ಫಲಪುಷ್ಪ ಪ್ರದರ್ಶನ: ನಮ್ಮ ಮೆಟ್ರೋದಲ್ಲಿ ರಿಟರ್ನ್ ಜರ್ನಿ ಟಿಕೆಟ್ ಲಭ್ಯ
ಬೆಂಗಳೂರು, ಜನವರಿ 25: ಗಣರಾಜ್ಯೋತ್ಸವದ ಅಂಗವಾಗಿ ನಗರದ ಲಾಲ್‌ಬಾಗ್‌ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಎರಡು ದಿನ ಮೆಟ್ರೋ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ನೀಡುತ್ತಿದೆ.
ಜನವರಿ 25, 26ರಂದು ಎರಡು ದಿನಗಳ ಕಾಲ ಲಾಲ್‌ಬಾಗ್‌ಗೆ ಹೋಗುವಾಗಲೇ ರಿಟರ್ನ್ ಜರ್ನಿಯ ಟಿಕೆಟ್‌ನ್ನು ಪಡೆಯಬಹುದು ಇದರಿಂದ ಟೋಕನ್‌ಗಳಾಗಿ ಸರತಿಯಲ್ಲಿ ನಿಲ್ಲುವುದು ತಪ್ಪುತ್ತದೆ.
ಇಂದು ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30ರೂ.ಗೆ ನಿಗದಿಪಡಿಸಲಾಗಿದೆ.

ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಲಾಲ್‌ಬಾಗ್‌ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಮಾನ್ಯವಾಗಿರುತ್ತದೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೇಪರ್ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದ ಈ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ.
ಯಾವುದೇ ನಿಲ್ದಾಣದಿಂದ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಲು ಚಾಲ್ತಿಯಲ್ಲಿರುವ ದರದಲ್ಲಿ ಟೋಕನ್ ಮತ್ತು ಸ್ಮಾರ್ಟ್ ಕಾರ್ಡ್‌ಗಳನ್ನು ಬಳಸಿ ಪ್ರಯಾಣಿಸಬೇಕಾಗುತ್ತದೆ. ಸ್ಮಾರ್ಟ್ ಕಾರ್ಡ್ ಪ್ರಯಾಣಕ್ಕೆ ಚಾಲ್ತಿಯಲ್ಲಿರುವ ರಿಯಾಯಿತಿ ದರವು ಅನ್ವಯವಾಗುತ್ತದೆ.
ಎಲ್ಲಾ ಮೆಟ್ರೋ ಪ್ರಯಾಣಕರು ತ್ವರಿತ ಪ್ರಯಾಣಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಬಳಸುವಂತೆ ಮತ್ತು ಲಾಲ್‌ಬಾಗ್ ನಿಲ್ದಾಣದಲ್ಲಿ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ನ್ನು ಹಾಜರಿಪಡಿಸಬೇಕಾಗುತ್ತದೆ.












Click it and Unblock the Notifications