Bengaluru Metro: ಭಾನುವಾರ ಬೆಳಗ್ಗೆ ಈ 3 ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್, ಜನರ ನಿಷೇಧ

ಬೆಂಗಳೂರು, ಆಗಸ್ಟ್ 09: ಬೆಂಗಳೂರಿಗರಿಗೆ ಬಿಎಂಟಿಸಿ ಬಿಟ್ಟರೆ ನಮ್ಮ ಮೆಟ್ರೋ ಸಾರಿಗೆಯನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಭಾನುವಾರ ಬೆಳಗ್ಗೆ ಮೆಟ್ರೋದ ವಿವಿಧ ಮೂರು ನಿಲ್ದಾಣಗಳು ತಾತ್ಕಲಿಕವಾಗಿ ಬಂದ್ ಆಗಲಿವೆ. ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಇದನ್ನು ಗಮನಿಸಿ ಪ್ರಯಾಣ ಆಯೋಜಿಸಿಕೊಳ್ಳುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ (10.08.2025) ಆಗಮಿಸಲಿದ್ದಾರೆ. ಅವರು ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೊಳಿಸಿ, ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಆರಂಭಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ಮೂರು ಹೊಸ ವಂದೇ ಭಾರತ್ ರೈಲು ಕಾರ್ಯಾಚರಣೆಗೂ ಗ್ರಿನ್ ಸಿಗ್ನಲ್ ತೋರಿಸಲಿದ್ದಾರೆ. ಈ ಸಂಬಂಧ ಕೆಲವೆಡೆ ನಗರ ರಸ್ತೆಗಳನ್ನು ತಾತ್ಕಲಿಕವಾಗಿ ನಿಷೇಧಿಸಲಾಗಿದೆ. ಇದೀಗ ಈ ಮೂರು ಮೆಟ್ರೋ ನಿಲ್ದಾನಗಳನ್ನು ತಾತ್ಕಲಿಕವಾಗಿ ಮುಚ್ಚಲಾಗುತ್ತಿದೆ.

Namma Metro s Southend Circle Jayangar and RV Road Metro Stations Will close Due to PM Modi Visit

ಬೆಂಗಳೂರಿನ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣಗಳ ತಾತ್ಕಾಲಿಕವಾಗಿ ಮುಚ್ಚಲಾಗುತ್ತದೆ. ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಕೋರಿಕೆಯ ಮೇರೆಗೆ, ಪ್ರಧಾನ ಮಂತ್ರಿಗಳ ರಸ್ತೆ ಸಂಚಾರದ ಕಾರಣದಿಂದ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆರ್ ವಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಮ್ಮ ಮೆಟ್ರೋ ಪ್ರಯಾಣಿಕರು ಈ ತಾತ್ಕಾಲಿಕ ಮುಚ್ಚುವಿಕೆಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಸುವಂತೆ ಕೋರಲಾಗಿದೆ. ಉಂಟಾದ ಅನಾನುಕೂಲತೆಗೆ ನಾವು ವಿಷಾಧಿಸುತ್ತೇವೆ ಹಾಗೂ ಸಾರ್ವಜನಿಕರ ಸಹಕಾರವನ್ನು ಕೋರುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಮ್ಮ ಮೆಟ್ರೋ ಹಳದಿ ಮಾರ್ಗ

ಆರ್‌ವಿ ರಸ್ತೆ-ಬೊಮ್ಮಸಂದ್ರ ವರೆಗಿನ ಈ ಹಳದಿ ಮಾರ್ಗದ 19 ಕಿಲೋ ಮೀಟರ್ ಸಾರ್ವಜನಿಕರಿಗೆ ಮುಕ್ತವಾದರೆ ಬೆಂಗಳೂರು ಮೆಟ್ರೋ ಜಾಲ ಒಟ್ಟು 96 ಕಿಲೋ ಮೀಟರ್‌ಗೆ ಹೆಚ್ಚಾಗುತ್ತದೆ. ನಾಲ್ಕು ದಿಕ್ಕುಗಳಿಗೆ ಮೆಟ್ರೋ ಮತ್ತಷ್ಟು ವಿಸ್ತರಣೆ ಆದಂತಾಗುತ್ತದೆ. ಸದ್ಯ ಮೆಟ್ರೋ ದೈನಂದಿನ ಪ್ರಯಾಣಿಕರ ಸಂಖ್ಯೆ 7 ಲಕ್ಷ ಆಸು ಪಾಸು ಇದ್ದು, ಅದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+