Namma Metro Yellow Line: ಜನವರಿ 6ರಿಂದ ನಮ್ಮ ಮೆಟ್ರೋ ಹಳದಿ ಮಾರ್ಗ ಆರಂಭ? ಸ್ಪಷ್ಟನೆ ಕೊಟ್ಟ ಬಿಎಂಆರ್​​ಸಿಎಲ್

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಯಾವಾಗ ಆರಂಭವಾಗುತ್ತದೋ ಎಂದು ಬೆಂಗಳೂರು ಮಂದಿ ಹಲವು ವರ್ಷಗಳಿಂದ ಕಾಯುತ್ತಿದ್ದಾರೆ. ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಮಾರ್ಗದ ಕಾಮಗಾರಿ ಮುಗಿದು ಹಲವು ತಿಂಗಳು ಕಳೆದರೂ ಇನ್ನೂ ಮೆಟ್ರೋ ಸಂಚಾರ ಆರಂಭವಾಗಿಲ್ಲ, ಜನವರಿ 6 ರಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗುತ್ತದೆ ಎನ್ನುವ ಸುದ್ದಿ ಹರಿದಾಡಿತ್ತು ಈ ಬಗ್ಗೆ ಈಗ ಬಿಎಂಆರ್ ಸಿಎಲ್ ಸ್ಪಷ್ಟನೆ ನೀಡಿದೆ.

ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಎಂಆರ್​​ಸಿಎಲ್, ಈ ಮಾಹಿತಿ ಸುಳ್ಳು ಎಂದು ಹೇಳಿದೆ. ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಈಗ ಹರಿದಾಡುತ್ತಿರುವ ವದಂತಿಗಳು ಸುಳ್ಳು ಎಂದು ಹೇಳಿದೆ.

Namma metro yellow line not open form january 6

"ಜನವರಿ 6, 2025 ರಂದು ಹಳದಿ ಮಾರ್ಗವಾದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾರ್ವಜನಿಕರ ಸೇವೆಗೆ ಮೆಟ್ರೋ ರೈಲು ಆರಂಭಗೊಳ್ಳಲಿದೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದೆ. ನಿಜವಾದ ಸಂಗತಿಯೇನೆಂದರೆ, ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಕೋಲ್ಕತ್ತಾದ ಟಿಟಗಾರ್ ರೆೈಲು ಸಂಸ್ಥೆಯ ಕಾರ್ಖಾನೆಯಲ್ಲಿ ಮೊದಲ ರೆೈಲು ಸೆಟ್ ದಿನಾಂಕ 6 ಜನವರಿ 2025 ರಂದು ಅನಾವರಣಗೊಳ್ಳುತ್ತಿದೆ." ಎಂದು ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಮೆಟ್ರೋ ಸಂಚಾರ ಯಾವಾಗ?

ಎಲ್ಲವೂ ನಿರಿಕ್ಷೆಯಂತೆ ಆಗಿದ್ದ 2024ರ ಡಿಸೆಂಬರ್ ತಿಂಗಳಿನಲ್ಲೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಬೇಕಿತ್ತು. ಕಾಮಗಾರಿ ಎಲ್ಲಾ ಮುಗಿದಿದ್ದರೂ ಇನ್ನೂ ಚಾಲಕ ರಹಿತ ಮೆಟ್ರೋ ರೈಲುಗಳು ಪೂರೈಕೆಯಾಗದ ಕಾರಣ ಮೆಟ್ರೋ ಸಂಚಾರ ಮತ್ತಷ್ಟು ವಿಳಂಬವಾಗುತ್ತಿದೆ. ಚೀನಾದಿಂದ ಒಂದು ಸೆಟ್ ಚಾಲಕ ರಹಿತ ಮೆಟ್ರೋ ರೈಲು ಬಂದಿದ್ದು ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ರೈಲು ಸಂಚಾರ ವಿಳಂಬಕ್ಕೆ ಬೇಸರ ವ್ಯಕ್ತಪಡಿಸಿದ್ದರು. ತಮ್ಮ ಸುದೀರ್ಘ ಎಕ್ಸ್ ಪೋಸ್ಟ್‌ನಲ್ಲಿ ಅವರು, "ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆ ಪ್ರಾರಂಭವು ಬಿಎಂಆರ್ ಸಿಎಲ್ ನೀಡಿದ ಎಲ್ಲಾ ಗಡುವು ಪೂರೈಸುವಲ್ಲಿ ವಿಫಲವಾಗಿದೆ. ನಮಗೆ ಇದು ನಿರಾಸೆ ತಂದಿದೆ, ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಮುಖ್ಯ ಕಾರಣವಾಗಿದೆ.

ಕಳೆದ ಕೆಲವು ತಿಂಗಳಿನಿಂದ ರೈಲು ಉತ್ಪಾದನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ನಾನು ರೈಲು ತಯಾರಕರಾದ ಟಿಟಾಗರ್ ರೈಲ್ ಸಿಸ್ಟಮ್ಸ್ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಎಂಜಿನಿಯರ್‌ಗಳಿಗೆ ವೀಸಾ ಸೇರಿದಂತೆ ಹಲವು ರಸ್ತೆ ತಡೆಗಳನ್ನು ಪರಿಹರಿಸಲಾಗಿದೆ. ಜನವರಿ 6 ರಂದು ಬೆಂಗಳೂರಿಗೆ ಕಳುಹಿಸಲು ಮೊದಲ ರೈಲು ಸಿದ್ಧವಾಗಿದೆ. ಜನವರಿ ಅಂತ್ಯ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಎರಡನೇ ರೈಲನ್ನು ಮತ್ತು ಏಪ್ರಿಲ್‌ನಲ್ಲಿ ಮೂರನೇ ರೈಲನ್ನು ತಲುಪಿಸಲಿದೆ. ತಿಂಗಳಿಗೆ ಒಂದು ರೈಲು ಪೂರೈಕೆ ಮಾಡುತ್ತಾರೆ. ಸೆಪ್ಟೆಂಬರ್ ವೇಳೆಗೆ ತಿಂಗಳಿಗೆ ಎರಡು ರೈಲು ಪೂರೈಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಸಾಧ್ಯವಾದಷ್ಟು ಬೇಗನೆ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+