• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಫೆಬ್ರವರಿ 28 ರಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

|

ಬೆಂಗಳೂರು,ಫೆಬ್ರವರಿ 26: ಫೆಬ್ರವರಿ 28 ರಂದು 2 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

28ರ ಭಾನುವಾರ ನೇರಳೆ ಮಾರ್ಗದಲ್ಲಿ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೂ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೆ ನಗದು ಪಾವತಿ ವ್ಯವಸ್ಥೆಗೆ ಆಗ್ರಹ

ಈ ಅವಧಿಯಲ್ಲಿ ಎಂಜಿ ರಸ್ತೆ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಮಾತ್ರ ಸೇವೆ ಲಭ್ಯವಿರುತ್ತದೆ. ದುರಸ್ತಿ ಕಾಮಗಾರಿ ಪೂರ್ಣಗೊಂಡ ನಂತರ ಬೆಳಗ್ಗೆ 9 ಗಂಟೆಯಿಂದ ಎಂದಿನಂತೆ ಸೇವೆಯನ್ನು ಪುನರರಾಂಭಿಸಲಾಗುವುದು, ಹಸಿರು ಮಾರ್ಗದಲ್ಲಿ ಈ ದಿನ ಮೆಟ್ರೋ ಸೇವೆ ಎಂದಿನಂತೆ ಇರಲಿದೆ ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಲ್. ಯಶವಂತ ಚವ್ಹಾಣ್ ತಿಳಿಸಿದ್ದಾರೆ.

   ಇಲಾಖೆಯ 'ಕಾರ್ಗೋ ಸೇವೆ' ಗೆ ಸಿಎಂ ಬಿಎಸ್‌ವೈ ಚಾಲನೆ | Oneindia Kannada

   ಈ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ಮೆಟ್ರೋ ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಛಗಿತಗೊಳಿಸಲಾಗಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

   English summary
   Namma metro will not run from 7 am to 9am on February 28 between baiyappanahalli and MG road Metro station.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X