Namma Metro: ಬೆಂಗಳೂರು ಹಸಿರು ಹೊದಿಕೆ ಹೆಚ್ಚಿಸಲು ಮಹತ್ವದ ಹೆಜ್ಜೆ ಇಟ್ಟ BMRCL
ಬೆಂಗಳೂರು, ಫೆಬ್ರವರಿ 05: ಬೆಂಗಳೂರು ನಮ್ಮ ಮೆಟ್ರೋ ಜಾಲ ನಗರಾದ್ಯಂತ ವಿಸ್ತರಣೆಗೊಳ್ಳುತ್ತಿದೆ. ಹಾಲಿ ಮಾರ್ಗಗಳ ಜೊತೆಗೆ ಹೊಸದಾಗಿ ಮಾರ್ಗಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ BMRCL ಮಹತ್ವದ ಹೆಜ್ಜೆ ಇಟ್ಟಿದೆ. ತನ್ನ ಹೊಣೆಗಾರಿಕೆ ಮತ್ತು ಸಾಮಾಜಿಕ ಜವಾಬ್ದಾರಿ ಮೆರೆಯಲು ಒಟ್ಟು 5.28 ಕೋಟಿ ರೂಪಾಯಿ ಮೀಸಲಿಟ್ಟಿದೆ. ಒಟ್ಟು ನಾಲ್ಕು ಹಂತಗಳಲ್ಲಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಹೌದು, ಬೆಂಗಳೂರು ಮೆಟ್ರೋ ರೈಲು ಯೋಜನೆಗಳಿಗಾಗಿ, ನಗರದಿಂದ ಹೊರ ವಲಯದವರೆಗೆ ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ ಸಾವಿರಾರು ಮರಗಳಿಗೆ ಕತ್ತರಿ ಹಾಕಲಾಗಿದೆ. ಸಿಲ್ಕ್ ಬೋರ್ಡ್-ಕೆ.ಆರ್.ಪುರಂ-ಬೆಂಗಳೂರು ಏರ್‌ಪೋರ್ಟ್ ವರೆಗಿನ ನೀಲಿ ಮಾರ್ಗವನ್ನು 2A ಮತ್ತು 2B ಎಂದು ಎರಡು ಹಂತಗಳಲ್ಲಿ ನಿರ್ಮಿಸಲಾಗುತ್ತಿದೆ. ಈ ಸಂಬಂಧ ಅನೇಕ 7000ಕ್ಕೂ ಹೆಚ್ಚು ಮರಗಳಿಗೆ ಕತ್ತರಿ ಹಾಕಲಾಗಿತ್ತು.

ಇದು ಸೇರಿದಂತೆ ಬೇರೆ ಬೇರೆ ಮಾರ್ಗಗಳಲ್ಲೂ ಒಂದಷ್ಟು ಮರಗಳಿಗೆ ಕೊಡಲಿ ಏಟು ಬಿದ್ದಿತ್ತು. ನೀಲಿ ಮಾರ್ಗ ಸಂಬಂಧ ಸಾರ್ವಜನಿಕ ಪಿಐಎಲ್ ಸಹ ಸಲ್ಲಿಕೆ ಆಗಿದ್ದು, ಕೋರ್ಟ್ ಸಸಿ ನೆಡಲು ಸೂಚನೆ ಸಹ ನೀಡಿತ್ತು. ಜೊತೆಗೆ ಒಂದಷ್ಟು ಮರಗಳ ಸ್ಥಳಾಂತರಕ್ಕೆ ನಿರ್ದೇಶಿಸಿತಲ್ಲದೇ, ಕಾಲ ಕಾಲಕ್ಕೆ ಮರಗಳ ಬೆಳವಣಿಗೆ ಬಗ್ಗೆ ವರದಿ ನೀಡುವಂತೆ ಕೋರ್ಟ್ ಆದೇಶಿತ್ತು. ಅದರಂತೆ ಮರ ಕತ್ತರಿಸಿ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ.
ಇದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೊರ ವಲಯದಲ್ಲಿ ಒಟ್ಟು 20000 ಗಿಡಗಳನ್ನು ನೆಟ್ಟು ಪೋಷಿಸಲು ಮುಂದಾಗಿದೆ. ಒಟ್ಟು 5.28 ಕೋಟಿ ರೂಪಾಯಿ ಮೀಸಲಿಟ್ಟಿದೆ. ಈ ಮೂಲಕ ಬೆಂಗಳೂರು ನಗರದ ಹಸಿರು ಹೊದಿಕೆ ಹೆಚ್ಚಳಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಎಷ್ಟು ಮರಗಳ ಕಡಿತ, ಅಂಕಿ ಸಂಖ್ಯೆ
ಮೆಟ್ರೋ ಯೋಜನೆಗಳಿಗಾಗಿ 2021-2023ರ ಸಮಯದಲ್ಲಿ 3600ಕ್ಕೂ ಹೆಚ್ಚು ಮರಳಿಗೆ ಕೊಡಲಿ ಹಾಕಲಾಗಿದೆ. ಈ ಅವಧಿಗೂ ಒಂದು ವರ್ಷ ಮೊದಲು 850ಕ್ಕೂ ಹೆಚ್ಚು ಮರಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ನೀಲಿ ಮಾರ್ಗದಲ್ಲಿ ಎಲ್ಲ ಮರಗಳಿಗೂ ಕಟ್ ಮಾಡಿಲ್ಲ. ಅಗತ್ಯತೆ ನೋಡಿಕೊಂಡು 107 ಮರಗಳನ್ನು ಸ್ಥಳಾಂತರ ಮಾಡಲಾಗಿದೆ. 1165 ಮರಕ್ಕೆ ಕೊಡಲಿ ಹಾಕಲಾಗಿದೆ. ಈವರೆಗೆ 1200ರಷ್ಟು ಮರಗಳನ್ನು ಯಶಸ್ವಿಯಾಗಿ ಸ್ಥಳಾಂತರಗೊಳಿಸಲಾಗಿದೆ.
ಸದ್ಯ ಬೆಂಗಳೂರಿನ ಹೊರ ವಲಯದಲ್ಲಿ ಒಂದು ಹಂತದಲ್ಲಿ 5000 ಗಿಡಗಳಂತೆ ಒಟ್ಟು 4 ಹಂತಗಳಲ್ಲಿ 20000 ಸಾವಿರ ಗಿಡಗಳನ್ನು ನೆಟ್ಟು ಪೋಷಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮುಂದಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications