೆ ಬಗ್ಗೆ ರಾಜ್ಯಪಾಲರಿಂದ ಮಹತ್ವದ ಮಾಹಿತಿ

ಬೆಂಗಳೂರು, ಫೆಬ್ರವರಿ, 12: ನಮ್ಮ ಮೆಟ್ರೋ ಹಂತ 2A-ಸೆಂಟ್ರಲ್ ರೇಷ್ಮೆ ಮಂಡಳಿಯಿಂದ ಕೃಷ್ಣರಾಜಪುರ (19.75 ಕಿಮೀ) ಮತ್ತು ಹಂತ-2B ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಕಾಮಗಾರಿ ಪ್ರಗತಿಯಲ್ಲಿದ್ದು, ಇದು ಜೂನ್ 2026 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ರಾಜ್ಯಪಾಲರಾದ ಥಾವರ್‌ ಚಂದ್‌ ಇಂದು ಮಾಹಿತಿ ನೀಡಿದರು

ಫೆಬ್ರವರಿ 12ರಂದು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ರಾಜ್ಯಪಾಲರು, "ಬೆಂಗಳೂರು ಮೆಟ್ರೋ ಹಂತ 2, ರೀಚ್ 5 ಹೊಸ ಮಾರ್ಗವನ್ನು ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ 19.15 ಕಿ.ಮೀ ವಿಸ್ತರಿಸಿದೆ. ಅದರಲ್ಲಿ 3.3 ಕಿ.ಮೀ. ನಿಲ್ದಾಣಗಳನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಿಸಲಾಗುವುದು. ಇದೀಗ ಶೇಕಡಾ 98% ಪ್ರಗತಿಯನ್ನು ಸಾಧಿಸಲಾಗಿದೆ ಮತ್ತು ವಿಸ್ತರಣೆಯನ್ನು ಜುಲೈ 2024ರೊಳಗೆ ಕಾರ್ಯಾರಂಭಿಸಲು ನಿಗದಿಪಡಿಸಲಾಗಿದೆ.

Namma metro: When will be metro service start to Kempegowda International Airport?

ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ರಾಜ್ಯ ಸರ್ಕಾರ ಮತ್ತು ಭಾರತೀಯ ರೈಲ್ವೆಯ ಸಹಯೋಗದೊಂದಿಗೆ ಕೈಗೆತ್ತಿಕೊಳ್ಳಲಾಗಿದೆ. ಬೈಯಪ್ಪನಹಳ್ಳಿ-ಚಿಕ್ಕಬಾಣಾವರ (25 ಕಿಲೋ ಮೀಟರ್‌) ಕಾರಿಡಾರ್‌ನ ಸಿವಿಲ್ ಕಾಮಗಾರಿ ಪ್ರಗತಿಯಲ್ಲಿದೆ. ಹೀಲಲಿಗೆ -ರಾಜಾನುಕುಂಟೆ (46.24 ಕಿ.ಮೀ) ಕಾರಿಡಾರ್‌ನ ಸಿವಿಲ್ ಕಾಮಗಾರಿಗೆ ಟೆಂಡರ್ ಅಂತಿಮಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ರಾಜ್ಯಪಾಲರು ತಿಳಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸುರಂಗ ನಿರ್ಮಾಣಕ್ಕೆ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+